ರಾಜ್ಯ

ನರೇಗಾ ಅನುಷ್ಠಾನದಲ್ಲಿ ಕರ್ನಾಟಕ ದೇಶಕ್ಕೆ ಮಾದರಿ: ಕೆ.ಎಸ್. ಈಶ್ವರಪ್ಪ

Nagaraja AB

ಬಳ್ಳಾರಿ : ಮಹಾತ್ಮ ಗಾಂಧಿ ರಾಷ್ಟ್ರೀಯ ಉದ್ಯೋಗ ಖಾತ್ರಿ ಯೋಜನೆಯಡಿ ಕಳೆದ ವರ್ಷ 15 ಕೋಟಿ ಮಾನವ ದಿನಗಳನ್ನು ಸೃಜನೆ ಮಾಡುವ ಮೂಲಕ ನರೇಗಾ ಪರಿಣಾಮಕಾರಿ ಅನುಷ್ಠಾನದಲ್ಲಿ ರಾಜ್ಯ ಇಡೀ ದೇಶಕ್ಕೆ ಮಾದರಿಯಾಗಿದೆ ಎಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯ ಸಚಿವ ಕೆ.ಎಸ್.ಈಶ್ವರಪ್ಪ ತಿಳಿಸಿದ್ದಾರೆ. 

ನಗರದ ಜಿಲ್ಲಾ ಪಂಚಾಯಿತಿ ಕಚೇರಿ ಸಭಾಂಗಣದಲ್ಲಿ ಭಾನುವಾರ ಹಮ್ಮಿಕೊಂಡಿದ್ದ ಸುದ್ದಿ ಗೋಷ್ಠಿಯಲ್ಲಿಮಾತನಾಡಿದ  ಅವರು, ಕಳೆದ ವರ್ಷ 13 ಕೋಟಿ ಮಾನವ ದಿನಗಳ ಸೃಜನೆ ಮಾಡಲು ಗುರಿ ನಿಗದಿ ಪಡಿಸಲಾಗಿತ್ತು. ಗುರಿಗೂ ಮೀರಿ 15ಕೋಟಿ ಮಾನವ ದಿನಗಳನ್ನು ಸೃಜನೆ ಮಾಡಿ, ಇಡೀ ದೇಶದಲ್ಲಿ ಅತಿ ಹೆಚ್ಚು ಮಾನವ ದಿನಗಳ ಸೃಜನೆ ಮಾಡಿದ ರಾಜ್ಯವಾಗಿ ಕರ್ನಾಟಕ ರಾಜ್ಯ ಗುರುತಿಸಿಕೊಂಡಿದೆ ಎಂದು ಅವರು ಸಂತಸ ವ್ಯಕ್ತಪಡಿಸಿದರು.

ಪ್ರಸಕ್ತ ವರ್ಷಕ್ಕೆ 13 ಕೋಟಿ ಮಾನವ ದಿನ ನಿಗದಿಪಡಿಸಿದ್ದು, ಸೆ. 11ಕ್ಕೆ 9 ಕೋಟಿ ಗುರಿ ಸಾಧಿಸಿದ್ದೇವೆ. ಈ ವರ್ಷವೂ ಕೂಡ ಅತಿ ಹೆಚ್ಚು ಮಾನವ ದಿನಗಳನ್ನು ಸೃಜನೆ ಮಾಡಿ ದೇಶಕ್ಕೆ ಮಾದರಿಯಾಗುವ ವಿಶ್ವಾಸವಿದೆ ಎಂದು ಅವರು ತಿಳಿಸಿದರು.
 

SCROLL FOR NEXT