ಮಂಗಳೂರು: ಹೊಯ್ಗೆ ಬಜಾರ್ ಸಮುದ್ರ ದಡದಲ್ಲಿ ಅಪರಿಚಿತ ಯುವತಿಯ ಮೃತದೇಹ ಪತ್ತೆ
ನಗರದ ಹೊಯ್ಗೆ ಬಜಾರ್ನ ಸಮುದ್ರದ ದಡದಲ್ಲಿ ಮೃತಪಟ್ಟ ಸ್ಥಿತಿಯಲ್ಲಿ ಅಪರಿಚಿತ ಯುವತಿಯ ಮೃತದೇಹ ಭಾನುವಾರ ಬೆಳಗ್ಗೆ ಪತ್ತೆಯಾಗಿದೆ.
ಮಂಗಳೂರು: ನಗರದ ಹೊಯ್ಗೆ ಬಜಾರ್ನ ಸಮುದ್ರದ ದಡದಲ್ಲಿ ಮೃತಪಟ್ಟ ಸ್ಥಿತಿಯಲ್ಲಿ ಅಪರಿಚಿತ ಯುವತಿಯ ಮೃತದೇಹ ಭಾನುವಾರ ಬೆಳಗ್ಗೆ ಪತ್ತೆಯಾಗಿದೆ.
ಮೃತ ಯುವತಿಯು ಸುಮಾರು 5 ಅಡಿ ಎತ್ತರವಿದ್ದು, ಕಪ್ಪು ಬಣ್ಣದ ಟೀ-ಶರ್ಟ್, ನೀಲಿ ಜೀನ್ಸ್ ಪ್ಯಾಂಟ್ ಧರಿಸಿದ್ದಾರೆ. ಒಂದು ಕೈಯಲ್ಲಿ ಕೆಂಪು ದಾರ ಮತ್ತು ಕಪ್ಪು ಬಳೆ ಹಾಕಿಕೊಂಡಿದ್ದು, ಉದ್ದ ಕೂದಲು ಹೊಂದಿದ್ದಾರೆಂದು ತಿಳಿದುಬಂದಿದೆ.
ಮೃತದೇಹದ ಮೇಲೆ ಯಾವುದೇ ಗಾಯಗೊಂಡ ಕಲೆಗಳು ಮೇಲ್ನೋಟಕ್ಕೆ ಕಂಡು ಬಂದಿಲ್ಲ ಎಂದು ಪೊಲೀಸರು ಮಾಹಿತಿ ನೀಡಿದ್ದು, ಈ ಸಂಬಂಧ ಮಂಗಳೂರು ದಕ್ಷಿಣ ಠಾಣೆಯಲ್ಲಿ ಅಸ್ವಾಭಾವಿಕ ಸಾವು ಪ್ರಕರಣ ದಾಖಲಾಗಿದೆ.
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.