ರಾಜ್ಯ

ರಾಜ್ಯದಲ್ಲಿ ಕೊರೋನಾ ಮತ್ತಷ್ಟು ಇಳಿಮುಖ: ಇಂದು 673 ಪ್ರಕರಣ ಪತ್ತೆ; 13 ಸಾವು; 10 ಜಿಲ್ಲೆಗಳಲ್ಲಿ ಪ್ರಕರಣ 'ಶೂನ್ಯ'!

Vishwanath S

ಬೆಂಗಳೂರು: ರಾಜ್ಯದಲ್ಲಿ ಕೊರೋನಾ ಎರಡನೇ ಅಲೆ ಇಳಿಕೆಯಾಗುತ್ತಿದ್ದು ಕಳೆದ 24 ಗಂಟೆಯಲ್ಲಿ 673 ಕೊರೋನಾ ಪ್ರಕರಣಗಳು ವರದಿಯಾಗಿದೆ. ಇದರೊಂದಿಗೆ ಸೋಂಕಿತರ ಸಂಖ್ಯೆ 29,62,408ಕ್ಕೆ ಏರಿಕೆಯಾಗಿದೆ.

ಮಹಾಮಾರಿಗೆ ಇಂದು 13 ಮಂದಿ ಬಲಿಯಾಗಿದ್ದಾರೆ. ಇದರೊಂದಿಗೆ ಸಾವಿನ ಸಂಖ್ಯೆ 37,517ಕ್ಕೆ ಏರಿಕೆಯಾಗಿದೆ ಎಂದು ಆರೋಗ್ಯ ಸಚಿವಾಲಯ ಮಾಹಿತಿ ನೀಡಿದೆ.

ಬೆಂಗಳೂರಿನಲ್ಲಿ ಇಂದು 214 ಮಂದಿಗೆ ಸೋಂಕು ದೃಢಪಟ್ಟಿದ್ದು, ಇದರೊಂದಿಗೆ ನಗರದಲ್ಲಿ ಸೋಂಕಿತರ ಸಂಖ್ಯೆ 12,41,639ಕ್ಕೆ ಏರಿಕೆಯಾಗಿದೆ. ಇಂದು ನಗರದಲ್ಲಿ 3 ಮಂದಿ ಸಾವನ್ನಪ್ಪಿದ್ದಾರೆ.

ರಾಜ್ಯದಲ್ಲಿ ಇಂದು 1,074 ಸೋಂಕಿತರು ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. ಇದರೊಂದಿಗೆ ಸೋಂಕಿನಿಂದ ಚೇತರಿಸಿಕೊಂಡವರ ಸಂಖ್ಯೆ 29,08,622ಕ್ಕೆ ಏರಿಕೆಯಾಗಿದೆ. ಇನ್ನು16,241 ಸಕ್ರೀಯ ಪ್ರಕರಣಗಳಿವೆ. 

ರಾಜ್ಯಾದ್ಯಂತ ಇಂದು 1,19,014 ಕೋವಿಡ್ ಟೆಸ್ಟ್ ನಡೆಸಲಾಗಿದ್ದು, 673 ಪಾಸಿಟಿವ್ ಪ್ರಕರಣಗಳು ಪತ್ತೆಯಾಗಿವೆ. ಇದರೊಂದಿಗೆ ರಾಜ್ಯದಲ್ಲಿ ಪಾಸಿಟಿವಿಟಿ ದರ ಶೇ. 0.56ಕ್ಕೆ ಇಳಿದಿದೆ.

ರಾಜ್ಯದ ನಾಲ್ಕು ಜಿಲ್ಲೆಗಳಾದ ಬಾಗಲಕೋಟೆ, ಬೆಳಗಾವಿ, ಬೀದರ್, ಧಾರವಾಡ, ಗದಗ, ಹಾವೇರಿ, ಕಲಬುರಗಿ, ರಾಯಚೂರು, ವಿಜಯಪುರ ಮತ್ತು ಯಾದಗಿರಿ ಜಿಲ್ಲೆಗಳಲ್ಲಿ ಶೂನ್ಯ ಪ್ರಕರಣ ವರದಿಯಾಗಿದೆ. 

SCROLL FOR NEXT