ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ರಾಜ್ಯ

ಹುಬ್ಬಳ್ಳಿ: ಪಬ್ ನಲ್ಲಿ ರೇಡಿಯೋ ಜಾಕಿಯ ಸ್ನೇಹಿತರಿಂದ ಗಲಾಟೆ

ಕುಡಿದ ಅಮಲಿನಲ್ಲಿ ರೇಡಿಯೋ ಜಾಕಿಯ ಸ್ನೇಹಿತರು ಗಲಾಟೆ ಮಾಡಿಕೊಂಡಿರುವ ಘಟನೆ ನಗರದ ಗೋಕುಲ ರಸ್ತೆಯಲ್ಲಿರುವ ಐಸ್ ಕ್ಯೂಬ್ ಪಬ್ ನಲ್ಲಿ ನಡೆದಿದೆ.

ಐಸ್ ಕ್ಯೂಬ್ ಪಬ್
Nagaraja AB
Updated On : 13 Sept 2021, 5:07 pm

ಹುಬ್ಬಳ್ಳಿ: ಕುಡಿದ ಅಮಲಿನಲ್ಲಿ ರೇಡಿಯೋ ಜಾಕಿಯ ಸ್ನೇಹಿತರು ಗಲಾಟೆ ಮಾಡಿಕೊಂಡಿರುವ ಘಟನೆ ನಗರದ ಗೋಕುಲ ರಸ್ತೆಯಲ್ಲಿರುವ ಐಸ್ ಕ್ಯೂಬ್ ಪಬ್ ನಲ್ಲಿ ನಡೆದಿದೆ.

ಆರ್​ಜೆ ಮೇಘಾ ಮತ್ತು ಆಕೆಯ ಸ್ನೇಹಿತರಾದ ಪ್ರವೀಣ, ಕೃತಿಕಾ, ಹರ್ಷ, ಶ್ರೀನಿವಾಸ, ಶರಣ್ಯ, ಶೈಲೇಶ್ ಎಂಬುವವರು ಭಾನುವಾರ ರಾತ್ರಿ ಐಸ್ ಕ್ಯೂ ಪಬ್​ಗೆ ತೆರಳಿದ್ದರು. ಈ ವೇಳೆ ಪ್ಲೇಟ್​ನಲ್ಲಿ ಸಾಸ್​ ಹಾಕಿದ ವಿಚಾರಕ್ಕೆ ಸ್ನೇಹಿತರ ನಡುವೆ ಜಗಳ ಶುರುವಾಗಿದೆ. ಜಗಳ ತಾರಕ್ಕೇರಿದ್ದು ಕುಡಿದ ನಶೆಯಲ್ಲಿ ಬಾಟಲಿ ತೂರಾಡಿ ಗಲಾಟೆ ಮಾಡಿಕೊಂಡಿದ್ದಾರೆ.

ಗಲಾಟೆಯಲ್ಲಿ ಪ್ರವೀಣ್​​ ಸೇರಿ ಆರ್ ಜೆ ಮೇಘಾ ಗಾಯಗೊಂಡಿದ್ದಾರೆ. ಹುಬ್ಬಳ್ಳಿಯ ಗೋಕುಲ ರೋಡ್ ಪೊಲೀಸ್ ಠಾಣೆಯಲ್ಲಿ ದೂರು-ಪ್ರತಿದೂರು ದಾಖಲಾಗಿವೆ.

Advertisement

Advertisement

ಘಟನೆ ಸಮಯದ ಸಿಸಿಟಿವಿ ಕ್ಯಾಮೆರಾದ ದೃಶ್ಯಾವಳಿ ಒದಗಿಸುವಂತೆ ಪಬ್ ಮಾಲೀಕರಿಗೆ ಪೊಲೀಸರು ಸೂಚನೆ ನೀಡಿದ್ದಾರೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement