ಅಪಘಾತ ದೃಶ್ಯ 
ರಾಜ್ಯ

ಬೆಂಗಳೂರು: ಬೈಕ್-ಕಾರು ನಡುವೆ ಭೀಕರ ಅಪಘಾತ; ಎಲೆಕ್ಟ್ರಾನಿಕ್ ಸಿಟಿ ಫ್ಲೈಓವರ್ ನಿಂದ ಬಿದ್ದು ಯುವಕ-ಯುವತಿ ಸಾವು

ನಗರದ ಎಲೆಕ್ಟ್ರಾನಿಕ್ ಸಿಟಿ ಫ್ಲೈಓವರ್ ಮೇಲೆ ಬೈಕ್ ಮತ್ತು ಕಾರಿನ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಇಬ್ಬರು ಫ್ಲೈಓವರ್ ಮೇಲಿನಿಂದ ಬಿದ್ದು ಸಾವನ್ನಪ್ಪಿರುವ ದುರ್ಘಟನೆ ಸಂಭವಿಸಿದೆ. 

ಬೆಂಗಳೂರು: ನಗರದ ಎಲೆಕ್ಟ್ರಾನಿಕ್ ಸಿಟಿ ಫ್ಲೈಓವರ್ ಮೇಲೆ ಬೈಕ್ ಮತ್ತು ಕಾರಿನ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಇಬ್ಬರು ಫ್ಲೈಓವರ್ ಮೇಲಿನಿಂದ ಬಿದ್ದು ಸಾವನ್ನಪ್ಪಿರುವ ದುರ್ಘಟನೆ ಸಂಭವಿಸಿದೆ. 

ಅಪಘಾತದ ರಭಸಕ್ಕೆ ಫ್ಲೈಓವರ್ ಮೇಲಿಂದ ಬಿದ್ದು ಯುವಕ-ಯುವತಿ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಓವರ್ ಟೇಕ್ ಮಾಡುವ ರಭಸದಲ್ಲಿ ಕಾರು ಬೈಕ್ ಗೆ ಡಿಕ್ಕಿ ಹೊಡೆದಿದ್ದರಿಂದ ಯುವತಿಯರು ಫ್ಲೈಓವರ್ ನಿಂದ ಕೆಳಗೆ ಬಿದ್ದಿದ್ದಾರೆ.

ಇನ್ನು ಅಪಘಾತದಲ್ಲಿ ಕಾರು ಸಹ ಜಕಂಗೊಂಡಿದ್ದು ಫೈಓವರ್ ನ ತುದಿಗೆ ಬಂದು ನಿಂತಿದೆ. ಇನ್ನು ಸ್ವಲ್ಪ ವಾಲಿದ್ದರೂ ಕಾರು ಸಹ ಫ್ಲೈಓವರ್ ಮೇಲಿನಿಂದ ಕೆಳಗೆ ಬೀಳುವ ಸಂಭವವಿತ್ತು. 

ಸದ್ಯ ಪರಪ್ಪನ ಅಗ್ರಹಾರ ಠಾಣೆಯ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ರಾಹುಲ್, ಪ್ರಿಯಾಂಕಾ ಗಾಂಧಿಯನ್ನು ಎಳೆದೊಯ್ದು ವಶಕ್ಕೆ ಪಡೆದ ಪೊಲೀಸರು; ಬಸ್‌ನ ಟೈರ್ ಪಂಕ್ಚರ್ ಮಾಡಿದ ಕಾರ್ಯಕರ್ತರು

ರಾಜ್ಯದಲ್ಲಿ ಶೇ. 90ರಷ್ಟು ಬೆಳೆ ಹಾನಿ: ಪರಿಸ್ಥಿತಿ ಗಂಭೀರ - DCM ಪರಮೇಶ್ವರ

'ನನ್ನ ವಿರುದ್ಧ 100 ಎಫ್‌ಐಆರ್‌ ದಾಖಲಿಸಿ ಹೆದರಲ್ಲ, ಪ್ರತಿಯೊಂದೂ ನನಗೆ ಪದಕ': ರಾಹುಲ್ ಗಾಂಧಿ

CM ಆಗಲು ಸಿದ್ದರಾಮಯ್ಯ ವಿರುದ್ಧ ಡಿಕೆಶಿ ಸ್ಟಿಂಗ್ ಆಪರೇಷನ್; ಈಗ ಸಚಿವರ ವಿರುದ್ಧವೂ ಅದೇ ತಂತ್ರ: ಕುಮಾರಸ್ವಾಮಿ ಗಂಭೀರ ಆರೋಪ

ಕಾರ್ಮಿಕರ ಆರೋಗ್ಯ ತಪಾಸಣೆ ಹೆಸರಲ್ಲಿ 800 ಕೋಟಿ ರೂ. ಲೂಟಿ; ಸಂತೋಷ್ ಲಾಡ್ ರಾಜೀನಾಮೆಗೆ ಆರಗ ಜ್ಞಾನೇಂದ್ರ ಆಗ್ರಹ