ಪ್ರಶಾಂತ್ ಸಂಬರಗಿ-ಚಂದ್ರಚೂಡ್ 
ರಾಜ್ಯ

ಪ್ರಶಾಂತ್ ಸಂಬರಗಿ ವಿರುದ್ಧ ತಿರುಗಿ ಬಿದ್ದಿದ್ದೇಕೆ ಚಕ್ರವರ್ತಿ ಚಂದ್ರಚೂಡ್; ಪೊಲೀಸ್ ಆಯುಕ್ತರಿಗೆ ಕೊಟ್ಟ ದೂರಿನಲ್ಲಿ ಏನಿದೆ?

ಸಾಮಾಜಿಕ ಕಾರ್ಯಕರ್ತ ಪ್ರಶಾಂತ್ ಸಂಬರಗಿ ವಿರುದ್ಧ ಕನ್ನಡ ಬಿಗ್ ಬಾಸ್ ಸೀಸನ್ 8ರ ಸ್ಪರ್ಧಿ ಚಕ್ರವರ್ತಿ ಚಂದ್ರಚೂಡ್ ನಗರ ಪೊಲೀಸ್ ಆಯುಕ್ತ ಕಮಲ್ ಪಂತ್ ಅವರಿಗೆ ದೂರು ನೀಡಿದ್ದಾರೆ.

ಬೆಂಗಳೂರು: ಸಾಮಾಜಿಕ ಕಾರ್ಯಕರ್ತ ಪ್ರಶಾಂತ್ ಸಂಬರಗಿ ವಿರುದ್ಧ ಕನ್ನಡ ಬಿಗ್ ಬಾಸ್ ಸೀಸನ್ 8ರ ಸ್ಪರ್ಧಿ ಚಕ್ರವರ್ತಿ ಚಂದ್ರಚೂಡ್ ನಗರ ಪೊಲೀಸ್ ಆಯುಕ್ತ ಕಮಲ್ ಪಂತ್ ಅವರಿಗೆ ದೂರು ನೀಡಿದ್ದಾರೆ.

ಸಿನಿಮಾ ನಟ- ನಟಿಯರು ಹಾಗೂ ರಾಜಕೀಯ ನಾಯಕರನ್ನು ಟಾರ್ಗೆಟ್ ಮಾಡಿ ಅವರ ಮೇಲೆ ಸುಳ್ಳು ಆರೋಪ ಮಾಡುತ್ತಿರುವ ಪ್ರಶಾಂತ್ ಸಂಬರಗಿ ವಿರುದ್ಧ ಕ್ರಮ ಕೈಗೊಳ್ಳುವಂತೆ ಚಕ್ರವರ್ತಿ ಅವರು ದೂರಿನಲ್ಲಿ ಉಲ್ಲೇಖಿಸಿದ್ದಾರೆ.

ಯಾವುದೇ ಆಧಾರ ಇಲ್ಲವೇ ನಟ- ನಟಿಯರನ್ನು ಪ್ರಶಾಂತ್ ಸಂಬರಗಿ ಟಾರ್ಗೆಟ್ ಮಾಡುತ್ತಿದ್ದಾರೆ. 3 ವರ್ಷಗಳ ಹಿಂದೆ ಮೀಟೂ ಪ್ರಕರಣದಲ್ಲಿ ಗಾಳಿಯಲ್ಲಿ ಗುಂಡು ಹೊಡೆದಿದ್ದರು. ಅಲ್ಲದೇ, ನಟಿ ಶೃತಿ ಹರಿಹರನ್ ಗೆ ಕ್ರೈಸ್ತ ಮಿಷನರಿಯಿಂದ ಕೋಟ್ಯಾಂತರ ಹಣ ಸಂದಾಯವಾಗಿದೆ ಎಂದು ಹೇಳಿದ್ದರು. ಆದರೆ, ಈ ಕುರಿತು ಯಾವುದೇ ದಾಖಲೆ ಬಿಡುಗಡೆಗೊಳಿಸಿಲ್ಲ ಎಂದು ಅವರು ಆರೋಪಿಸಿದ್ದಾರೆ.

ಜಮೀರ್ ಅಹ್ಮದ್ ತೆರಿಗೆ ಹಣದಲ್ಲಿ ಶ್ರೀಲಂಕಾ ಕ್ಯಾಸಿನೋಗೆ ಹೋಗಿ ಮೋಜು, ಮಸ್ತಿ ಮಾಡಿದ್ದಾರೆ ಎಂದು ದೂರು ನೀಡಿದ್ದರು. ಅದಕ್ಕೂ ದಾಖಲೆ ನೀಡದೇ ಬ್ಲಾಕ್​ಮೇಲ್​ ಮಾಡಿದ್ದರು. ಡ್ರಗ್ಸ್ ಪ್ರಕರಣದಲ್ಲಿ ನಟಿಯರು ಡ್ರಗ್ಸ್​ನಿಂದಲೇ ಹಣ ಸಂಪಾದನೆ ಮಾಡುತ್ತಿದ್ದಾರೆ. ಅದರ ಮೂಲ ಗೊತ್ತು ಎಂದಿದ್ದರು. ಈ ಬಗ್ಗೆಯೂ ದಾಖಲೆ ನೀಡಿಲ್ಲ. ಇದರಿಂದ ಕನ್ನಡ ಚಿತ್ರರಂಗದ ಮಾನವನ್ನು ದೇಶದಾದ್ಯಂತ ಹರಾಜು ಹಾಕಿದ ಹಾಗಾಗಿದೆ. ಇದುವರೆಗೂ ಮಾಧ್ಯಮದ ಮುಂದೆ ಹೇಳಿದ ಹೇಳಿಕೆಗೆ ದಾಖಲೆಗಳನ್ನು ನೀಡಿಲ್ಲ ಎಂದು ಅವರು ದೂರಿದ್ದಾರೆ.

ನಟಿ, ಕಿರುತೆರೆ ನಿರೂಪಕಿ ಅನುಶ್ರೀ ಕೊಟ್ಯಾಂತರ ರೂಪಾಯಿ ಮೌಲ್ಯದ ಮನೆ ಕಟ್ಟಿದ್ದಾರೆ ಎಂದು ಹೇಳಿದ್ದರು. ಈ ಬಗ್ಗೆಯೂ ದಾಖಲೆ ಕೊಟ್ಟಿಲ್ಲ. ಶುಗರ್ ಡ್ಯಾಡಿ ಬಗ್ಗೆಯೂ ದಾಖಲೆಗಳನ್ನು ಯಾವೊಬ್ಬ ಅಧಿಕಾರಿಗಳಿಗೂ ನೀಡಿಲ್ಲ. ಈ ಎಲ್ಲಾ ಪ್ರಕರಣ ಗಮನಿಸಿದಾಗ ಪ್ರಶಾಂತ್​ ಸಂಬರಗಿ ಬ್ಲಾಕ್​ಮೇಲ್​ ದಂಧೆಯಲ್ಲಿ ತೊಡಗಿದ್ದಾರೆಂದು ಅನುಮಾನವಿದೆ. ಈ ಕಾರಣಕ್ಕೆ ಕೂಡಲೇ ಅವರ ವಿರುದ್ಧ ಕ್ರಮ ಕೈಗೊಳ್ಳುವಂತೆ ಅವರು ದೂರು ನೀಡಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಜಮ್ಮುವಿನಾದ್ಯಂತ ಭಾರಿ ಮಳೆ: ಅಪಾರ ಪ್ರಮಾಣದ ಹಾನಿ, 10 ಮಂದಿ ಸಾವು: ಕೊಚ್ಚಿ ಹೋದ ರಸ್ತೆ, ಸೇತುವೆಗಳು!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಡಿಕೆಶಿ ಕ್ಷಮೆ ಕೇಳಬಾರದಿತ್ತು; ಮುಲಾಜಿಲ್ಲದೆ ಕಾಂಗ್ರೆಸ್ ಪಕ್ಷದ ಸದಸ್ಯತ್ವಕ್ಕೆ ರಾಜೀನಾಮೆ ಬಿಸಾಕಬೇಕಿತ್ತು- ಆರ್. ಅಶೋಕ್

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

SCROLL FOR NEXT