ಬಿಸಿ ನಾಗೇಶ್ 
ರಾಜ್ಯ

ಪಠ್ಯವಾಗಿ ಡಾ. ವಿಷ್ಣುವರ್ಧನ್: ಸಚಿವ ಬಿ.ಸಿ. ನಾಗೇಶ್ ಭರವಸೆ

ಡಾ. ವಿಷ್ಣುವರ್ಧನ್ ಅವರ 71ನೇ ಜನ್ಮದಿನದ ಅಂಗವಾಗಿ ಡಾ.ವಿಷ್ಣುಸೇನಾ ಸಮಿತಿಯು 'ಕರುನಾಡ ಯಜಮಾನ ಡಾ.ವಿಷ್ಣುವರ್ಧನ್’ ಎಂಬ ಕಿರುಹೊತ್ತಿಗೆಯನ್ನು ಶಾಲಾ ಮಕ್ಕಳಿಗೆ ಉಚಿತವಾಗಿ ವಿತರಿಸುವ ದೃಷ್ಠಿಯಿಂದ ಹೊರತಂದಿದೆ.

ಬೆಂಗಳೂರು: ಡಾ. ವಿಷ್ಣುವರ್ಧನ್ ಅವರ 71ನೇ ಜನ್ಮದಿನದ ಅಂಗವಾಗಿ ಡಾ.ವಿಷ್ಣುಸೇನಾ ಸಮಿತಿಯು 'ಕರುನಾಡ ಯಜಮಾನ ಡಾ.ವಿಷ್ಣುವರ್ಧನ್’ ಎಂಬ ಕಿರುಹೊತ್ತಿಗೆಯನ್ನು ಶಾಲಾ ಮಕ್ಕಳಿಗೆ ಉಚಿತವಾಗಿ ವಿತರಿಸುವ ದೃಷ್ಠಿಯಿಂದ ಹೊರತಂದಿದೆ. ಸದರಿ ಕೃತಿಯನ್ನು ಕನಿಷ್ಠ ಒಂದು ಲಕ್ಷ ಮಕ್ಕಳಿಗೆ ವಿತರಿಸುವ ಗುರಿಯನ್ನು ಹೊಂದಿದೆ. 

ಶರಣು ಹುಲ್ಲೂರ್ ಅವರು ಬರೆದ ಕರುನಾಡ ಯಜಮಾನ ಡಾ.ವಿಷ್ಣುವರ್ಧನ ಎಂಬ ಕೃತಿಯನ್ನು ಸಚಿವರು ತಮ್ಮ ಕಚೇರಿಯಲ್ಲಿ ಇಂದು ಬಿಡುಗಡೆಗೊಳಿಸಿದರು.

ಸಿನಿಮಾ, ಜನಪರ ಕಾರ್ಯಗಳ ಮೂಲಕ ಡಾ.ವಿಷ್ಣುವರ್ಧನ್ ಅವರು ಯಾವತ್ತಿಗೂ ನಮ್ಮೊಂದಿಗೆ ಇರುತ್ತಾರೆ. ಅವರ ಆದರ್ಶ ಬದುಕು, ನಾಡು, ನುಡಿಯ ಬಗೆಗಿನ ಅಭಿಮಾನ ಮತ್ತು ಜೀವಪರ ಕಾಳಜಿ ನಮಗೆಲ್ಲ ಮಾದರಿಯಾಗಿದೆ. ಅವರು ಜೀವನದಲ್ಲಿ ಸಾಕಷ್ಟು ಕಷ್ಟಗಳನ್ನು ಎದುರಿಸಿದರೂ, ಕೊನೆಗೂ ಗೆದ್ದದ್ದು ಅವರ ಶ್ರಮ. ಹಾಗಾಗಿ ಮಕ್ಕಳಿಗೆ ಡಾ.ವಿಷ್ಣು ಬದುಕಿನ ಕುರಿತು ಪರಿಚಯ ಆಗಬೇಕಿದೆ. ಆ ಕಾರಣದಿಂದ ಡಾ.ವಿಷ್ಣು ಅವರ ಬದುಕು ಸಾಧನೆಗಳನ್ನು ಪಠ್ಯದಲ್ಲಿ ಸೇರಿಸಲು ಡಾ.ವಿಷ್ಣು ಸೇನಾ ಸಮಿತಿ ಮನವಿ ಮಾಡಿತು. ಇದಕ್ಕೆ ಸ್ಪಂದಿಸಿದ ಸಚಿವರು "ಪಠ್ಯಪುಸ್ತಕ ಸಮಿತಿ" ಗೆ ನಿಮ್ಮ ಮನವಿಯನ್ನು ಶಿಫಾರಸ್ಸುಗೊಳಿಸುವುದಾಗಿ ತಿಳಿಸಿದರು.

ಈ ಸಂದರ್ಭದಲ್ಲಿ ಲೇಖಕರಾದ ಡಾ. ಶರಣು ಹುಲ್ಲೂರು, ವಿಷ್ಣು ಸೇನಾ ಸಮಿತಿಯ ವೀರಕಪುತ್ರ ಶ್ರೀನಿವಾಸ, ಎಬಿವಿಪಿ ಮುಖಂಡರಾದ ಗುರುನಾಥ ರಾಜಗೀರ ಹಾಜರಿದ್ದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಹೊಸದಾಗಿ ನೇಮಕಗೊಂಡಿದ್ದ Hamas ಮಿಲಿಟರಿ ನಾಯಕನನ್ನೂ ಹೊಡೆದುರುಳಿಸಿದ Israel!

ಸಿದ್ದರಾಮಯ್ಯ 2 ಬಾರಿ ಸಿಎಂ ಆಗಿದ್ದಾರೆ; ಡಿಕೆಶಿ ಹಲವು ಮುಖ್ಯಮಂತ್ರಿಗಳ ಜತೆ ಸಚಿವರಾಗಿ ಕೆಲಸ ಮಾಡಿದ್ದಾರೆ: ಸುರ್ಜೇವಾಲ ಮಾತಿನ ಅರ್ಥವೇನು?

ಇಲ್ಲಿಂದ ತೊಲಗಿ; ಭಾರತೀಯ ದಂಪತಿಗೆ ಅಮೆರಿಕಾದಲ್ಲಿ ಜನಾಂಗೀಯ ನಿಂದನೆ

IPL 2026: SRH ವಿರುದ್ಧ RR ಗೆ 47 ರನ್ ಗಳ ಭರ್ಜರಿ ಗೆಲುವು

IPL 2026 Eliminator: ವೈಭವ್ ಸೂರ್ಯವಂಶಿ ಸ್ಫೋಟಕ ಬ್ಯಾಟಿಂಗ್, SRHಗೆ 244 ರನ್ ಬೃಹತ್ ಗುರಿ ನೀಡಿದ RR

SCROLL FOR NEXT