ರಾಜ್ಯ

ಹಾಸನ: ಶೇ.100 ರಷ್ಟು ಲಸಿಕೆ ಗುರಿ ತಲುಪಲು ಮನೆ ಬಾಗಿಲಿಗೆ ಲಸಿಕೆ ಅಭಿಯಾನ

Srinivas Rao BV

ಹಾಸನ: ಹಾಸನ ಜಿಲ್ಲಾಡಳಿತ ಶೇ.100 ರಷ್ಟು ಲಸಿಕೆ ಗುರಿ ಹೊಂದಿದ್ದು ಈ ನಿಟ್ಟಿನಲ್ಲಿ ಮನೆ ಬಾಗಿಲಿಗೆ ಲಸಿಕೆ ಅಭಿಯಾನ ಪ್ರಾರಂಭಿಸಿದೆ.

ಇದಕ್ಕಾಗಿ ಜಿಲ್ಲಾಧಿಕಾರಿ ಆರ್ ಗಿರೀಶ್ ಅವರ ನೇತೃತ್ವದಲ್ಲಿ ಆರೋಗ್ಯ ಇಲಾಖೆ ಹಿರಿಯ ನರ್ಸ್, ಆಶಾ ಕಾರ್ಯಕರ್ತರು ಹಾಗೂ ಆರೋಗ್ಯ ಸಹಾಯಕರನ್ನೊಳಗೊಂಡ ವಿಶೇಷ ತಂಡಗಳನ್ನು ರಚಿಸಲಾಗಿದೆ.

ವಿಶೇಷ ತಂಡಗಳು ಮೊದಲ ಹಂತದಲ್ಲಿ ಪ್ರತಿ ತಾಲೂಕಿನಲ್ಲೂ 100 ಗ್ರಾಮಗಳಿಗೆ ಭೇಟಿ ನೀಡಲಿದೆ. ಅಧಿಕಾರಿಗಳ ಡೇಟಾ ಪ್ರಕಾರ 1,335 ಮಂದಿ ಜಿಲ್ಲೆಯಲ್ಲಿ ಕೋವಿಡ್-19 ಕಾರಣದಿಂದ ಮೃತಪಟ್ಟಿದ್ದಾರೆ.

1.1 ಲಕ್ಷ ಮಂದಿ ಜಿಲ್ಲೆಯಲ್ಲಿ ಕೋವಿಡ್-19 ನಿಂದ ಚೇತರಿಸಿಕೊಂಡಿದ್ದು 562 ಪಾಸಿಟೀವ್ ಪ್ರಕರಣಗಳಿವೆ. ಕಳೆದ 15 ದಿನಗಳಲ್ಲಿ ತಾಲೂಕು ಮಟ್ಟದಲ್ಲಿ ಆರೋಗ್ಯ ಇಲಾಖೆ ಹೆಚ್ಚು ಲಸಿಕಾ ಕೇಂದ್ರಗಳನ್ನು ಸ್ಥಾಪಿಸಿದ್ದು ಜನತೆ ಲಸಿಕೆ ಕೇಂದ್ರಗಳಿಗೆ ತೆರಳುತ್ತಿದ್ದಂತೆಯೇ ಲಸಿಕೆ ಪಡೆದುಕೊಳ್ಳಬಹುದಾಗಿದೆ.

ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ. ಸತೀಶ್ ಅವರ ಮಾಹಿತಿಯ ಪ್ರಕಾರ, ಮನೆ ಬಾಗಿಲಿಗೆ ಲಸಿಕೆ ಅಭಿಯಾನವನ್ನು ಹಾಸನ ನಗರದ ಪ್ರದೇಶಗಳ ಬಳಿ ಇರುವ ಗ್ರಾಮಗಳಲ್ಲಿ ಪ್ರಾರಂಭಿಸಲಾಗಿದೆ. ಮುಂದಿನ 10 ದಿನಗಳಲ್ಲಿ 1 ಲಕ್ಷ ಲಸಿಕೆ ನೀಡುವ ಗುರಿ ಹೊಂದಲಾಗಿದೆ ಎಂದು ಹೇಳಿದ್ದಾರೆ. 

ದಿ ನ್ಯೂ ಇಂಡಿಯನ್ ಎಕ್ಸ್ ಪ್ರೆಸ್ ಜೊತೆ ಮಾತನಾಡಿರುವ ಜಿಲ್ಲಾಧಿಕಾರಿ ಆರ್ ಗಿರೀಶ್  ರಾಜ್ಯ ಸರ್ಕಾರದ ಕೋವಿಡ್ ಮಾರ್ಗಸೂಚಿಗಳನ್ನು ಜಿಲ್ಲಾಡಳಿತ ಕಟ್ಟುನಿಟ್ಟಾಗಿ ಪಾಲನೆ ಮಾಡಿದೆ ಎಂದು ಹೇಳಿದ್ದಾರೆ.

SCROLL FOR NEXT