ರಾಜ್ಯ

ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ವಿರುದ್ಧ ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯ ನ್ಯಾಯಾಲಯದಿಂದ ವಾರಂಟ್ ಜಾರಿ

Sumana Upadhyaya

ಮಂಗಳೂರು: ಕೆಪಿಸಿಸಿ ಅಧ್ಯಕ್ಷ ಡಿ ಕೆ ಶಿವಕುಮಾರ್ ವಿರುದ್ಧ ವಾರಂಟ್ ಜಾರಿಯಾಗಿದೆ. ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯ ನ್ಯಾಯಾಲಯದಿಂದ ವಾರಂಟ್ ಜಾರಿಯಾಗಿದ್ದು ಇದೇ ತಿಂಗಳ 29ರಂದು ಕೋರ್ಟ್ ಗೆ ಹಾಜರಾಗುವಂತೆ ಡಿಜಿ & ಐಜಿಪಿಗೆ ನೋಟಿಸ್ ನೀಡಲಾಗಿದೆ.

ಏನಿದು ಪ್ರಕರಣ?: ಡಿಕೆ ಶಿವಕುಮಾರ್ ಅವರು ಹಿಂದೆ ಸಿದ್ದರಾಮಯ್ಯ ನೇತೃತ್ವದ ಸರ್ಕಾರದಲ್ಲಿ ಇಂಧನ ಸಚಿವರಾಗಿದ್ದಾಗ ವಿದ್ಯುತ್ ಸಮಸ್ಯೆ ಬಗ್ಗೆ ಸುಳ್ಯ ತಾಲ್ಲೂಕಿನ ಬೆಳ್ಳಾರೆಯಸಾಯಿ ಗಿರಿಧರ್ ಅವರು ಡಿ ಕೆ ಶಿವಕುಮಾರ್ ಗೆ ದೂರವಾಣಿ ಕರೆ ಮಾಡಿದ್ದರು. ಮಾತಿನ ಮಧ್ಯೆ ಇಬ್ಬರ ಮಧ್ಯೆ ವಾಗ್ವಾದ ನಡೆದಿತ್ತು.

ನಂತರ ಡಿಕೆ ಶಿವಕುಮಾರ್ ಪೊಲೀಸ್ ಠಾಣೆಗೆ ಹೋಗಿ ದೂರು ನೀಡಿದ್ದರು. ಡಿಕೆ ಶಿವಕುಮಾರ್ ದೂರು ಆಧರಿಸಿ ಗಿರಿಧರ್ ರೈಯವರನ್ನು ಪೊಲೀಸರು ಬಂಧಿಸಿದ್ದರು. ಪ್ರಕರಣ ಸಂಬಂಧ ಸಾಕ್ಷ್ಯ ಹೇಳಲು ಡಿ ಕೆ ಶಿವಕುಮಾರ್ ಬರಬೇಕಾಗಿತ್ತಾದರೂ ಹಲವು ಬಾರಿ ನೋಟಿಸ್ ನೀಡಿದರೂ ಹಾಜರಾಗದ ಹಿನ್ನೆಲೆಯಲ್ಲಿ ವಾರಂಟ್ ಜಾರಿ ಮಾಡಲಾಗಿದೆ.

ಬೆಳ್ಳಾರೆಯ ವರ್ತಕ ಸಂಘದ ಮಾಜಿ ಅಧ್ಯಕ್ಷ ಸಾಯಿ ಗಿರಿಧರ್ ರೈ 2016ರ ಫೆಬ್ರವರಿ 28ರಂದು ರಾತ್ರಿ ಅಂದಿನ ಸಚಿವ ಡಿಕೆ ಶಿವಕುಮಾರ್ ಅವರಿಗೆ ಕರೆ ಮಾಡಿ ಸಮಸ್ಯೆ ತಿಳಿಸಿದ್ದರು. ಈ ವೇಳೆ ಅವರಿಬ್ಬರ ನಡುವೆ ಮಾತಿನ ಚಕಮಕಿ ನಡೆದಿತ್ತು. ಇದರಿಂದ ಕೋಪಗೊಂಡ ಡಿಕೆ ಶಿವಕುಮಾರ್ ಮೆಸ್ಕಾಂ ಎಂಡಿ ಮೂಲಕ ಅಂದಿನ ಸುಳ್ಯ ಪ್ರಭಾರ ಎಇಇ ಹರೀಶ್ ನಾಯಕ್ ಅವರಿಂದ ಸಾಯಿ ಗಿರಿಧರ್ ವಿರುದ್ಧ ಪೊಲೀಸರಿಗೆ ದೂರು ನೀಡಿಸಿದ್ದರು. ಈ ಪ್ರಕರಣ ಸಂಬಂಧ ಬೆಳ್ಳಾರೆ ಪೊಲೀಸರು ಗಿರಿಧರ್ ರೈ ಅವರನ್ನು ಬಂಧಿಸಲಾಗಿತ್ತು. 

SCROLL FOR NEXT