ಶಾಸಕರ ಕಾರಿನಲ್ಲಿ ಪುತ್ರ ಅರುಣ್ 
ರಾಜ್ಯ

ಬೆಳಗಾವಿ: ಸರ್ಕಾರಿ ಕಾರಿನಲ್ಲಿ ಶಾಸಕರ ಪುತ್ರನ ಖಾಸಗಿ ದರ್ಬಾರ್; ವಿಡಿಯೋ ವೈರಲ್

ಬೆಳಗಾವಿ ಜಿಲ್ಲೆಯ ರಾಯಬಾಗ ಶಾಸಕ ದುರ್ಯೋಧನ ಐಹೊಳೆ ಅವರಿಂದ ಸರ್ಕಾರಿ ವಾಹನ ದುರ್ಬಳಕೆಯಾಗುತ್ತಿದ್ದು, ಪುತ್ರ ಅರುಣ್ ಶಾಸಕರಿಗೆ ನೀಡಿದ ಸರ್ಕಾರಿ ಕಾರಿನಲ್ಲಿ  ಓಡಾಡುತ್ತಿದ್ದು ಈ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ

ಅಥಣಿ: ಬೆಳಗಾವಿ ಜಿಲ್ಲೆಯ ರಾಯಬಾಗ ಶಾಸಕ ದುರ್ಯೋಧನ ಐಹೊಳೆ ಅವರಿಂದ ಸರ್ಕಾರಿ ವಾಹನ ದುರ್ಬಳಕೆಯಾಗುತ್ತಿದ್ದು, ಪುತ್ರ ಅರುಣ್ ಶಾಸಕರಿಗೆ ನೀಡಿದ ಸರ್ಕಾರಿ ಕಾರಿನಲ್ಲಿ  ಓಡಾಡುತ್ತಿದ್ದು ಈ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.

ಸರ್ಕಾರದಿಂದ ನೀಡಿದ ಕಾರನ್ನು ಶಾಸಕರ ಪುತ್ರ ದುರುಪಯೋಗ ಪಡಿಸಿಕೊಳ್ಳುತ್ತಿದ್ದು ತಮ್ಮ ಖಾಸಗಿ ಕಾರ್ಯಗಳಿಗೆ ಉಪಯೋಗಿಸಿಕೊಳ್ಳುತ್ತಿದ್ದಾರೆ.  ಆದಿ ಜಾಂಭವ ಅಭಿವೃದ್ಧಿ ನಿಗಮದ ಅಧ್ಯಕ್ಷರಾಗಿರುವ ರಾಯಬಾಗ ಶಾಸಕ ದುರ್ಯೋಧನ ಐಹೊಳೆ ಅವರಿಗೆ ನಿಗಮ ಮಂಡಳಿ ಅಧ್ಯಕ್ಷರಾಗಿರುವ ಹಿನ್ನೆಲೆ ಸರ್ಕಾರದಿಂದ ಕಾರು ಮಂಜೂರಾಗಿದೆ. ಆದರೆ ಜನರ ತೆರಿಗೆ ಹಣದಲ್ಲಿ ಸರ್ಕಾರದಿಂದ ಭರಿಸುವ ಡಿಸೇಲ್ ಹಾಕಿಕೊಂಡು ಕ್ಷೇತ್ರದಲ್ಲಿ ಅವರ ಪುತ್ರ ಓಡಾಡುತ್ತಿರುವುದು ಸಾರ್ವಜನಿಕ ಆಕ್ರೋಶಕ್ಕೆ ಕಾರಣವಾಗಿದೆ.

ಶಾಸಕರ ಹಿರಿಯ ಪುತ್ರ ಅರುಣ್ ಐಹೊಳೆ ಸರ್ಕಾರಿ ಕಾರು ದುರ್ಬಳಕೆ ಮಾಡಿಕೊಳ್ಳುತ್ತಿದ್ದಾರೆ. ಅಧಿಕಾರದಲ್ಲಿರುವ ನಿಗಮದ ಅಧ್ಯಕ್ಷರು ಮಾತ್ರ ಸರ್ಕಾರದ ಕಾರು ಬಳಕೆ ಮಾಡಬೇಕು ಎಂಬ ನಿಯಮವಿದೆ. 
 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಬಾಲಿವುಡ್ ಹಿರಿಯ ನಟ ನಾನಾ ಪಾಟೇಕರ್ ಇನ್ನಿಲ್ಲ

"ಜೀವಕ್ಕೆ ಕುತ್ತು ತರುವ ಹಾದಿ": ರಷ್ಯಾ ಸೇನಾ ನೇಮಕಾತಿ ಆಮಿಷಗಳಿಗೆ ಬಲಿಯಾಗದಂತೆ ನಾಗರಿಕರಿಗೆ ಭಾರತ ಕಟ್ಟುನಿಟ್ಟಿನ ಸೂಚನೆ, 69 ಭಾರತೀಯರ ಬಿಡುಗಡೆಗೆ ಪಟ್ಟು..!

CM ಡಿ.ಕೆ. ಶಿವಕುಮಾರ್‌ಗಾಗಿ IndiGo flight ಲೇಟ್? VVIP ಸಂಸ್ಕೃತಿ ವಿರುದ್ಧ ಪ್ರಯಾಣಿಕರ ಆಕ್ರೋಶ..!

ಬರಗಾಲದ ಬೆನ್ನಲ್ಲೇ ಬೆಲೆ ಏರಿಕೆ ಬರೆ: ಮಧ್ಯಮ ವರ್ಗದವರಿಗೆ ಆರ್ಥಿಕ ಹೊಡೆತ, ಅಕ್ಕಿ ದರ ಗಗನಕ್ಕೆ..!

ಬರ ಎಫೆಕ್ಟ್: ರೈತರ ನೆರವಿಗೆ ಧಾವಿಸಿದ ಸರ್ಕಾರ; 1,250 ಕೋಟಿ ರೂ. ಮೊದಲ ಕಂತು ಬಿಡುಗಡೆ..!