ಬಸ್ ಸಂಚಾರ ಸೇವೆ ಆರಂಭ 
ರಾಜ್ಯ

ನ್ಯೂ ಇಂಡಿಯನ್ ಎಕ್ಸ್ ಪ್ರೆಸ್ ವರದಿ ಫಲಶ್ರುತಿ: ಗದಗ ಜಿಲ್ಲೆಯ ಕೊಕ್ಕರಗುಂಡಿ ಗ್ರಾಮಕ್ಕೆ ಬಸ್ ಸಂಚಾರ ಆರಂಭ!

ನ್ಯೂ ಇಂಡಿಯನ್ ಎಕ್ಸ್ ಪ್ರೆಸ್ ನಲ್ಲಿ ವರದಿ ಬಂದ ನಂತರ ಶಿರಹಟ್ಟಿ ತಾಲ್ಲೂಕಿನ ಕೊಕ್ಕರಗುಂಡಿ ಗ್ರಾಮಕ್ಕೆ ಬಸ್ ಸಂಚಾರ ಸೇವೆ ಆರಂಭವಾಗಿದ್ದು ವಿದ್ಯಾರ್ಥಿಗಳು ಖುಷಿಯಾಗಿದ್ದಾರೆ.

ಗದಗ: ನ್ಯೂ ಇಂಡಿಯನ್ ಎಕ್ಸ್ ಪ್ರೆಸ್ ನಲ್ಲಿ ವರದಿ ಬಂದ ನಂತರ ಶಿರಹಟ್ಟಿ ತಾಲ್ಲೂಕಿನ ಕೊಕ್ಕರಗುಂಡಿ ಗ್ರಾಮಕ್ಕೆ ಬಸ್ ಸಂಚಾರ ಸೇವೆ ಆರಂಭವಾಗಿದ್ದು ವಿದ್ಯಾರ್ಥಿಗಳು ಖುಷಿಯಾಗಿದ್ದಾರೆ.

ಗದಗ ಜಿಲ್ಲೆಯ ಶಿರಹಟ್ಟಿ ತಾಲ್ಲೂಕಿನ ಕೊಕ್ಕರಗುಂಡಿ ಗ್ರಾಮಕ್ಕೆ ಬಸ್ ಸಂಚಾರ ಸೇವೆ ಸಾಕಷ್ಟು ಇಲ್ಲ ಇದರಿಂದ ಶಾಲೆಗೆ ಹೋಗುವ ಮಕ್ಕಳಿಗೆ ವಿಪರೀತ ಕಷ್ಟವಾಗುತ್ತಿದೆ. ಎರಡೆರಡು ಹೊಳೆಗಳನ್ನು ದಾಟಿಕೊಂಡು ನಾಲ್ಕೈದು ಕಿಲೋ ಮೀಟರ್ ನಡೆದುಕೊಂಡು ವಿದ್ಯಾರ್ಥಿಗಳು ಶಾಲೆಗೆ ಹೋಗಬೇಕಾಗುತ್ತದೆ ಎಂದು ನ್ಯೂ ಇಂಡಿಯನ್ ಎಕ್ಸ್ ಪ್ರೆಸ್ ಪತ್ರಿಕೆಯ ವರದಿಗಾರರು ವರದಿ ಮಾಡಿದ್ದರು.

ವರದಿ ಹಿನ್ನೆಲೆಯಲ್ಲಿ ಈಶಾನ್ಯ ಸಾರಿಗೆ ಇಲಾಖೆ ಅಧಿಕಾರಿಗಳು ಎಚ್ಚೆತ್ತುಕೊಂಡು ಬಸ್ ಸಂಚಾರ ಸೇವೆ ಆರಂಭಿಸಿದ್ದು ನಿನ್ನೆ ಬಸ್ಸು ಬಂದು ವಿದ್ಯಾರ್ಥಿಗಳು ಅದರಲ್ಲಿ ಶಾಲೆಗೆ ಹೋಗಿದ್ದಾರೆ. ಇದರಿಂದ ವಿದ್ಯಾರ್ಥಿಗಳ ಪಡಿಪಾಟಿಲು ತಪ್ಪಿದೆ.

ನಡೆದುಕೊಂಡು ಹೋಗಲು ಒಂದು ಗಂಟೆ ಹಿಡಿಯುತ್ತಿತ್ತು, ಕಷ್ಟವಾಗುತ್ತಿತ್ತು, ಇದೀಗ ಬಸ್ ಆರಂಭವಾಗಿರುವುದರಿಂದ ಸಮಯಕ್ಕೆ ಸರಿಯಾಗಿ ಶಾಲೆಗೆ ತಲುಪಬಹುದು ಎಂದು ಖುಷಿಯಾಗುತ್ತಿದೆ ಎಂದು ವಿದ್ಯಾರ್ಥಿನಿಯೊಬ್ಬರು ಹೇಳುತ್ತಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

'ಮತಗಳ್ಳತನ' ನಡೆದಿರುವುದನ್ನು ರಾಷ್ಟ್ರಪತಿ ದ್ರೌಪದಿ ಮುರ್ಮು ನಿರಾಕರಿಸಲಿಲ್ಲ, ನನಗೆ ಆಶ್ಚರ್ಯವಾಯಿತು: ರಾಹುಲ್ ಗಾಂಧಿ

ಬೆಂಗಳೂರು: ನಮ್ಮ ಮೆಟ್ರೋದಲ್ಲಿ Alt News ಸಹ ಸ್ಥಾಪಕ ಮೊಹಮ್ಮದ್ ಜುಬೈರ್ ಗೆ ಹಿಗ್ಗಾಮುಗ್ಗ ಥಳಿತ?, Video Viral

19ನೇ ಓವರ್‌ನಲ್ಲೇ 250 ರನ್ ಚೇಸ್: ಟಿ20 ಕ್ರಿಕೆಟ್‌ನಲ್ಲಿ ಭಾರತವನ್ನು ಸೋಲಿಸಿ ದಾಖಲೆ ಬರೆದ ವಿಂಡೀಸ್

CJP Protest: ಭಾರತದ ಯುವಕರು ದೆಹಲಿಗೆ ತಲುಪುವುದನ್ನು ತಡೆಯಲು ಯಾರಿಂದಲೂ ಸಾಧ್ಯವಿಲ್ಲ: ಚಿರಾಗ್ ಪಾಸ್ವಾನ್

24 ಗಂಟೆ ಇಂಟರ್ನೆಟ್ ಕಟ್, 57 ಮೆಟ್ರೋ ನಿಲ್ದಾಣ ಬಂದ್: ಸಿಜೆಪಿ ಪ್ರತಿಭಟನೆಗೂ ಮುನ್ನ ದೆಹಲಿ ಹೈ ಅಲರ್ಟ್