ಸಾಂದರ್ಭಿಕ ಚಿತ್ರ 
ರಾಜ್ಯ

ರಾಜ್ಯದಲ್ಲಿ ಮುಂದುವರೆದ ಕೊರೋನಾ ಏರಿಳಿತ: ಇಂದು 1,003 ಪ್ರಕರಣ ಪತ್ತೆ; 18 ಸಾವು; 5 ಜಿಲ್ಲೆಗಳಲ್ಲಿ ಪ್ರಕರಣ 'ಶೂನ್ಯ'!

ರಾಜ್ಯದಲ್ಲಿ ಇಳಿಮುಖದತ್ತ ಸಾಗಿದ್ದ ಕೊರೋನಾ ಪ್ರಕರಣಗಳ ಸಂಖ್ಯೆಯಲ್ಲಿ ಏರಿಳಿತ ಮುಂದುವರೆದಿದ್ದು ಕಳೆದ 24 ಗಂಟೆಯಲ್ಲಿ 1,003 ಕೊರೋನಾ ಪ್ರಕರಣಗಳು ವರದಿಯಾಗಿದೆ. ಇದರೊಂದಿಗೆ ಸೋಂಕಿತರ ಸಂಖ್ಯೆ 29,66,194ಕ್ಕೆ ಏರಿಕೆಯಾಗಿದೆ.

ಬೆಂಗಳೂರು: ರಾಜ್ಯದಲ್ಲಿ ಇಳಿಮುಖದತ್ತ ಸಾಗಿದ್ದ ಕೊರೋನಾ ಪ್ರಕರಣಗಳ ಸಂಖ್ಯೆಯಲ್ಲಿ ಏರಿಳಿತ ಮುಂದುವರೆದಿದ್ದು ಕಳೆದ 24 ಗಂಟೆಯಲ್ಲಿ 1,003 ಕೊರೋನಾ ಪ್ರಕರಣಗಳು ವರದಿಯಾಗಿದೆ. ಇದರೊಂದಿಗೆ ಸೋಂಕಿತರ ಸಂಖ್ಯೆ 29,66,194ಕ್ಕೆ ಏರಿಕೆಯಾಗಿದೆ.

ಮಹಾಮಾರಿಗೆ ಇಂದು 8 ಮಂದಿ ಬಲಿಯಾಗಿದ್ದಾರೆ. ಇದರೊಂದಿಗೆ ಸಾವಿನ ಸಂಖ್ಯೆ 37,573ಕ್ಕೆ ಏರಿಕೆಯಾಗಿದೆ ಎಂದು ಆರೋಗ್ಯ ಸಚಿವಾಲಯ ಮಾಹಿತಿ ನೀಡಿದೆ.

ಬೆಂಗಳೂರಿನಲ್ಲಿ ಇಂದು 310 ಮಂದಿಗೆ ಸೋಂಕು ದೃಢಪಟ್ಟಿದ್ದು, ಇದರೊಂದಿಗೆ ನಗರದಲ್ಲಿ ಸೋಂಕಿತರ ಸಂಖ್ಯೆ 12,42,950ಕ್ಕೆ ಏರಿಕೆಯಾಗಿದೆ. ಇಂದು ನಗರದಲ್ಲಿ 6 ಮಂದಿ ಸಾವನ್ನಪ್ಪಿದ್ದಾರೆ.

ರಾಜ್ಯದಲ್ಲಿ ಇಂದು 1199 ಸೋಂಕಿತರು ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. ಇದರೊಂದಿಗೆ ಸೋಂಕಿನಿಂದ ಚೇತರಿಸಿಕೊಂಡವರ ಸಂಖ್ಯೆ 29,12,633ಕ್ಕೆ ಏರಿಕೆಯಾಗಿದೆ. ಇನ್ನು15,960 ಸಕ್ರೀಯ ಪ್ರಕರಣಗಳಿವೆ. 

ರಾಜ್ಯಾದ್ಯಂತ ಇಂದು 1,48,496ಕೋವಿಡ್ ಟೆಸ್ಟ್ ನಡೆಸಲಾಗಿದ್ದು, 1,003 ಪಾಸಿಟಿವ್ ಪ್ರಕರಣಗಳು ಪತ್ತೆಯಾಗಿವೆ. ಇದರೊಂದಿಗೆ ರಾಜ್ಯದಲ್ಲಿ ಪಾಸಿಟಿವಿಟಿ ದರ ಶೇ. 0.67ಕ್ಕೆ ಇಳಿದಿದೆ.

ರಾಜ್ಯದ ನಾಲ್ಕು ಜಿಲ್ಲೆಗಳಾದ ಬಾಗಲಕೋಟೆ, ಬೀದರ್, ಹಾವೇರಿ, ಕೊಪ್ಪಳ ಮತ್ತು ವಿಜಯಪುರ ಜಿಲ್ಲೆಗಳಲ್ಲಿ ಶೂನ್ಯ ಪ್ರಕರಣ ವರದಿಯಾಗಿದೆ. 

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ಇಸ್ರೇಲ್‌ ಜೊತೆ ನಮ್ಮ ಸಂಬಂಧ 'ರಕ್ತ ಮತ್ತು ತ್ಯಾಗ'ದಲ್ಲಿ ಬರೆಯಲ್ಪಟ್ಟಿದೆ, ನಾನು ಹುಟ್ಟಿದ ವರ್ಷ ಭಾರತ ಇಸ್ರೇಲ್ ಗೆ ಮಾನ್ಯತೆ ನೀಡಿತು': ಪ್ರಧಾನಿ ಮೋದಿ-Video

ಹಗರಣ ರಹಿತ ಹುದ್ದೆ ಭರ್ತಿಗೆ ಕ್ರಮ: ಯುವಕರು ಧೈರ್ಯವಾಗಿರಿ, ನಿಮ್ಮ ಸಮಸ್ಯೆ ಬಗೆಹರಿಸುತ್ತೇವೆ, ಸದ್ಯದಲ್ಲೇ ಸಂದೇಶ ನೀಡುತ್ತೇವೆ; ಡಿ ಕೆ ಶಿವಕುಮಾರ್

ದಲಿತಾಸ್ತ್ರದ ಮೂಲಕ ಕಟ್ಟಿಹಾಕಲು ಸಿದ್ದು ಬಣ ಕಸರತ್ತು: ತೆರಮರೆಯಲ್ಲಿ ಡಿಕೆಶಿ ಬೆಂಬಲಿಗರ ಮಸಲತ್ತು; ಅಂತರ್ಯುದ್ಧದಲ್ಲಿ ಯಾರಿಗಿದೆ ಗೆಲ್ಲುವ ತಾಕತ್ತು?

Gold Rate Today: ಬೆಂಗಳೂರಿನಲ್ಲಿ ಇಂದಿನ ಚಿನ್ನ, ಬೆಳ್ಳಿ ದರ ಎಷ್ಟಿದೆ? ಇಲ್ಲಿದೆ ವಿವರ...

ಆರೋಗ್ಯ ಇಲಾಖೆಯಿಂದ ಉರ್ದು ಭಾಷೆ ಆಹ್ವಾನ ಪತ್ರಿಕೆ: ಜನರನ್ನು ದಾರಿ ತಪ್ಪಿಸಲೇಬೇಕು ಎಂಬ ಹಠಕ್ಕೆ ಬಿದ್ದಿದ್ದೀರಾ?

SCROLL FOR NEXT