ಸಾಂದರ್ಭಿಕ ಚಿತ್ರ 
ರಾಜ್ಯ

ಬೆಂಗಳೂರು: ರಸ್ತೆ ಗುಂಡಿ ತಪ್ಪಿಸಲು ಹೋಗಿ ಅಪಘಾತ, ಯುವಕ ಸಾವು

ಬಿಬಿಎಂಪಿಯ ನಿರ್ಲಕ್ಷ್ಯಕ್ಕೆ ಮತ್ತೊಂದು ಜೀವ ಬಲಿಯಾಗಿದೆ. ರಸ್ತೆ ಗುಂಡಿ ತಪ್ಪಿಸಲು ಹೋಗಿ ಯುವಕನೋರ್ವ ಅಪಘಾತದಲ್ಲಿ ಮೃತಪಟ್ಟಿರುವ ಘಟನೆ ನಗರದ ರಾಜ್​​ ಕುಮಾರ್ ಸಮಾಧಿ ರಸ್ತೆ ಬಳಿ ನಡೆದಿದೆ.

ಬೆಂಗಳೂರು: ಬಿಬಿಎಂಪಿಯ ನಿರ್ಲಕ್ಷ್ಯಕ್ಕೆ ಮತ್ತೊಂದು ಜೀವ ಬಲಿಯಾಗಿದೆ. ರಸ್ತೆ ಗುಂಡಿ ತಪ್ಪಿಸಲು ಹೋಗಿ ಯುವಕನೋರ್ವ ಅಪಘಾತದಲ್ಲಿ ಮೃತಪಟ್ಟಿರುವ ಘಟನೆ ನಗರದ ರಾಜ್​​ ಕುಮಾರ್ ಸಮಾಧಿ ರಸ್ತೆ ಬಳಿ ನಡೆದಿದೆ.

ಶಿರಸಿ ಮೂಲದ ಮನೋಜ್(28) ಮೃತ ದುರ್ದೈವಿ. ಖಾಸಗಿ ಕಂಪನಿಯ ಉದ್ಯೋಗಿಯಾಗಿರುವ ಮನೋಜ್, ನಿನ್ನೆ ರಾತ್ರಿ​ ಕೆಲಸ ಮುಗಿಸಿಕೊಂಡು ಮನೆಗೆ ವಾಪಸ್ಸಾಗುತ್ತಿದ್ದಾಗ ರಾಜ್​​ ಕುಮಾರ್ ಸಮಾಧಿ ರಸ್ತೆಯಲ್ಲಿ ಗುಂಡಿ ತಪ್ಪಿಸಲು ಹೋಗಿ ಕೆಳಗೆ ಬಿದ್ದಿದ್ದಾರೆ. ಈ ವೇಳೆ ಹಿಂಬದಿಯಿಂದ ಬಂದ ಬೈಕ್​ ಡಿಕ್ಕಿಯಾಗಿದ್ದು, ಮನೋಜ್​ ಸ್ಥಳದಲ್ಲೇ ಮೃತಪಟ್ಟಿದ್ದಾರೆ.

ಸ್ಥಳಕ್ಕೆ ರಾಜಾಜಿನಗರ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಸದ್ಯ ಮನೋಜ್​ ಮೃತದೇಹವನ್ನು ಎಂ.ಎಸ್ ರಾಮಯ್ಯ ಆಸ್ಪತ್ರೆಗೆ ರವಾನಿಸಲಾಗಿದ್ದು, ಆತನ ಪೋಷಕರಿಗೆ ಸುದ್ದಿ ಮುಟ್ಟಿಸಲಾಗಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Operation Sindoor; Kirana Hills ಪರಮಾಣು ನೆಲೆಗೆ ಅಪ್ಪಳಿಸಿದ ಭಾರತದ ಡ್ರೋನ್? ಬೆಚ್ಚಿಬಿದ್ದ ಪಾಕಿಸ್ತಾನ..! Indian Army ಹೇಳಿದ್ದೇನು?

ನೀಟ್ ಪ್ರತಿಭಟನಾಕಾರರ ಮೇಲೆ ಪೊಲೀಸ್ ದೌರ್ಜನ್ಯ ಆರೋಪ: ಚರ್ಚೆಗೆ ವಿಪಕ್ಷಗಳ ಪಟ್ಟು, ಸಂಸದೀಯ ಸಮಿತಿ ಸಭೆಯಲ್ಲಿ ತೀವ್ರ ವಾಗ್ವಾದ!

2nd Test Day 3: ಫಾಲೋ ಆನ್ ಭೀತಿಯಲ್ಲಿ ಲಂಕಾಪಡೆ, ಮಳೆಯಿಂದಾಗಿ 3ನೇ ದಿನದಾಟ ಮೊಟಕು!

ಮಂಡ್ಯ ಜೈಲಿನ ಕರ್ಮಕಾಂಡ ಬಯಲು: ಆಸ್ಪತ್ರೆ​​ ವಾರ್ಡ್​​​ನಲ್ಲಿ ಮಹಿಳೆ​​ ಜೊತೆ ಸಿಕ್ಕಿಬಿದ್ದ ವಿಚಾರಣಾಧೀನ ಸರ್ಕಾರಿ ಅಧಿಕಾರಿ!

ಕೊಡಗಿನಲ್ಲಿ ಭಾರಿ ಮಳೆ: ಹಾರಂಗಿ ಜಲಾಶಯಕ್ಕೆ ಹೆಚ್ಚಿದ ಒಳಹರಿವು, ತಲಕಾವೇರಿಯಲ್ಲೂ ದಾಖಲೆಯ ವರ್ಷಧಾರೆ!