ರಾಜ್ಯ

ಬೆಂಗಳೂರಿಗರಿಗೆ ಗುಡ್​ನ್ಯೂಸ್: ನಾಳೆಯಿಂದ ನಮ್ಮ ಮೆಟ್ರೋ ಸಂಚಾರ ಅವಧಿ ವಿಸ್ತರಣೆ

Lingaraj Badiger

ಬೆಂಗಳೂರು: ನಮ್ಮ ಮೆಟ್ರೋ ಬೆಂಗಳೂರಿಗರಿಗೆ ಸಿಹಿ ಸುದ್ದಿಯೊಂದನ್ನು ನೀಡಿದ್ದು, ಶನಿವಾರದಿಂದ ರೈಲು ಸಂಚಾರದ ಅವಧಿಯನ್ನು ವಿಸ್ತರಿಸಲಾಗಿದೆ.

ಮೆಟ್ರೋ ರೈಲು ಸಂಚಾರದ ಅವಧಿಯನ್ನು ಬೆಳಗ್ಗೆ 6 ರಿಂದ ರಾತ್ರಿ 10 ಗಂಟೆಯವರೆಗೆ ವಿಸ್ತರಣೆ ಮಾಡಲಾಗಿದೆ ಎಂದು ಬಿಎಂಆರ್ ಸಿಎಲ್ ವ್ಯವಸ್ಥಾಪಕ ನಿರ್ದೇಶಕ ಅಂಜುಮ್ ಪರ್ವೇಜ್ ಅವರು ತಿಳಿಸಿದ್ದಾರೆ.

ಕೊರೋನಾ ಸಾಂಕ್ರಾಮಿಕ ಹಿನ್ನೆಲೆಯಲ್ಲಿ ಈ ಮೊದಲು ಮೆಟ್ರೋ ರೈಲು ಸಂಚಾರದ ಅವಧಿ ಬೆಳಗ್ಗೆ 7 ಗಂಟೆಯಿಂದ ಸಂಜೆ 8 ಗಂಟೆ ವರೆಗೆ ಮಾತ್ರ ಇತ್ತು.

ಈಗ ಕೊರೋನಾ ಸೋಂಕು ಕಡಿಮೆಯಾಗಿದ್ದು, ಜನಜೀವನ ಬಹುತೇಕ ಸಹಜ ಸ್ಥಿತಿಗೆ ಮರಳುವ ಹಂತದಲ್ಲಿದೆ. ಹೀಗಾಗಿ, ಜನರ ಪ್ರಯಾಣಕ್ಕೆ ಅನುಕೂಲವಾಗುವಂತೆ ಮೆಟ್ರೋ ಕಾರ್ಯನಿರ್ವಹಿಸುವ ಅವಧಿಯನ್ನು ಪರಿಷ್ಕರಿಸಲಾಗಿದೆ.

ಮಾಜಿ ಸಚಿವ ಸುರೇಶ್‌ ಕುಮಾರ್‌ ಅವರು ನಮ್ಮ ಮೆಟ್ರೋ ಸಂಚಾರದ ಅವಧಿಯನ್ನು ವಿಸ್ತರಿಸುವಂತೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರಿಗೆ ಪತ್ರ ಬರೆದಿದ್ದರು. 

ನೈಟ್ ಕರ್ಫ್ಯೂ ಹಿನ್ನೆಲೆ ರಾತ್ರಿ 9 ರವರೆಗೆ ಮಾತ್ರ ಮೆಟ್ರೋ ಸಂಚಾರವಿದೆ. ರಾತ್ರಿ 9 ಗಂಟೆಯ ಬಳಿಕ ಮೆಟ್ರೋ ಸಂಚಾರ ಇರುವುದಿಲ್ಲ. ಇದರಿಂದ ಪ್ರಯಾಣಿಕರಿಗೆ ಸಮಸ್ಯೆಯಾಗುತ್ತಿದೆ. ಹೀಗಾಗಿ ರಾತ್ರಿ 10 ಗಂಟೆಯವರೆಗೆ ಮೆಟ್ರೋ ಸೌಲಭ್ಯ ಕಲ್ಪಿಸುವಂತೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಗೆ ಮನವಿ ಮಾಡಿದ್ದರು.

SCROLL FOR NEXT