ಪಿ.ಸಿ ಮೋಹನ್ 
ರಾಜ್ಯ

ನಮ್ಮ ಮೆಟ್ರೋ ಸೇವೆಯನ್ನು ಬೆಳಗ್ಗೆ 5 ರಿಂದ ರಾತ್ರಿ 10 ರವರೆಗೆ ವಿಸ್ತರಿಸಲು ಸಂಸದ ಪಿಸಿ ಮೋಹನ್ ಒತ್ತಾಯ

ಬೆಂಗಳೂರು ನಗರದಲ್ಲಿ ನಮ್ಮ ಮೆಟ್ರೋ ರೈಲು ಸೇವೆಯನ್ನು ರಾತ್ರಿ 10 ಗಂಟೆಯ ತನಕ ವಿಸ್ತರಣೆ ಮಾಡಬೇಕು ಎಂದು ಬಿಎಂಆರ್‌ಸಿಎಲ್‌ಗೆ ಮನವಿ ಮಾಡಲಾಗಿದೆ. 

ಬೆಂಗಳೂರು: ಬೆಂಗಳೂರು ನಗರದಲ್ಲಿ ನಮ್ಮ ಮೆಟ್ರೋ ರೈಲು ಸೇವೆಯನ್ನು ರಾತ್ರಿ 10 ಗಂಟೆಯ ತನಕ ವಿಸ್ತರಣೆ ಮಾಡಬೇಕು ಎಂದು ಬಿಎಂಆರ್‌ಸಿಎಲ್‌ಗೆ ಮನವಿ ಮಾಡಲಾಗಿದೆ. 

ನಮ್ಮ ಮೆಟ್ರೋ ರೈಲು ಸೇವೆಯ ಸಮಯವನ್ನು ಮುಂಜಾನೆ 5 ರಿಂದ ರಾತ್ರಿ 10 ರವರೆಗೆ ವಿಸ್ತರಿಸುವಂತೆ ಬೆಂಗಳೂರು ಕೇಂದ್ರ ಕ್ಷೇತ್ರದ ಸಂಸದ ಪಿ. ಸಿ. ಮೋಹನ್ ಗುರುವಾರ ಬಿಎಂಆರ್‌ಸಿಎಲ್ ಎಂಡಿಯನ್ನು ಭೇಟಿ ಮಾಡಿ ಮನವಿಯನ್ನು ಸಲ್ಲಿಸಿದರು. ಪ್ರಸ್ತುತ ಮೆಟ್ರೋ ರೈಲು ರಾತ್ರಿ 9 ಗಂಟೆಯ ತನಕ ಮಾತ್ರ ಸಂಚಾರ ನಡೆಸುತ್ತಿದೆ. ಪ್ರಸ್ತುತ ನಮ್ಮ ಮೆಟ್ರೋ ರೈಲು ಮುಂಜಾನೆ 7 ರಿಂದ ರಾತ್ರಿ 9 ರವರೆಗೆ ಸಂಚಾರ ನಡೆಸುತ್ತಿದೆ. ಇದರಿಂದಾಗಿ ಜನಸಾಮಾನ್ಯರಿಗೆ ತೀವ್ರ ತೊಂದರೆಯಾಗುತ್ತಿದೆ. ಆದ್ದರಿಂದ ರಾತ್ರಿ 10 ಗಂಟೆ ತನಕ ರೈಲು ಓಡಿಸಬೇಕು ಎಂದು ಒತ್ತಾಯಿಸಿದ್ದಾರೆ.

ಕೋವಿಡ್ ಪರಿಸ್ಥಿತಿಗೂ ಮೊದಲು ಮುಂಜಾನೆ 5 ರಿಂದ ರಾತ್ರಿ 11 ಗಂಟೆ ತನಕ ಮೆಟ್ರೋ ರೈಲು ಸಂಚಾರ ನಡೆಸುತ್ತಿತ್ತು. ಪ್ರತಿದಿನ ಸುಮಾರು 3 ಲಕ್ಷಕ್ಕೂ ಅಧಿಕ ಜನರು ಮೆಟ್ರೋ ರೈಲಿನಲ್ಲಿ ಸಂಚಾರ ನಡೆಸುತ್ತಿದ್ದರು. ಆದರೆ ಈಗ ರೈಲು  ಸಂಚಾರದ ಅವಧಿಯನ್ನು ಕಡಿತಗೊಳಿಸಲಾಗಿದೆ. ಶಾಸಕರಿಂದಲೂ ಒತ್ತಾಯ; ಕರ್ನಾಟಕ ವಿಧಾನಸಭೆಯಲ್ಲಿ ಬುಧವಾರ ಬೆಲೆ ಏರಿಕೆ ಬಗ್ಗೆ ಚರ್ಚೆ ನಡೆಯುವಾಗಲೂ ನಮ್ಮ ಮೆಟ್ರೋ ವಿಚಾರ ಪ್ರಸ್ತಾಪವಾಗಿತ್ತು. 

ವಿವಿಧ ಪಕ್ಷಗಳ ಶಾಸಕರು ಪೆಟ್ರೋಲ್ ಮತ್ತು ಡೀಸೆಲ್ ಬೆಲೆಗಳು ಏರಿಕೆಯಾಗಿರುವಾಗ ಜನರು ಸಾರ್ವಜನಿಕ ಸಾರಿಗೆಗಳ ಮೇಲೆ ಹೆಚ್ಚು ಅವಲಂಬಿತರಾಗಿದ್ದಾರೆ. ಇಂತಹ ಸಮಯದಲ್ಲಿ ನಮ್ಮ ಮೆಟ್ರೋ ರೈಲು ಸೇವೆಯ ಸಮಯವನ್ನು ವಿಸ್ತರಣೆ ಮಾಡಬೇಕು ಎಂದು ಸರ್ಕಾರವನ್ನು ಒತ್ತಾಯಿಸಿದ್ದರು.

ಇನ್ನು ಸಂಸದರ ಈ ನಡೆಯನನ್ನು ನಗರ ಸಾರಿಗೆ ತಜ್ಞ ಸಂಜೀವ್ ದ್ಯಾಮಣ್ಣನವರ್ ಸ್ವಾಗತಿಸಿದ್ದಾರೆ. ಕೆಲಸ ಮತ್ತು ಸಾಮಾಜಿಕ ಸ್ಥಿತಿಗತಿಗಳು ಸಹಜ ಸ್ಥಿತಿಗೆ ಬರುತ್ತಿರುವೆ, ಇಂತಹ ಸ್ಥಿತಿಯಲ್ಲಿ ಮೆಟ್ರೋ ರೈಲು ಅವಧಿಯನ್ನು ವಿಸ್ತರಿಸುವುದು ಅಗತ್ಯ ಎಂದು ಹೇಳಿದ್ದಾರೆ.

ಎಲ್ಲಾ ಪ್ರಯಾಣಿಕರಿಗೆ ವಿಶೇಷವಾಗೆ ಕಚೇರಿಗಳಲ್ಲಿ ಹೆಚ್ಚು ಸಮಯ ಕೆಲಸ ಮಾಡುವವರು ಸುರಕ್ಷಿತವಾಗಿ ಮತ್ತು ಭರವಸೆಯೊಂದಿಗೆ ತಮ್ಮ ಮನೆ ತಲುಪಲು ಸಾರಿಗೆ ಸೇವೆ ಅಗತ್ಯವಿದೆ, ಮೆಟ್ರೋ ರೈಲು ವಿಸ್ತರಿಸುವುದರಿಂದ ಅನೇಕರಿಗೆ ಅನುಕೂಲವಾಗಲಿದೆ ಎಂದು ಖಾಸಗಿ ಕಂಪನಿ ಮ್ಯಾನೇಜರ್ ರವೀಂದ್ರ ಎಂಬುವರು ಹೇಳಿದ್ದಾರೆ. ಇನ್ನೂ ಈ ಬಗ್ಗೆ ಪ್ರತಿಕ್ರಿಯೆ ಪಡೆಯಲು ಬಿಎಂಆರ್ ಸಿಎಲ್ ಅಧಿಕಾರಿಗಳು ಸಂಪರ್ಕಕ್ಕೆ ಸಿಗಲಿಲ್ಲ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

'ದೊಡ್ಡ ಆಘಾತ': ಅಮೆರಿಕದಲ್ಲಿ ಶೇ.50 ಸುಂಕ ಜಾರಿ, 48.2 ಬಿಲಿಯನ್ ಡಾಲರ್ ಮೌಲ್ಯದ ಭಾರತದ ರಫ್ತಿಗೆ ಹೊಡೆತ

ಜಮ್ಮುವಿನಲ್ಲಿ ಭೀಕರ ಮಳೆಯಿಂದ ಭಾರೀ ಅನಾಹುತ ಸೃಷ್ಟಿ: ವೈಷ್ಣೋದೇವಿ ಮಾರ್ಗದಲ್ಲಿ ಭೂಕುಸಿತ, ಕನಿಷ್ಠ 32 ಮಂದಿ ಸಾವು

Shocking: ಆಸಿಸ್ ಕ್ರಿಕೆಟ್ ದಿಗ್ಗಜ Michael Clarkeಗೆ 'ಚರ್ಮದ ಕ್ಯಾನ್ಸರ್'!

ಭಾರತದ ಮೇಲೆ ಸುಂಕಾಸ್ತ್ರ ಜಾರಿ: ಮತ್ತೆ ಇಂಡೋ-ಪಾಕ್ ಯುದ್ಧ ನಿಲ್ಲಿಸಿದ್ದು ನಾನೇ ಎಂದು ಪುನರುಚ್ಛರಿಸಿದ ಡೊನಾಲ್ಡ್ ಟ್ರಂಪ್

ದೇಶಾದ್ಯಂತ ಗಣೇಶ ಚತುರ್ಥಿ ಸಂಭ್ರಮ: ದೇವಾಲಯಗಳಲ್ಲಿ ವಿಶೇಷ ಪೂಜೆ, ರಾಷ್ಟ್ರಪತಿ, ಪ್ರಧಾನಿ, ಮುಖ್ಯಮಂತ್ರಿಗಳಿಂದ ಶುಭಾಶಯ

SCROLL FOR NEXT