ಸಂಗ್ರಹ ಚಿತ್ರ 
ರಾಜ್ಯ

ಖಾಸಗಿ ಶಾಲಾ ಶುಲ್ಕ ವಿವಾದ: ಶೇ.15 ಶುಲ್ಕ ಕಡಿತಕ್ಕೆ ಹೈಕೋರ್ಟ್ ಆದೇಶ

ಕೊರೋನಾ ಹಿನ್ನೆಲೆಯಲ್ಲಿ ಪೋಷಕರು ಆರ್ಥಿಕ ಸಂಕಷ್ಟಕ್ಕೆ ತುತ್ತಾಗಿದ್ದನ್ನು ಪರಿಗಣಿಸಿ ಕಳೆದ ಶೈಕ್ಷಣಿಕ ಸಾಲಿನಲ್ಲಿ ರಾಜ್ಯದ ಖಾಸಗಿ ಶಾಲೆಗಳಲ್ಲಿ ಬೋಧನಾ ಶುಲ್ಕದಲ್ಲಿ ಶೇ.30ರಷ್ಟು ಕಡಿತಗೊಳಿಸಿ ಸರ್ಕಾರ ಹೊರಡಿಸಿದ್ದ ಆದೇಶವನ್ನು ರದ್ದುಪಡಿಸಿರುವ ಹೈಕೋರ್ಟ್‌, ಶೇ.15ರಷ್ಟು ಮಾತ್ರ ಕಡಿತಕ್ಕೆ ಶುಕ್ರವಾರ ಆದೇಶಿಸಿದೆ. 

ಬೆಂಗಳೂರು: ಕೊರೋನಾ ಹಿನ್ನೆಲೆಯಲ್ಲಿ ಪೋಷಕರು ಆರ್ಥಿಕ ಸಂಕಷ್ಟಕ್ಕೆ ತುತ್ತಾಗಿದ್ದನ್ನು ಪರಿಗಣಿಸಿ ಕಳೆದ ಶೈಕ್ಷಣಿಕ ಸಾಲಿನಲ್ಲಿ ರಾಜ್ಯದ ಖಾಸಗಿ ಶಾಲೆಗಳಲ್ಲಿ ಬೋಧನಾ ಶುಲ್ಕದಲ್ಲಿ ಶೇ.30ರಷ್ಟು ಕಡಿತಗೊಳಿಸಿ ಸರ್ಕಾರ ಹೊರಡಿಸಿದ್ದ ಆದೇಶವನ್ನು ರದ್ದುಪಡಿಸಿರುವ ಹೈಕೋರ್ಟ್‌, ಶೇ.15ರಷ್ಟು ಮಾತ್ರ ಕಡಿತಕ್ಕೆ ಶುಕ್ರವಾರ ಆದೇಶಿಸಿದೆ. 

ಶಾಲಾ ಶುಲ್ಕ ವಿವಾದಕ್ಕೆ ಸಂಬಂಧಿದಂತೆ ಸರ್ಕಾರದ ತೀರ್ಮಾನ ಪ್ರಶ್ನಿಸಿ ಖಾಸಗಿ ಶಾಲಾ ಶಿಕ್ಷಣ ಸಂಸ್ಥೆಗಳು ಸಲ್ಲಿಸಿದ್ದ ಅರ್ಜಿಯನ್ನು ವಿಚಾರಣೆ ನಡೆಸಿದ ನ್ಯಾ. ದೇವದಾಸ್ ಆರ್. ಅವರು, ಇತರೆ ರಾಜ್ಯಗಳ ಶಾಲಾ ಶುಲ್ಕ ವಿವಾದಕ್ಕೆ ಸಂಬಂಧಿಸಿದಂತೆ ಸುಪ್ರೀಂಕೋರ್ಟ್ ತೀರ್ಪನ್ನು ಉಲ್ಲೇಖಿಸಿ ರಾಜ್ಯದಲ್ಲಿ 2019- 20 ನೇ ಸಾಲಿನ ಶಾಲಾ ಶುಲ್ಕವನ್ನು ಶೇ. 15 ರಷ್ಟು ಕಡಿತ ಮಾಡುವಂತೆ ತೀರ್ಪು ನೀಡಿದ್ದಾರೆ.

ಮಾತ್ರವಲ್ಲದೇ ಖಾಸಗಿ ಶಾಲೆಗಳ ಶುಲ್ಕ ನಿಗಧಿ ವಿಚಾರದಲ್ಲಿ ಸರ್ಕಾರ ಮೂಗು ತೂರಿಸಬಾರದು ಎಂದು ಕೋರ್ಟ್ ಮಹತ್ವದ ತೀರ್ಪು ನೀಡಿದೆ. ಈ ಮೂಲಕ ರಾಜ್ಯದಲ್ಲಿ ಶಾಲಾ ಶುಲ್ಕದಲ್ಲಿ ಎದ್ದಿದ್ದ ದೊಡ್ಡ ಗೊಂದಲಕ್ಕೆ ನ್ಯಾಯಾಲಯ ತೆರೆ ಎಳೆದಿದೆ.

2020-21ನೇ ಶೈಕ್ಷಣಿಕ ಸಾಲಿನಲ್ಲಿ ಖಾಸಗಿ ಶಾಲೆಗಳ ಬೋಧನಾ ಶುಲ್ಕವನ್ನು ಶೇ.30ರಷ್ಟುಕಡಿತಗೊಳಿಸಿದ್ದ ರಾಜ್ಯ ಸರ್ಕಾರ, ಶೇ.70ರಷ್ಟುಬೋಧನಾ ಶುಲ್ಕ ಹೊರತುಪಡಿಸಿ ಬೇರೆ ಯಾವುದೇ ಶುಲ್ಕ ಪಡೆಯುವಂತಿಲ್ಲ ಎಂದು ಸರ್ಕಾರ 2021ರ ಜ.29ರಂದು ಆದೇಶಿಸಿತ್ತು. ಈ ಆದೇಶವನ್ನು ಹೈಕೋರ್ಟ್‌ನಲ್ಲಿ ಪ್ರಶ್ನಿಸಿದ್ದ ಖಾಸಗಿ ಶಾಲೆಗಳು, ಸರ್ಕಾರದ ಆದೇಶದಿಂದ ಶಾಲೆಗಳಲ್ಲಿ ಕಡಿಮೆ ಶುಲ್ಕ ಸಂಗ್ರಹವಾಗಲಿದೆ. ಬೋಧಕ ಮತ್ತು ಬೋಧಕೇತರ ಸಿಬ್ಬಂದಿಗೆ ವೇತನ ಪಾವತಿಸಲು ಕಷ್ಟವಾಗುತ್ತದೆ. ಶಾಲೆಗಳ ಸಮರ್ಪಕ ಕಾರ್ಯನಿರ್ವಹಣೆ ಸಾಧ್ಯವಾಗುವುದಿಲ್ಲ. ಮೇಲಾಗಿ ಶುಲ್ಕ ಕಡಿತಗೊಳಿಸಿದ ಆದೇಶ ಶಿಕ್ಷಣ ಕಾಯ್ದೆಯ ನಿಯಮಗಳಿಗೆ ವಿರುದ್ಧವಾಗಿದೆ ಎಂದು ಆಕ್ಷೇಪಿಸಿದ್ದರು.

ಅರ್ಜಿ ವಿಚಾರಣೆ ನಡೆಸಿದ್ದ ಹೈಕೋರ್ಟ್‌, ಖಾಸಗಿ ಶಾಲೆಗಳ ಮೇಲೆ ಸರ್ಕಾರ ಬಲವಂತದ ಕ್ರಮ ಕೈಗೊಳ್ಳಬಾರದು. ಖಾಸಗಿ ಶಾಲೆಗಳೂ ಸಹ ಶುಲ್ಕ ಪಡೆಯುವಾಗ ಪ್ರತಿಯೊಬ್ಬ ಪಾಲಕರ ಅಹವಾಲು ಪರಿಗಣಿಸಬೇಕೆಂದು ಮಧ್ಯಂತರ ಆದೇಶ ನೀಡಿತ್ತು.

ಅದಾದ ನಂತರವೂ ಕೆಲ ಖಾಸಗಿ ಶಾಲೆಗಳು ಸಂಪೂರ್ಣ ಶುಲ್ಕ ಪಾವತಿಸುವಂತೆ ಒತ್ತಡ ಹೇರುತ್ತಿವೆ ಎಂಬ ಆರೋಪ ಹಿನ್ನೆಲೆಯಲ್ಲಿ ಮಧ್ಯಂತರ ಅರ್ಜಿ ಸಲ್ಲಿಸಿದ್ದ ಸರ್ಕಾರ, ಶುಲ್ಕ ನಿಗದಿ ವಿವಾದ ಬಗೆಹರಿಸಲು ಹೈಕೋರ್ಟ್‌ ನಿವೃತ್ತ ನ್ಯಾಯಮೂರ್ತಿಯೊಬ್ಬರ ನೇತೃತ್ವದಲ್ಲಿ ಸಮಿತಿ ರಚನೆಗೆ ಮನವಿ ಮಾಡಿತ್ತು.

ಈ ಮಧ್ಯೆ ಸುಪ್ರೀಂ ಕೋರ್ಟ್‌, ಖಾಸಗಿ ಶಾಲೆಗಳು 2020-21ನೇ ಸಾಲಿನ ಶುಲ್ಕದಲ್ಲಿ ಶೇ.15ರಷ್ಟು ರಿಯಾಯಿತಿ ನೀಡಿ, ಬಾಕಿ ಶುಲ್ಕ ಸಂಗ್ರಹಿಸಬೇಕು. ಶುಲ್ಕ ಪಾವತಿಸದ ವಿದ್ಯಾರ್ಥಿಗಳನ್ನು ಯಾವುದೇ ಕಾರಣಕ್ಕೂ ಆನ್‌ಲೈನ್‌ ಅಥವಾ ಭೌತಿಕ ತರಗತಿಗಳಲ್ಲಿ ಭಾಗವಹಿಸದಂತೆ ನಿರ್ಬಂಧಿಸಬಾರದು. ವಿದ್ಯಾರ್ಥಿಗಳ ಪರೀಕ್ಷಾ ಫಲಿತಾಂಶ ತಡೆಹಿಡಿಯಬಾರದು. ಶುಲ್ಕ ಪಾವತಿಸಲು ಕಷ್ಟವಾಗುತ್ತಿರುವ ಬಗ್ಗೆ ಯಾವುದೇ ವಿದ್ಯಾರ್ಥಿ ಅಥವಾ ಪಾಲಕರು ಮನವಿ ಸಲ್ಲಿಸಿದರೆ, ಅವುಗಳನ್ನು ಪ್ರತ್ಯೇಕವಾಗಿ ಅನುಕಂಪದ ಆಧಾರದಲ್ಲಿ ಪರಿಗಣಿಸಿ ನಿರ್ಧಾರ ಕೈಗೊಳ್ಳಬೇಕು ಎಂದು ನಿರ್ದೇಶಿಸಿ 2021ರ ಮೇ 3ರಂದು ತೀರ್ಪು ನೀಡಿತ್ತು.

ಇದರಿಂದ ಶುಲ್ಕ ನಿಗದಿಪಡಿಸಲು ಸರ್ಕಾರಕ್ಕೆ ಯಾವುದೇ ಅಧಿಕಾರವಿಲ್ಲ ಎಂಬುದಾಗಿ ಸುಪ್ರೀಂಕೋರ್ಟ್‌ ಆದೇಶ ನೀಡಿದೆ. ಹಾಗಾಗಿ, ಸರ್ಕಾರ ಈ ವಿಚಾರದಲ್ಲಿ ಮಧ್ಯಪ್ರವೇಶ ಮಾಡಬಾರದು ಎಂದು ವಾದಿಸಿದ್ದ ಅರ್ಜಿದಾರ ಖಾಸಗಿ ಶಾಲೆಗಳು, 2020-21ನೇ ಸಾಲಿನ ಬೋಧನಾ ಶುಲ್ಕದಲ್ಲಿ ಶೇ.15ರಷ್ಟು ವಿನಾಯಿತಿ ನೀಡುವುದಾಗಿ ಹೈಕೋರ್ಟ್‌ಗೆ ಸ್ವಯಂ ಹೇಳಿಕೆ ನೀಡಿದ್ದವು. ಅದನ್ನು ಪರಿಗಣಿಸಿದ ಹೈಕೋರ್ಟ್‌, ಸುಪ್ರೀಂ ಕೋರ್ಟ್‌ ಅನುಸಾರ 2020-21ನೇ ಸಾಲಿಗೆ ಬೋಧನಾ ಶುಲ್ಕದಲ್ಲಿ ಶೇ.15ರಷ್ಟು ವಿನಾಯಿತಿ ನೀಡುವಂತೆ ರಾಜ್ಯದ ಖಾಸಗಿ ಶಾಲೆಗಳಿಗೆ ನಿರ್ದೇಶಿಸಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

'ನನ್ನ ಕುರ್ಚಿ'ಗೆ ಪ್ರಧಾನಿ ಮೋದಿ ಗೌರವ ನೀಡಬೇಕು: ಪಶ್ಚಿಮ ಬಂಗಾಳ ಸಿಎಂ ಮಮತಾ ಬ್ಯಾನರ್ಜಿ ಕಿಡಿ!

ಸುಪ್ರೀಂ ಕೋರ್ಟ್‌ಗೆ ನ್ಯಾ. ಪಾಂಚೋಲಿ ಹೆಸರು ಶಿಫಾರಸು: ನ್ಯಾ. ಬಿ. ವಿ. ನಾಗರತ್ನ ತೀವ್ರ ಅಸಮಾಧಾನ!

SCROLL FOR NEXT