ಸಂಗ್ರಹ ಚಿತ್ರ 
ರಾಜ್ಯ

ಹಾಸನ ಜಿಲ್ಲೆಯ ಸುತ್ತಮುತ್ತ ಲಘು ಭೂಕಂಪನ

ಜಿಲ್ಲೆಯ ಹಳೇಬೀಡು, ಅಡಗೂರು, ಸಾಲಗಾಮೆ ಹಾಗೂ ಹಾಸನದ ಕೆಲವೆಡೆಗಳಲ್ಲಿ ಶುಕ್ರವಾರ ಸಂಜೆ ಭೂಮಿ ಅದುರಿದ ಅನುಭವವಾಗಿದೆ. 

ಹಾಸನ: ಜಿಲ್ಲೆಯ ಹಳೇಬೀಡು, ಅಡಗೂರು, ಸಾಲಗಾಮೆ ಹಾಗೂ ಹಾಸನದ ಕೆಲವೆಡೆಗಳಲ್ಲಿ ಶುಕ್ರವಾರ ಸಂಜೆ ಭೂಮಿ ಅದುರಿದ ಅನುಭವವಾಗಿದೆ. 

ಹಾಸನ ನಗರ ಮಾತ್ರವಲ್ಲದೆ ವಿಶ್ವವಿಖ್ಯಾತ ಬೇಲೂರು ತಾಲೂಕಿನ ಹಳೆಬೀಡು ಸಮೀಪದ ದ್ಯಾವಪ್ಪನಹಳ್ಳಿ, ನಿಂಗಪ್ಪನಕೊಪ್ಪಲು ಸೇರಿ ಹಲವೆಡೆ ಭೂಕಂಪನ ಅನುಭವವಾಗಿದೆ. ಇದರಿಂದ ಆತಂಕಗೊಂಡ ನಿವಾಸಿಗಳು ಮನೆಯ ಹೊರಗಡೆ ಓಡಿ ಬಂದಿದ್ದಾರೆ. ಜನರು ನೀಡಿದ ಮಾಹಿತಿ ಮೇಲೆ ಸ್ಥಳಕ್ಕೆ ಹಳೆಬೀಡು ಪೊಲೀಸರು ಭೇಟಿ ನೀಡಿದ್ದಾರೆ.

ಹಾಸನ ನಗರ ಸುತ್ತಮುತ್ತ 5 ಗಂಟೆ 28  ನಿಮಿಷದ ಸುಮಾರಿಗೆ ಭೂಮಿ ಕಂಪಿಸಿದ ಅನುಭವವಾಗಿದೆ. ಬೇಲೂರು ಸುತ್ತಮುತ್ತ ಸಂಜೆ 6 ಗಂಟೆ 10 ನಿಮಿಷದ ಸುಮಾರಿಗೆ ಭೂಮಿ ಕಂಪಿಸಿದ ಅನುಭವವಾಗಿದೆ. ಹಾಸನದಲ್ಲಿ ಭೂಕಂಪನದ ರಿಕ್ಟರ್ ಮಾಪನದಲ್ಲಿ 2.3 ತೀವ್ರತೆ ದಾಖಲಾಗಿದೆ.

ಸಾಲಗಾಮೆ ಹೋಬಳಿಯ, ರಾಯಪುರದ ಬಳಿ 2.3 ರಷ್ಟು ಕಂಪನ ದಾಖಲಾಗಿದ್ದು, ಈ ಕಂಪನಕ್ಕೆ ಜನರು ಹೆದರುವ ಅವಶ್ಯಕತೆಯಿಲ್ಲ. ಇದರಿಂದ ಯಾವುದೇ ಸಮಸ್ಯೆಯಿಲ್ಲ ಎಂದು ಹಾಸನ ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರದ ಅಧಿಕಾರಿಗಳು ತಿಳಿಸಿದ್ದಾರೆ.

ಸಂಜೆಯಾಗಿದ್ದ ಕಾರಣ ಗ್ರಾಮಾಂತರ ಪ್ರದೇಶಗಳಲ್ಲಿ ದನಕರುಗಳನ್ನು ಕೊಟ್ಟಿಗೆಗೆ ಕಟ್ಟಲಾಗುತ್ತಿತ್ತು. ಭೂಮಿ ಲಭುವಾಗಿ ಕಂಪಿಸುತ್ತಿದ್ದಂತೆಯೇ ದನಕರು ಹಾಗೂ ಕೋಳಿ, ಪಕ್ಷಿಗಳು ವಿಚಲಿತಗೊಂಡು ಕೂಗಲಾರಂಭಿಸಿದವು. ಕ್ಷಣಮಾತ್ರಕ್ಕೆ ಏನೆಂದು ಅರ್ಥವಾಗದ ಜನರು ಕೂಡ ಭೂಮಿಯಲ್ಲಿ ಲಘುವಾದ ಕಂಪನದ ಅನುಭವವಾಯಿತೇ ವಿನಃ ಇದು ಭೂಕಂಪನ ಎನ್ನುವ ಕೊಂಚ ಅರಿವು ಕೂಡ ಇರಲಿಲ್ಲ. 

ಸೆಪ್ಟೆಂಬರ್​ 4ನೇ ತಾರೀಖಿನಂದು ವಿಜಯಪುರ ಜಿಲ್ಲೆಯ ವಿವಿಧ ಭಾಗಗಳಲ್ಲಿ ಭೂಕಂಪವಾಗಿತ್ತು. ಅಂದು ರಿಕ್ಟರ್ ಮಾಪನದಲ್ಲಿ 3.9ರಷ್ಟು ತೀವ್ರತೆ ದಾಖಲಾಗಿತ್ತು. ಬಳಿಕ ಸರಿಯಾಗಿ ಒಂದು ವಾರದ ಅಂತರದಲ್ಲಿ ಮತ್ತೆ ಭೂಮಿ ನಡುಗಿದ ಅನುಭವ ಆಗಿತ್ತು.

ಒಂದು ವಾರದ ಹಿಂದೆ ಭೂಕಂಪ ಆಗಿರುವ ಬಗ್ಗೆ ಹಾಗೂ ಅದರ ತೀವ್ರತೆ ಬಗ್ಗೆ ಜಿಲ್ಲಾಡಳಿತ ಹಾಗೂ ಗಣಿ ಮತ್ತು ಭೂವಿಜ್ಞಾನ ಇಲಾಖೆ ಅಧಿಕಾರಿಗಳು ಮಾಹಿತಿ ನೀಡಿದ್ದರು. ಇದೀಗ ಮತ್ತೆ ಹಾಸನದಲ್ಲಿ ಇಂತಹ ಅನುಭವ ಆಗಿದೆ. ಈ ಬಗ್ಗೆ ಹೆಚ್ಚಿನ ವಿವರಗಳು ಇನ್ನಷ್ಟೇ ಲಭಿಸಬೇಕಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಲಾಲ್ ಬಾಗ್ ಅಭಿವೃದ್ಧಿಗೆ 10 ಕೋಟಿ ರೂ; ಸುರಂಗ ರಸ್ತೆ ಯೋಜನೆಯಿಂದ ಸಸ್ಯೋದ್ಯಾನದ ಮೇಲೆ ಯಾವುದೇ ಎಫೆಕ್ಟ್ ಆಗಲ್ಲ: ಡಿ.ಕೆ ಶಿವಕುಮಾರ್; Video

ಬೆಳಗಾವಿ ಡಿಸಿಸಿ ಬ್ಯಾಂಕ್ ಚುನಾವಣೆ: ಒಂದಾದ ಜಾರಕಿಹೊಳಿ ಬ್ರದರ್ಸ್‌ಗೆ ಜಾಕ್‌ಪಾಟ್; ರಮೇಶ್ ಕತ್ತಿ ಬಣಕ್ಕೆ ಶಾಕ್!

ನೊಬೆಲ್ ಶಾಂತಿ ಪ್ರಶಸ್ತಿ ಘೋಷಣೆಯಾಗುತ್ತಿದ್ದಂತೆಯೇ Maria Corina Machado ವಿವಾದಕ್ಕೆ ಗುರಿ; ಭುಗಿಲೆದ್ದ ಅಶಾಂತಿ!

Shocking: ಹೆಣ್ಣಿನ ಶವ ಎಳೆದೊಯ್ದು ಶವಾಗಾರದಲ್ಲೇ ಅತ್ಯಾಚಾರ, 25ರ ಯುವಕನಿಂದ ಪೈಶಾಚಿಕ ಕೃತ್ಯ, CCTV Video

Belagavi: ಲವರ್ ಜೊತೆ ಮಗಳು ಪರಾರಿ; ಇಡೀ ಊರಿಗೆ 'ತಿಥಿ' ಊಟ ಹಾಕಿಸಿದ ತಂದೆ!

SCROLL FOR NEXT