ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ರಾಜ್ಯ

ನಟ ದರ್ಶನ್ ಒಡೆತನದ ಫಾರ್ಮ್ ಹೌಸ್ ನಲ್ಲಿ ಅಪ್ರಾಪ್ತೆ ಮೇಲೆ ಅತ್ಯಾಚಾರ: ದೂರು ದಾಖಲು

ನಟ ದರ್ಶನ್‌ ಒಡೆತನದ ವಿನೇಶ್ ಫಾರಂ ಹೌಸ್‌ನಲ್ಲಿ ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ ನಡೆದಿರುವುದಾಗಿ ಬಾಲಕಿಯ ತಾಯಿ ಪೊಲೀಸರಿಗೆ ದೂರು ನೀಡಿದ್ದು, ಎಫ್‌ಐಆರ್ ದಾಖಲಾಗಿದೆ.

ಸಾಂದರ್ಭಿಕ ಚಿತ್ರ
Shilpa D
Updated On : 18 Sept 2021, 1:46 pm

ಮೈಸೂರು: ನಟ ದರ್ಶನ್‌ ಒಡೆತನದ ವಿನೇಶ್ ಫಾರಂ ಹೌಸ್‌ನಲ್ಲಿ ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ ನಡೆದಿರುವುದಾಗಿ ಬಾಲಕಿಯ ತಾಯಿ ಪೊಲೀಸರಿಗೆ ದೂರು ನೀಡಿದ್ದು, ಎಫ್‌ಐಆರ್ ದಾಖಲಾಗಿದೆ. 

ಟಿ. ನರಸೀಪುರ ರಸ್ತೆಯಲ್ಲಿರುವ ಫಾರಂ ಹೌಸ್‌ನಲ್ಲಿ ಕೆಲಸ‌ ಮಾಡಿಕೊಂಡಿದ್ದ ಶಿವಮೊಗ್ಗ ಮೂಲದ ಕುಟುಂಬವೊಂದರ ಅಪ್ರಾಪ್ತೆ ಮೇಲೆ ಸೆ.13 ರಂದು ಸೋಮವಾರ ರಾತ್ರಿ ಅದೇ ತೋಟದಲ್ಲಿ ಕುದುರೆ ಲಾಯದಲ್ಲಿ ಕೆಲಸ ಮಾಡಿಕೊಂಡಿದ್ದ ವ್ಯಕ್ತಿ ಅತ್ಯಾಚಾರ ನಡೆಸಿದ್ದಾನೆ ಎಂಬುದು ಗೊತ್ತಾಗಿದೆ. ಈ ಸಂಬಂಧ ಮೈಸೂರು ಮಹಿಳಾ ಪೊಲೀಸ್ ಠಾಣೆಯಲ್ಲಿ ಪೋಕ್ಸೊ ಕಾಯಿದೆಯಡಿ ಪ್ರಕರಣ ದಾಖಲಾಗಿದೆ.

ಶಿವಮೊಗ್ಗದಿಂದ ಬಂದ ಕುಟುಂಬವೊಂದು ವಿನೇಶ್ ಫಾರಂ ಹೌಸ್‌ನಲ್ಲಿ ಕೂಲಿ ಕೆಲಸ ಮಾಡುತ್ತಿತ್ತು. ಕುಟುಂಬದಲ್ಲಿ ತಾಯಿ, ತಂದೆ ಜೊತೆಗೆ 10 ವರ್ಷದ ಮಗಳು ಹಾಗೂ ಮಗನೊಬ್ಬನಿದ್ದ. ವರ್ಗಾವಣೆ ಪತ್ರದ ಸಮಸ್ಯೆಯಿಂದ ಮಗಳು ಶಾಲೆಗೆ ಹೋಗದೆ ಕುಟುಂಬದ ಜೊತೆಯೇ ವಾಸವಿದ್ದಳು.

Advertisement

Advertisement

ಅದೇ ಫಾರಂ ಹೌಸ್‌ನಲ್ಲಿ ಕುದುರೆಗೆ ಲಾಯ ಹೊಡೆಯುವ ಕೆಲಸ ಮಾಡುತ್ತಿದ್ದ ಬಿಹಾರ ಮೂಲದ ನಜೀಮ್ ಎಂಬಾತ ಇದ್ದ. ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ ಎಸಗಿದ್ದಾನೆ. ಘಟನೆ ಸೆಪ್ಟೆಂಬರ್ 13 ರಂದು ನಡೆದಿದ್ದು, ಸಂತ್ರಸ್ತೆಯ ತಾಯಿ ಸೆಪ್ಟೆಂಬರ್ 15 ರಂದು ದೂರು ನೀಡಿದ್ದಾರೆ.

ಸಂತ್ರಸ್ತೆಯ ತಾಯಿ ನೀಡಿದ ದೂರಿನ ಆಧಾರದ ಮೇಲೆ ಪೋಕ್ಸೊ ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ಆರೋಪಿಯನ್ನು ಬಂಧಿಸಿ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದ್ದಾರೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

Show comments