ನಾಳೆ ಸಿಇಟಿ ಫಲಿತಾಂಶ ಪ್ರಕಟ- ಡಾ. ಸಿ. ಎನ್. ಅಶ್ವತ್ಥ ನಾರಾಯಣ
ವೃತ್ತಿಪರ ಕೋರ್ಸುಗಳ ಪ್ರವೇಶಕ್ಕಾಗಿ ಆಗಸ್ಟ್ 28, 29 & 30ರಂದು ನಡೆದಿದ್ದ ಸಾಮಾನ್ಯ ಪ್ರವೇಶ ಪರೀಕ್ಷೆ (ಸಿಇಟಿ) ಫಲಿತಾಂಶ ಸೋಮವಾರ ಪ್ರಕಟವಾಗಲಿದೆ ಎಂದು ಉನ್ನತ ಶಿಕ್ಷಣ ಸಚಿವ ಡಾ.ಸಿ.ಎನ್.ಅಶ್ವತ್ಥನಾರಾಯಣ ತಿಳಿಸಿದ್ದಾರೆ.
ಬೆಂಗಳೂರು: ವೃತ್ತಿಪರ ಕೋರ್ಸುಗಳ ಪ್ರವೇಶಕ್ಕಾಗಿ ಆಗಸ್ಟ್ 28, 29 & 30ರಂದು ನಡೆದಿದ್ದ ಸಾಮಾನ್ಯ ಪ್ರವೇಶ ಪರೀಕ್ಷೆ (ಸಿಇಟಿ) ಫಲಿತಾಂಶ ಸೋಮವಾರ ಪ್ರಕಟವಾಗಲಿದೆ ಎಂದು ಉನ್ನತ ಶಿಕ್ಷಣ ಸಚಿವ ಡಾ.ಸಿ.ಎನ್.ಅಶ್ವತ್ಥನಾರಾಯಣ ತಿಳಿಸಿದ್ದಾರೆ.
ಈ ಬಗ್ಗೆ ಹೇಳಿಕೆ ನೀಡಿರುವ ಅವರು, ದಾಖಲೆಯ ಕಡಿಮೆ ಕಾಲಾವಧಿಯಲ್ಲೇ ಫಲಿತಾಂಶ ಪ್ರಕಟವಾಗಲಿದೆ. ಇದಕ್ಕಾಗಿ ಪರೀಕ್ಷಾ ಪ್ರಾಧಿಕಾರದ ಅಧಿಕಾರಿಗಳು, ಸಿಬ್ಬಂದಿ ಅವಿರತವಾಗಿ ಶ್ರಮಿಸಿದ್ದಾರೆ ಎಂದಿದ್ದಾರೆ.
ನಾಳೆ ಸಂಜೆ 4 ಗಂಟೆ ನಂತರ https://cetonline.karnataka.gov.in/kea ಲಿಂಕ್ ನಲ್ಲಿ ಫಲಿತಾಂಶ ಪ್ರಕಟವಾಗಲಿದೆ.
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.