ಶಾಸಕ ಎಸ್‌.ಎ.ರಾಮದಾಸ್‌ 
ರಾಜ್ಯ

ಅನಧಿಕೃತ ದೇವಾಲಯಗಳ ಸಕ್ರಮಕ್ಕೆ ಖಾಸಗಿ ವಿಧೇಯಕ ಮಂಡಿಸುತ್ತೇನೆ: ಶಾಸಕ ಎಸ್‌.ಎ.ರಾಮದಾಸ್‌

ರಾಜ್ಯದಲ್ಲಿರುವ ಅನಧಿಕೃತ ದೇವಾಲಯಗಳನ್ನು ಸಕ್ರಮಗೊಳಿಸುವ ಉದ್ದೇಶದಿಂದ ಸೆ.23ರಂದು ವಿಧಾನಸಭೆಯ ಅಧಿವೇಶನದಲ್ಲಿ ‘ಕರ್ನಾಟಕ ರಾಜ್ಯದಲ್ಲಿ ಅನಧಿಕೃತವಾಗಿ ನಿರ್ಮಾಣಗೊಂಡ ಹಿಂದೂ ದೇವಾಲಯಗಳ ಕ್ರಮಬದ್ಧಗೊಳಿಸುವಿಕೆಯ ಕಾಯ್ದೆ–2021’ ಎಂಬ ಖಾಸಗಿ ವಿಧೇಯಕವನ್ನು ಮಂಡಿಸಲಿದ್ದೇನೆ ಎಂದು ಶಾಸಕ ಎಸ್‌.ಎ.ರಾಮದಾಸ್‌ ಅವರು ಶನಿವಾರ ಹೇಳಿದ್ದಾರೆ.

ಮೈಸೂರು: ರಾಜ್ಯದಲ್ಲಿರುವ ಅನಧಿಕೃತ ದೇವಾಲಯಗಳನ್ನು ಸಕ್ರಮಗೊಳಿಸುವ ಉದ್ದೇಶದಿಂದ ಸೆ.23ರಂದು ವಿಧಾನಸಭೆಯ ಅಧಿವೇಶನದಲ್ಲಿ ‘ಕರ್ನಾಟಕ ರಾಜ್ಯದಲ್ಲಿ ಅನಧಿಕೃತವಾಗಿ ನಿರ್ಮಾಣಗೊಂಡ ಹಿಂದೂ ದೇವಾಲಯಗಳ ಕ್ರಮಬದ್ಧಗೊಳಿಸುವಿಕೆಯ ಕಾಯ್ದೆ–2021’ ಎಂಬ ಖಾಸಗಿ ವಿಧೇಯಕವನ್ನು ಮಂಡಿಸಲಿದ್ದೇನೆ ಎಂದು ಶಾಸಕ ಎಸ್‌.ಎ.ರಾಮದಾಸ್‌ ಅವರು ಶನಿವಾರ ಹೇಳಿದ್ದಾರೆ.

ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ರಾಜ್ಯದಲ್ಲಿ 2,818 ಅನಧಿಕೃತ ದೇವಸ್ಥಾನಗಳಿವೆ. ಈ ಪೈಕಿ ರಸ್ತೆ ಮಧ್ಯೆ ಇರುವ, ಓಡಾಟಕ್ಕೆ ಸಮಸ್ಯೆಯಾಗಿರುವ ದೇವಸ್ಥಾನಗಳನ್ನು ಬಿಟ್ಟು ಉಳಿದವುಗಳನ್ನು ಸಕ್ರಮಗೊಳಿಸಬೇಕು ಎಂಬ ಒತ್ತಾಸೆಯಿಂದಾಗಿ ಖಾಸಗಿ ವಿಧೇಯಕವನ್ನು ಸಿದ್ಧಪಡಿಸಿ ಮುಖ್ಯಮಂತ್ರಿ ಹಾಗೂ ವಿಧಾನಸಭಾಧ್ಯಕ್ಷರಿಗೆ ಸಲ್ಲಿಸಿದ್ದೇನೆ. ಇದರಿಂದ 2009ರ ನಂತರ ನಿರ್ಮಾಣಗೊಂಡ ಅನಧಿಕೃತ ದೇವಸ್ಥಾನಗಳನ್ನು ಕ್ರಮಬದ್ಧಗೊಳಿಸಲು ಕಾನೂನಾತ್ಮಕ ಬಲ ಸಿಗಲಿದೆ. ಈ ವಿಧೇಯಕದಲ್ಲಿ 10 ವಿಭಾಗಗಳಿವೆ. ಸಕ್ಷಮ ಪ್ರಾಧಿಕಾರ ರಚನೆ, ಅದರ ಅಧಿಕಾರ ವ್ಯಾಪ್ತಿ, ಕ್ರಮಬದ್ಧಗೊಳಿಸುವಿಕೆ, ಭವಿಷ್ಯದಲ್ಲಿ ಅನಧಿಕೃತವಾಗಿ ದೇವಸ್ಥಾನ ನಿರ್ಮಿಸುವವರ ವಿರುದ್ಧ ಕ್ರಮಕೈಗೊಳ್ಳುವುದು ಸೇರಿದಂತೆ ಅನೇಕ ಅಂಶಗಳನ್ನು ಒಳಗೊಂಡಿದೆ ಎಂದು ಹೇಳಿದ್ದಾರೆ. 

ಈ ವಿಧೇಯಕ ಜಾರಿಗೊಳಿಸಲು ಸಹಕರಿಸುವಂತೆ ಕೋರಿ ಸೆ.20ರಂದು ಕಾಂಗ್ರೆಸ್‌ ನಾಯಕರಾದ ಸಿದ್ದರಾಮಯ್ಯ, ಡಿ.ಕೆ.ಶಿವಕುಮಾರ್‌, ಜೆಡಿಎಸ್‌ ನಾಯಕರಾದ ಎಚ್‌.ಡಿ.ಕುಮಾರಸ್ವಾಮಿ, ಎಚ್‌.ಡಿ.ರೇವಣ್ಣ ಅವರಿಗೂ ಪತ್ರ ಬರೆದು ಮನವಿ ಸಲ್ಲಿಸುತ್ತೇನೆ. ಸುಪ್ರೀಂಕೋರ್ಟ್‌ ನೀಡಿರುವ ತಾತ್ಕಾಲಿಕ ಆದೇಶವನ್ನು ಪಾಲಿಸುತ್ತಲೇ ದೇವಸ್ಥಾನಗಳನ್ನು ಸಕ್ರಮಗೊಳಿಸಲು ಅವಕಾಶವಿತ್ತು. 

ಕೆಲ ರಾಜ್ಯಗಳು ಈಗಾಗಲೇ ಕಾಯ್ದೆಗಳನ್ನು ರೂಪಿಸಿದ್ದರೆ, ಮತ್ತೆ ಕೆಲ ರಾಜ್ಯಗಳು ನಿಯಮಗಳು ಮತ್ತು ಮಾರ್ಗಸೂಚಿಗಳನ್ನು ರೂಪಿಸಿ ಸುಪ್ರೀಂಕೋರ್ಟ್‌ಗೆ ಸಲ್ಲಿಸಿವೆ. ಅದೇ ರೀತಿ, ಕರ್ನಾಟಕ ಸರ್ಕಾರವು ಕಾಯ್ದೆ ಅಥವಾ ನಿಯಮಗಳು ಮತ್ತು ಮಾರ್ಗಸೂಚಿಗಳನ್ನು ರೂಪಿಸಿ ಕೋರ್ಟ್‌ಗೆ ಅಫಿಡವಿಟ್‌ ಸಲ್ಲಿಸಬೇಕಿತ್ತು. ಈಗ ಮಂಡಿಸಲಿರುವ ಖಾಸಗಿ ವಿಧೇಯಕವನ್ನು ಚರ್ಚಿಸಿ, ಕಾಯ್ದೆ ರೂಪದಲ್ಲಿ ಜಾರಿಗೊಳಿಸಬೇಕು ಎಂದು ಮನವಿ ಮಾಡಿದ್ದಾರೆ. 

‘ನಂಜನಗೂಡು ತಾಲ್ಲೂಕಿನ ಉಚ್ಚಗಣಿ ಗ್ರಾಮದ ಮಹದೇವಮ್ಮ ದೇವಸ್ಥಾನವನ್ನು 2009ಕ್ಕಿಂತ ಹಿಂದೆ ನಿರ್ಮಾಣಗೊಂಡಿದ್ದು, ಇದನ್ನು ನೆಲಸಮಗೊಳಿಸಬಾರದಿತ್ತು. ಮೈಸೂರು ನಗರದಲ್ಲಿ 214 ಅನಧಿಕೃತ ಮಂದಿರ, ಚರ್ಚ್‌, ಮಸೀದಿಗಳಿವೆ. ಜಿಲ್ಲೆಯಲ್ಲಿರುವ ಅನಧಿಕೃತ ದೇವಸ್ಥಾನಗಳ ಪಟ್ಟಿಯನ್ನೂ ಈ ಹಿಂದೆ ಜಿಲ್ಲಾಧಿಕಾರಿಯಾಗಿದ್ದ ಹರ್ಷಗುಪ್ತ ಸಿದ್ಧಪಡಿಸಿದ್ದರು. ಆ ಕಡತ ನಾಪತ್ತೆಯಾಗಿದೆ’ ಎಂದು ಬೇಸರ ವ್ಯಕ್ತಪಡಿಸಿದ್ದಾರೆ. 

ರಾಜ್ಯದಲ್ಲಿ ದೇವಾಲಯ ತೆರವು ವಿಚಾರ ಬಿಜೆಪಿಗೆ ನುಂಗಲಾರದ ತುಪ್ಪವಾಗಿ ಪರಿಣಮಿಸಿದೆ. ಪ್ರತಿಪಕ್ಷ ಕಾಂಗ್ರೆಸ್ ಇದನ್ನೇ ಬಂಡವಾಳ ಮಾಡಿಕೊಂಡು ಹೊಸ ರಾಜಕೀಯ ದಾಳ ಉರುಳಿಸುತ್ತಿದೆ. ಹಿಂದೂ ಕಾರ್ಯಕರ್ತರ ಕೆಂಗಣ್ಣಿಗೂ ಬಿಜೆಪಿ ಗುರಿಯಾಗಿದೆ. ಹೀಗಿರುವಾಗಲೇ ಹೊಸ ಮಸೂದೆ ಮಂಡನೆ ಆಗುತ್ತಿರುವುದು ಸಾಕಷ್ಟು ಕುತೂಹಲ ಕೆರಳಿಸಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

26/11 ಮುಂಬೈ ದಾಳಿಗೆ 17 ವರ್ಷ: ಕರಾಳ ದಿನ ನೆನೆದ ದೇಶದ ಜನತೆ, ಹುತಾತ್ಮರಿಗೆ ಭಾವಪೂರ್ಣ ಶ್ರದ್ಧಾಂಜಲಿ

ಸಿಎಂ ಹುದ್ದೆ ಗುದ್ದಾಟ: ಸಿದ್ದರಾಮಯ್ಯ-ಡಿ ಕೆ ಶಿವಕುಮಾರ್ ಗೆ ಹೈಕಮಾಂಡ್ ದೆಹಲಿಗೆ ಬುಲಾವ್ ಸಾಧ್ಯತೆ

ನವೆಂಬರ್ 28ರಂದು ಉಡುಪಿಗೆ ಪ್ರಧಾನಿ ಮೋದಿ: ಬನ್ನಂಜೆಯಿಂದ ಕಲ್ಸಂಕ ಜಂಕ್ಷನ್‌ವರೆಗೆ ರೋಡ್ ಶೋ

ಯುಕ್ರೇನ್-ರಷ್ಯಾ ಶಾಂತಿ ಒಪ್ಪಂದ ಸನಿಹ: ಸುಳಿವು ನೀಡಿದ ಯುಕ್ರೇನ್

2026 T20 ವಿಶ್ವಕಪ್: ಕೊಲಂಬೋದಲ್ಲಿ ಫೆ.15 ರಂದು ಭಾರತ- ಪಾಕ್ ಪಂದ್ಯ

SCROLL FOR NEXT