ಸಂಗ್ರಹ ಚಿತ್ರ 
ರಾಜ್ಯ

ರಾಜ್ಯದಲ್ಲಿ ಕೊರೋನಾ ಇಳಿಕೆ: ಸಾವಿನ ಸಂಖ್ಯೆಯಲ್ಲಿ ಏರಿಕೆ; ಇಂದು 24 ಮಂದಿ ಸಾವು, 677 ಪ್ರಕರಣ ಪತ್ತೆ!

ರಾಜ್ಯದಲ್ಲಿ ಇಂದು ಕೊರೋನಾ ಪ್ರಕರಣಗಳ ಸಂಖ್ಯೆಯಲ್ಲಿ ಭಾರೀ ಇಳಿಮುಖವಾಗಿದ್ದು ಕಳೆದ 24 ಗಂಟೆಯಲ್ಲಿ 677 ಕೊರೋನಾ ಪ್ರಕರಣಗಳು ವರದಿಯಾಗಿದೆ. ಇದರೊಂದಿಗೆ ಸೋಂಕಿತರ ಸಂಖ್ಯೆ 29,68,543ಕ್ಕೆ ಏರಿಕೆಯಾಗಿದೆ.

ಬೆಂಗಳೂರು: ರಾಜ್ಯದಲ್ಲಿ ಇಂದು ಕೊರೋನಾ ಪ್ರಕರಣಗಳ ಸಂಖ್ಯೆಯಲ್ಲಿ ಭಾರೀ ಇಳಿಮುಖವಾಗಿದ್ದು ಕಳೆದ 24 ಗಂಟೆಯಲ್ಲಿ 677 ಕೊರೋನಾ ಪ್ರಕರಣಗಳು ವರದಿಯಾಗಿದೆ. ಇದರೊಂದಿಗೆ ಸೋಂಕಿತರ ಸಂಖ್ಯೆ 29,68,543ಕ್ಕೆ ಏರಿಕೆಯಾಗಿದೆ.

ಮಹಾಮಾರಿಗೆ ಇಂದು 24 ಮಂದಿ ಬಲಿಯಾಗಿದ್ದಾರೆ. ಇದರೊಂದಿಗೆ ಸಾವಿನ ಸಂಖ್ಯೆ 37,627ಕ್ಕೆ ಏರಿಕೆಯಾಗಿದೆ ಎಂದು ಆರೋಗ್ಯ ಸಚಿವಾಲಯ ಮಾಹಿತಿ ನೀಡಿದೆ.

ಬೆಂಗಳೂರಿನಲ್ಲಿ ಇಂದು 213 ಮಂದಿಗೆ ಸೋಂಕು ದೃಢಪಟ್ಟಿದ್ದು, ಇದರೊಂದಿಗೆ ನಗರದಲ್ಲಿ ಸೋಂಕಿತರ ಸಂಖ್ಯೆ 12,43,693ಕ್ಕೆ ಏರಿಕೆಯಾಗಿದೆ. ಇಂದು ನಗರದಲ್ಲಿ 6 ಮಂದಿ ಸಾವನ್ನಪ್ಪಿದ್ದಾರೆ.

ರಾಜ್ಯದಲ್ಲಿ ಇಂದು 1,678 ಸೋಂಕಿತರು ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. ಇದರೊಂದಿಗೆ ಸೋಂಕಿನಿಂದ ಚೇತರಿಸಿಕೊಂಡವರ ಸಂಖ್ಯೆ 29,16,530ಕ್ಕೆ ಏರಿಕೆಯಾಗಿದೆ. ಇನ್ನು14,358 ಸಕ್ರೀಯ ಪ್ರಕರಣಗಳಿವೆ. 

ರಾಜ್ಯಾದ್ಯಂತ ಇಂದು 1,12,160 ಕೋವಿಡ್ ಟೆಸ್ಟ್ ನಡೆಸಲಾಗಿದ್ದು, 677 ಪಾಸಿಟಿವ್ ಪ್ರಕರಣಗಳು ಪತ್ತೆಯಾಗಿವೆ. ಇದರೊಂದಿಗೆ ರಾಜ್ಯದಲ್ಲಿ ಪಾಸಿಟಿವಿಟಿ ದರ ಶೇ. 0.60ಕ್ಕೆ ಇಳಿದಿದೆ.

ರಾಜ್ಯದ ಎಂಟು ಜಿಲ್ಲೆಗಳಾದ ಬಾಗಲಕೋಟೆ, ಚಿಕ್ಕಬಳ್ಳಾಪುರ, ಹಾವೇರಿ, ಕೊಪ್ಪಳ, ರಾಯಚೂರು, ರಾಮನಗರ, ಯಾದಗಿರಿ ಮತ್ತು ವಿಜಯಪುರ ಜಿಲ್ಲೆಗಳಲ್ಲಿ ಶೂನ್ಯ ಪ್ರಕರಣ ವರದಿಯಾಗಿದೆ. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

4 ಜನರಿಗೆ ಒಂದೇ ಟಿಕೆಟ್! ಸಾರಿಗೆ ಇಲಾಖೆಯಲ್ಲಿ ಡೀಸೆಲ್ ಬೆನ್ನಲ್ಲೇ ಟಿಕೆಟ್ ರೋಲ್ ಕೊರತೆ

ದೆಹಲಿಯಲ್ಲಿ ಹೈಡ್ರಾಮಾ: ವಿಮಾನ ನಿಲ್ದಾಣದಲ್ಲಿ ಬಂಧನಕ್ಕೊಳಗಾಗಿದ್ದ CJP ನಾಯಕರಾದ ದೀಪ್ಕೆ, ರಾಂಕಾ, ದಾಸ್ ಕೊನೆಗೂ ಬಿಡುಗಡೆ..!

Riyadh ವಿಮಾನ ನಿಲ್ದಾಣದ ಮೇಲೆ ಕ್ಷಿಪಣಿ ದಾಳಿ: 12 ಮಂದಿ ಸಾವು, 300ಕ್ಕೂ ಹೆಚ್ಚು ಜನರಿಗೆ ಗಾಯ

Operation Sindoor ನಮ್ಮ ಆತ್ಮರಕ್ಷಣೆಯ ಕ್ರಮ, ಪರಮಾಣು ಬೆದರಿಕೆಗೆ ಎಂದಿಗೂ ಮಣಿಯಲ್ಲ: 3 'ಲಕ್ಷ್ಮಣ ರೇಖೆ' ಎಳೆದು ಪಾಕ್'ಗೆ ಭಾರತ ಖಡಕ್ ಎಚ್ಚರಿಕೆ..!

ದೆಹಲಿಯಲ್ಲಿ ನಾಯಕರ ಬಂಧನ, ಮೆಟ್ರೋ ಸ್ಥಗಿತ ಕುರಿತ ನ್ಯಾಯಾಂಗ ನಿಂದನೆ: ಭಾನುವಾರವೂ 'ಸುಪ್ರೀಂ' ವಿಶೇಷ ಪೀಠದಿಂದ ವಿಚಾರಣೆ!