ರಾಜ್ಯ

ಪ್ರಕೃತಿ, ಅಭಿವೃದ್ಧಿಯ ನಡುವೆ ಸಮತೋಲನ ಸಾಧಿಸಬೇಕು: ಬೆಂಗಳೂರು ವಿವಿ ಕುಲಪತಿ ಪ್ರೊ. ವೇಣುಗೋಪಾಲ್

Nagaraja AB

ಬೆಂಗಳೂರು: ಪ್ರಕೃತಿ ಮತ್ತು ಅಭಿವೃದ್ಧಿ ನಡುವೆ ಸಮತೋಲನ ಸಾಧಿಸಬೇಕು ಎಂದು ಬೆಂಗಳೂರು ವಿಶ್ವವಿದ್ಯಾನಿಲಯದ ಕುಲಪತಿ ಪ್ರೊಫೆಸರ್ ಕೆ.ಆರ್. ವೇಣುಗೋಪಾಲ್ ಪ್ರತಿಪಾದಿಸಿದ್ದಾರೆ. 

75ನೇ ಸ್ವಾತಂತ್ರೋತ್ಸವ ಆಚರಣೆ  ಹಿನ್ನೆಲೆಯಲ್ಲಿ ಪರಿಸರ ವಿಜ್ಞಾನ ಇಲಾಖೆಯಿಂದ ಆಯೋಜಿಸಲಾಗಿದ್ದ ಓಜೋನ್ ರಕ್ಷಣೆ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಅವರು, ಬ್ರಹ್ಮಾಂಡ  ವೈವಿಧ್ಯಮಯ ಜೀವನದ ಅಸ್ತಿತ್ವಕ್ಕಾಗಿ ಇರುವ ಪರಿಸರದ ಉತ್ತಮ ಸಂಯೋಜನೆಯಾಗಿದೆ ಎಂದು ಅವರು ಅಭಿಪ್ರಾಯಪಟ್ಟರು.

ಸಿಎಂಆರ್ ವಿಶ್ವವಿದ್ಯಾಲಯದ ಕಾನೂನು ಅಧ್ಯಯನ ಶಾಲೆಯ ಡೀನ್ ಮತ್ತು ಕರ್ನಾಟಕ ರಾಜ್ಯ ಕಾನೂನು ವಿಶ್ವವಿದ್ಯಾಲಯದ ಮಾಜಿ ಉಪಕುಲಪತಿ ಪ್ರೊ ಟಿ ಆರ್ ಸುಬ್ರಹ್ಮಣ್ಯ ಅವರು ವಿಶೇಷ ಉಪನ್ಯಾಸ ನೀಡಿದರು. ಅಲ್ಲದೇ,  ಪರಿಸರಕ್ಕೆ ಸಂಬಂಧಿಸಿದ ವಿವಿಧ ನ್ಯಾಯಾಲಯ ತೀರ್ಪುಗಳು ಮತ್ತು ಒಪ್ಪಂದಗಳ ತತ್ವಗಳ ಕುರಿತು ವಿದ್ಯಾರ್ಥಿಗಳಿಗೆ ಅರಿವು ಮೂಡಿಸಿದರು. 

ವಿವಿಧ ಅತಿಥಿಗಳಿಂದ ಸಸಿಗಳನ್ನು ನೆಡುವ ಮೂಲಕ ಕಾರ್ಯಕ್ರಮ ಮುಕ್ತಾಯಗೊಂಡಿತು. ವಿಭಾಗದ ಅಧ್ಯಕ್ಷ ಡಾ ಬಿ ಸಿ ನಾಗರಾಜ್ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಸ್ವಾಗತಿಸಿದರು. ಇತರ ವಿಭಾಗಗಳ ಪ್ರಾಧ್ಯಾಪಕರು, ಅತಿಥಿ ಅಧ್ಯಾಪಕರು, ಸಂಶೋಧನಾ ವಿದ್ವಾಂಸರು ಮತ್ತು ವಿದ್ಯಾರ್ಥಿಗಳು ಸಮಾರಂಭದಲ್ಲಿ ಉಪಸ್ಥಿತರಿದ್ದರು. 

SCROLL FOR NEXT