ವಿಧಾನ ಪರಿಷತ್ 
ರಾಜ್ಯ

2020ರಿಂದ ರಾಜ್ಯದಲ್ಲಿ 476 ಬಾರಿ ನಿಷೇಧಿತ ಸ್ಯಾಟಲೈಟ್ ಫೋನ್ ಗಳ ಬಳಕೆ ಪತ್ತೆ: ಗೃಹ ಸಚಿವ ಆರಗ ಜ್ಞಾನೇಂದ್ರ

 2020ರಿಂದ ಈವರೆಗೂ ರಾಜ್ಯ ಪೊಲೀಸರು ಹಾಗೂ ಕೇಂದ್ರಿಯಾ ತನಿಖಾ ಸಂಸ್ಥೆಗಳಿಂದ ರಾಜ್ಯದಲ್ಲಿ 476 ಬಾರಿ ನಿಷೇಧಿತ ಸ್ಯಾಟಲೈಟ್ ಫೋನ್ ಗಳ ಬಳಕೆಯಾಗಿರುವುದನ್ನು ಪತ್ತೆ ಮಾಡವೆ ಎಂದು ಗೃಹ ಸಚಿವ ಆರಗ ಜ್ಞಾನೇಂದ್ರ ಅವರು ಮಂಗಳವಾರ ಹೇಳಿದ್ದಾರೆ.

ಬೆಂಗಳೂರು: 2020ರಿಂದ ಈವರೆಗೂ ರಾಜ್ಯ ಪೊಲೀಸರು ಹಾಗೂ ಕೇಂದ್ರಿಯಾ ತನಿಖಾ ಸಂಸ್ಥೆಗಳಿಂದ ರಾಜ್ಯದಲ್ಲಿ 476 ಬಾರಿ ನಿಷೇಧಿತ ಸ್ಯಾಟಲೈಟ್ ಫೋನ್ ಗಳ ಬಳಕೆಯಾಗಿರುವುದನ್ನು ಪತ್ತೆ ಮಾಡವೆ ಎಂದು ಗೃಹ ಸಚಿವ ಆರಗ ಜ್ಞಾನೇಂದ್ರ ಅವರು ಮಂಗಳವಾರ ಹೇಳಿದ್ದಾರೆ. 

ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆ ಸೇರಿದಂತೆ ಕರಾವಳಿ ಭಾಗದಲ್ಲಿ `ಸ್ಯಾಟಲೈಟ್ ನ್' ಬಳಕೆಯ ಸುದ್ದಿಗಳು ಆಗಾಗ ಮಾಧ್ಯಮಗಳಲ್ಲಿ ಬರುತ್ತಿದ್ದು ಈ ಸಂಶಯದ ಬಗ್ಗೆ ಸರಕಾರ ಕೂಡಲೇ ಸ್ಪಷ್ಟನೆ ನೀಡಬೇಕು ಎಂದು ಕಾಂಗ್ರೆಸ್ ಸದಸ್ಯ ಯು.ಟಿ ಖಾದರ್ ಅವರು ನಿನ್ನೆ ವಿಧಾನಸಭೆಯಲ್ಲಿ ಆಗ್ರಹಿಸಿದರು.

ವಿಧಾನಸಭೆ ಶೂನ್ಯವೇಳೆಯಲ್ಲಿ ವಿಷಯ ಪ್ರಸ್ತಾಪಿಸಿದ ಅವರು, ಕರಾವಳಿಯಲ್ಲಿ ಪದೇ ಪದೇ ಸ್ಯಾಟಲೈಟ್ ಫೋನ್ ಬಳಕೆ ಮಾಡಲಾಗುತ್ತಿದೆ ಎಂದು ಸುದ್ದಿಗಳು ಬಿತ್ತರವಾಗುತ್ತಿದ್ದು, ಆ ಭಾಗದ ಜನತೆ ಗೊಂದಲದಲ್ಲಿದ್ದಾರೆ. ಈ ಕುರಿತು ತನಿಖೆ ನಡೆಸಿ ಸರಕಾರ ಅಧಿಕೃತ ಹೇಳಿಕೆಯನ್ನು ನೀಡಬೇಕು' ಎಂದು ಒತ್ತಾಯಿಸಿದರು.

`ವರ್ಷದ ಹಿಂದೆಯೂ ಸ್ಯಾಟ್‍ಲೈಟ್ ಫೋನ್ ಸುದ್ದಿಯಾಗಿತ್ತು. ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿಯ ಯುವಕನೊಬ್ಬನ ಮೇಲೆ ವಿನಾಕಾರಣ ಆರೋಪ ಮಾಡಲಾಗಿತ್ತು. ಆದರೆ, ಪರಿಶೀಲನೆ ನಡೆಸಿದರೆ ಆ ಆರೋಪ ಸುಳ್ಳಾಗಿತ್ತು' ಎಂದು ಖಾದರ್ ಗಮನ ಸೆಳೆದರು.

ಖಾದರ್ ಅವರ ಪ್ರಸ್ತಾಪಕ್ಕೆ ಪ್ರತಿಕ್ರಿಯೆ ನೀಡಿದ ಗೃಹ ಸಚಿವ ಆರಗ ಜ್ಞಾನೇಂದ್ರ, `ರಾಜ್ಯದ ಕರಾವಳಿ ಭಾಗದಲ್ಲಿ ಸ್ಯಾಟಲೈಟ್ ಫೋನ್ ಬಳಕೆ ಬಗ್ಗೆ ಮಾಧ್ಯಮಗಳ ವರದಿ ಗಮನಿಸಿದ್ದೇನೆ. ದೇಶದ ಸುರಕ್ಷತೆಯ ದೃಷ್ಟಿಯಿಂದ ಸ್ಯಾಟಲೈಟ್ ಪೋನ್ ಬಳಕೆ ದೇಶದಲ್ಲಿ ನಿಷೇಧಿಸಲಾಗಿದೆ. ಆದರೂ ಅಲ್ಲಲ್ಲಿ ಬಳಕೆ ಆಗುತ್ತಿರುವುದು ಸರ್ಕಾರದ ಗಮನಕ್ಕೆ ಬಂದಿದೆ' ಎಂದು ಸ್ಪಷ್ಟಪಡಿಸಿದರು.

2011ರ ಮುಂಬೈ ದಾಳಿಯ ಬಳಿಕ ರಾಜ್ಯದಲ್ಲಿ ಸ್ಯಾಟಲೈಟ್ ಫೋನ್ ಬಳಕೆ ನಿಷೇಧ ಮಾಡಲಾಗಿತ್ತು ಆದರೆ, ರಾಜ್ಯದಲ್ಲಿ ಕಳೆದ  2020ರಲ್ಲಿ 256 ಮತ್ತು 2021ರಲ್ಲಿ 220 ಕರೆಗಳಲ್ಲಿ ಸ್ಯಾಟಲೈಟ್ ಫೋನ್ ಬಳಕೆ ಮಾಡುವುದು ಪತ್ತೆ ಮಾಡಲಾಗಿದೆ. ಕೇಂದ್ರ ಗುಪ್ತಚರ ಇಲಾಖೆ ಜೊತೆ ಸಂಪರ್ಕದಲ್ಲಿದ್ದು, ಮಾಹಿತಿ ವಿನಿಮಯ ಮಾಡಿಕೊಳ್ಳಲಾಗುತ್ತಿದೆ. ದೇಶದ ಭದ್ರತೆ ವಿಷಯವೂ ಇದಾಗಿದ್ದು ಹೆಚ್ಚಿನ ಮಾಹಿತಿ ಹಂಚಿಕೊಳ್ಳಲು ಸಾಧ್ಯವಿಲ್ಲ. ಆದರೆ, ಆತಂಕಪಡುವ ಅಗತ್ಯವಿಲ್ಲ. ಮೂಲ ಪತ್ತೆಹಚ್ಚುವ ಕೆಲಸ ಮಾಡಲಾಗುವುದು.

ಕೇಂದ್ರ ಸರ್ಕಾರದ ಏಜೆನ್ಸಿಗಳಾಗ ಸಂಶೋಧನಾ ಮತ್ತು ವಿಶ್ಲೇಷಣಾ ದಳ (ರಾ), ಗುಪ್ತಚರ ದಳದಂತಹ (ಐಬಿ) ಸಂಸ್ಥೆಗಳು ನೀಡುವ ಮಾಹಿತಿ ಅವಲೋಕಿಸಿ ಸ್ಥಳೀಯ ಪೊಲೀಸರು ತನಿಖೆ ಕೈಗೊಳ್ಳುತ್ತಾರೆ. ಕೇಂದ್ರ ತನಿಖಾ ಸಂಸ್ಥೆಗಳೊಂದಿಗೆ ಸಂಪೂರ್ಣ ಸಹಕಾರ ನೀಡುತ್ತಿದ್ದೇವೆ. ಈ ಬಗ್ಗೆ ಹೆಚ್ಚಿಗೆ ಹೇಳಲು ಸಾಧ್ಯವಿಲ್ಲ ಎಂದಷ್ಟೇ ಹೇಳಿದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಮೆದುಳು ತಿನ್ನುವ ಅಮೀಬಾ: ಶಬರಿಮಲೆ ಭಕ್ತರಿಗೆ ರಾಜ್ಯ ಆರೋಗ್ಯ ಇಲಾಖೆಯ ಮಾರ್ಗಸೂಚಿ, ಮುನ್ನೆಚ್ಚರಿಕೆ ಕ್ರಮಗಳೇನು?

POCSO case: ಯಡಿಯೂರಪ್ಪಗೆ ಸಂಕಷ್ಟ, ಡಿ. 2 ರಂದು ವಿಚಾರಣೆಗೆ ಹಾಜರಾಗುವಂತೆ ಕೋರ್ಟ್ ಸಮನ್ಸ್!

'ಆಪರೇಷನ್ ಕಾಡಾನೆ' ಸಕ್ಸಸ್: ನಾಲೆಗೆ ಬಿದ್ದು ಒದ್ದಾಡುತ್ತಿದ್ದ ಗಜರಾಜನ ರಕ್ಷಣೆ, ಅರಣ್ಯ ಇಲಾಖೆ ಸಾಹಸಕ್ಕೆ ಶ್ಲಾಘನೆ! Video

ಕರ್ನಾಟಕ ಜಾಗತಿಕ ನಾವೀನ್ಯತೆ ತಾಣವಾಗಿ ಪರಿವರ್ತಿಸಲು ಮೂರು ನೀತಿ ಅನಾವರಣಗೊಳಿಸಿದ ಸಿಎಂ

ಬಲವಂತವಾಗಿ ಚುಂಬಿಸಿದ ಮಾಜಿ ಪ್ರಿಯಕರ, ನಾಲಿಗೆಯನ್ನೇ ಕಚ್ಚಿ ಕಿತ್ತೆಸೆದ ಮಹಿಳೆ!

SCROLL FOR NEXT