ರಾಜ್ಯ

ಅಕ್ಟೋಬರ್ ಆರಂಭದಲ್ಲಿ ಹಂಪಿಯಲ್ಲಿ 'ಹೆಲಿ-ಟೂರಿಸಂ' ಆರಂಭ!

Manjula VN

ವಿಜಯನಗರ: ಅಕ್ಟೋಬರ್ ಆರಂಭದಲ್ಲಿ ವಿಶ್ವವಿಖ್ಯಾತ ಹಂಪಿಯಲ್ಲಿ ಹೆಲಿ-ಟೂರಿಸಂ ಆರಂಭಿಸಲು ರಾಜ್ಯ ಸರ್ಕಾರ ನಿರ್ಧರಿಸಿದೆ ಎಂದು ತಿಳಿದುಬಂದಿದೆ. 

ರಾಜ್ಯದ ಪ್ರವಾಸೋದ್ಯಮ ಇಲಾಖೆಯ ಪ್ರಮುಖ ಯೋಜನೆಗಳಲ್ಲಿ ಹೆಲಿ ಟೂರಿಸಂ ಕೂಡ ಒಂದಾಗಿದ್ದು, ಯೋಜನೆಯ ಆರಂಭಿಕ ಭಾಗವಾಗಿ ಹಂಪಿಯನ್ನು ಆಯ್ಕೆ ಮಾಡಿಕೊಂಡಿದ್ದು, ಅಕ್ಟೋಬರ್ ಮೊದಲ ವಾರದಲ್ಲಿ ಹಂಪಿಯಲ್ಲಿ ಹೆಲಿ ಟೂರಿಸಂ ಆರಂಭವಾಗಲಿದೆ ಎಂದು ವರದಿಗಳು ತಿಳಿಸಿವೆ. 

ಈಗಾಗಲೇ ಜಿಲ್ಲಾ ಉಸ್ತವಾರಿ ಸಚಿವ ಆನಂದ್ ಸಿಂಗ್ ಅವರು ಅಧಿಕಾರಿಗಳಿಗೆ ಸೂಚನೆ ನೀಡಿದ್ದು, ಯೋಜನೆಗೆ ಎಲ್ಲಾ ರೀತಿಯ ಸಿದ್ಧತೆಗಳನ್ನು ಮಾಡಿಕೊಳ್ಳುವಂತೆ ಸೂಚಿಸಿದ್ದಾರೆಂದು ತಿಳಿದುಬಂದಿದೆ. ಕಮಲಾಪುರ ಹೆಲಿಪ್ಯಾಡ್ ಮೂಲಕ ಪ್ರವಾಸಗಳನ್ನು ಆರಂಭಿಸಲಾಗುತ್ತದೆ ಎಂದು ಹೇಳಲಾಗುತ್ತಿದೆ. 

ಹಂಪಿ ವಿಶ್ವ ಪರಂಪರೆಯ ಪ್ರದೇಶ ನಿರ್ವಹಣಾ ಪ್ರಾಧಿಕಾರದ ಅಧಿಕಾರಿಗಳು ಮಾತನಾಡಿ, ಪ್ರವಾಸಿಗರು ಹೆಲಿಕಾಪ್ಟರ್ ಮೂಲಕ ಹಂಪಿ ಸೌಂದರ್ಯವನ್ನು ಸವಿಯಬಹುದಾಗಿದೆ ಎಂದು ಹೇಳಿದ್ದಾರೆ. 

ಹೊಸ ಜಿಲ್ಲೆಯ ರಚನೆ ಕುರಿತು ಅಕ್ಟೋಬರ್ ಮೊದಲ ವಾರದಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅಧಿಕೃತವಾಗಿ ಘೋಷಿಸಲಿದ್ದಾರೆ. ಅದೇ ಸಮಯದಲ್ಲಿ, ಹೆಲಿ-ಟೂರಿಸಂ ಯೋಜನೆ ಕೂಡ ಆರಂಭವಾಗುತ್ತದೆ "ಎಂದು ಮತ್ತೊಬ್ಬ ಅಧಿಕಾರಿ ತಿಳಿಸಿದ್ದಾರೆ.

ಹಿಂದೂಸ್ತಾನ್ ಏರೋನಾಟಿಕ್ಸ್ ಲಿಮಿಟೆಡ್ (ಎಚ್‌ಎಎಲ್) ಸೇವಗಳನ್ನು ಪೂರೈಸಲಿದ್ದು, ಇದರ ವೆಚ್ಚವನ್ನು ಶೀಘ್ರದಲ್ಲೇ ನಿಗದಿಪಡಿಸಲಾಗುತ್ತದೆ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.

SCROLL FOR NEXT