ಸಾಂದರ್ಭಿಕ ಚಿತ್ರ 
ರಾಜ್ಯ

ಬೆಂಗಳೂರು: ಮಗಳನ್ನು ನೇಣಿಗೇರಿಸಿ ತಾಯಿ ಆತ್ಮಹತ್ಯೆಗೆ ಯತ್ನ

ಮಗಳನ್ನು ನೇಣಿಗೇರಿಸಿ ತಾಯಿ ಕೂಡ ಆತ್ಮಹತ್ಯೆಗೆ ಯತ್ನಿಸಿದ ಹೃದಯ ವಿದ್ರಾವಕ ಘಟನೆ ಬೆಂಗಳೂರು ನಗರ ಜಿಲ್ಲೆಯ ಯಲಹಂಕ ತಾಲೂಕಿನ ದಿಬ್ಬೂರು ಗ್ರಾಮದಲ್ಲಿ ಬುಧವಾರ ನಡೆದಿದೆ.

ಬೆಂಗಳೂರು: ಮಗಳನ್ನು ನೇಣಿಗೇರಿಸಿ ತಾಯಿ ಕೂಡ ಆತ್ಮಹತ್ಯೆಗೆ ಯತ್ನಿಸಿದ ಹೃದಯ ವಿದ್ರಾವಕ ಘಟನೆ ಬೆಂಗಳೂರು ನಗರ ಜಿಲ್ಲೆಯ ಯಲಹಂಕ ತಾಲೂಕಿನ ದಿಬ್ಬೂರು ಗ್ರಾಮದಲ್ಲಿ ಬುಧವಾರ ನಡೆದಿದೆ.

ವರಲಕ್ಷ್ಮೀ(38) ಆತ್ಮಹತ್ಯೆಗೆ ಯತ್ನಿಸಿದ ತಾಯಿ. ಎರಡು ಹೆಣ್ಮಕ್ಕಳ ತಾಯಿಯಾಗಿರುವ ವರಲಕ್ಷ್ಮೀ, ತಮ್ಮ 12 ವರ್ಷದ ಪುತ್ರಿ ದಿವ್ಯಾಶ್ರೀಗೆ ಆತ್ಮಹತ್ಯೆಗೆ ಪ್ರಚೋದಿಸಿ ಮನೆಯ ಫ್ಯಾನ್​ಗೆ ನೇಣುಬಿಗಿದುಕೊಳ್ಳಲು ಸಹಾಯ ಮಾಡಿದ್ದಾರೆ. ನಂತರ ತಾನೂ ಕೂಡ ಅದೇ ಪ್ಯಾನ್​ಗೆ ನೇಣು ಬಿಗಿದುಕೊಂಡಿದ್ದಾರೆ ಎನ್ನಲಾಗಿದೆ.

ತಾಯಿ ನೇಣು ಹಾಕಿಕೊಳ್ಳುತ್ತಿರುವುದನ್ನು ನೋಡಿದ ಕಿರಿಯ ಮಗಳು ಮನೆ ಹೊರಗೆ ಬಂದು ಕಿರುಚಿಕೊಂಡಿದ್ದಾಳೆ. ತಕ್ಷಣ ಸ್ಥಳೀಯರು ತಾಯಿ ಮತ್ತು ಮಗಳು ಇಬ್ಬರನ್ನೂ ಆಸ್ಪತ್ರೆಗೆ ದಾಖಲಿಸಿದ್ದಾರೆ. ಆದರೆ, ದಿವ್ಯಾ(12) ಅಸುನೀಗಿದ್ದು, ವರಲಕ್ಷ್ಮೀ (38) ಸ್ಥಿತಿ ಗಂಭೀರವಾಗಿದೆ. ಸದ್ಯ ಅವರಿಗೆ ಚಿಕಿತ್ಸೆ ಮುಂದುವರೆದಿದೆ.

ವರಲಕ್ಷ್ಮಿ ಪತಿ ತಿಮ್ಮರಾಜು ಮೂರು ತಿಂಗಳ ಹಿಂದೆ ಕೋವಿಡ್ ಗೆ ಬಲಿಯಾಗಿದ್ದರು. ಹೀಗಾಗಿ ಜೀವನ ನಿರ್ವಹಣೆ ಕಷ್ಟವಾದ ಹಿನ್ನೆಲೆಯಲ್ಲಿ ಅವರು ಆತ್ಮಹತ್ಯೆಗೆ ಯತ್ನಿಸಿದ್ದರು ಎನ್ನಲಾಗಿದೆ.

ಘಟನೆಗೆ ಸಂಬಂಧಿಸಿದಂತೆ ರಾಜಾನುಕುಂಟೆ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

IPL 2026: ಚಿನ್ನಸ್ವಾಮಿ ಮೈದಾನದಲ್ಲಿ CSK ಮಣಿಸಿದ RCB, ಚೆನ್ನೈಗೆ ಸತತ 3ನೇ ಸೋಲು!

ಗುಜರಾತ್ ಜನರು ಅನಕ್ಷರಸ್ಥರು..; ಮೋದಿ, ಪಿಣರಾಯಿ ವಿಜಯನ್ ಜನರ ದಾರಿ ತಪ್ಪಿಸಿದ್ದಾರೆ: Mallikarjun Kharge

ಟ್ರಂಪ್ 48 ಗಂಟೆಗಳ ಗಡುವು ಬೆನ್ನಲ್ಲೇ ಇರಾನ್‌ನ ಮತ್ತೊಬ್ಬ IRGC ಹಿರಿಯ ಕಮಾಂಡರ್ ಹತ್ಯೆಗೈದ ಇಸ್ರೇಲ್!

Operation Eagle Claw ವೈಫಲ್ಯ, ಮಣ್ಣು ಮುಕ್ಕಿದ್ದು ಮರೆತುಬಿಟ್ರಾ? 'ಈ ಸಂದೇಶ' ನೆನಪಿಡಿ: US Crazy Bast*rds ಪೋಸ್ಟ್ ಗೆ ಇರಾನ್ ವ್ಯಂಗ್ಯ!

IPL 2026: ಚಿನ್ನಸ್ವಾಮಿಯಲ್ಲಿ ಸಿಕ್ಸರ್​ಗಳ ಸುರಿಮಳೆ; CSK ವಿರುದ್ಧ ದಾಖಲೆಯ 250 ರನ್ ಪೇರಿಸಿದ RCB

SCROLL FOR NEXT