ಸಾಂಕೇತಿಕ ಚಿತ್ರ 
ರಾಜ್ಯ

ಬೆಂಗಳೂರಿನಲ್ಲಿ ಅರ್ಚಕನ ಮೇಲೆ ಹಲ್ಲೆ: ನಗ-ನಾಣ್ಯ ದೋಚಿ ದುಷ್ಕರ್ಮಿಗಳು ಪರಾರಿ 

ಮಾಜಿ ಸಚಿವರ ಮನೆಯಲ್ಲಿ ಸತ್ಯನಾರಾಯಣ ಪೂಜೆ ಮುಗಿಸಿ ಮನೆಗೆ ವಾಪಸ್ಸಾಗುತ್ತಿದ್ದ ಅರ್ಚಕರೊಬ್ಬರ ಮೇಲೆ ದುಷ್ಕರ್ಮಿಗಳು ಮಾರಣಾಂತಿಕವಾಗಿ ಹಲ್ಲೆ ನಡೆಸಿ ನಗ-ನಾಣ್ಯ ದರೋಡೆ ಮಾಡಿ ಪರಾರಿಯಾಗಿರುವ ಘಟನೆ ಮೂರು ದಿನಗಳ ಹಿಂದೆ ನಡೆದಿದೆ.

ಬೆಂಗಳೂರು: ಮಾಜಿ ಸಚಿವರ ಮನೆಯಲ್ಲಿ ಸತ್ಯನಾರಾಯಣ ಪೂಜೆ ಮುಗಿಸಿ ಮನೆಗೆ ವಾಪಸ್ಸಾಗುತ್ತಿದ್ದ ಅರ್ಚಕರೊಬ್ಬರ ಮೇಲೆ ದುಷ್ಕರ್ಮಿಗಳು ಮಾರಣಾಂತಿಕವಾಗಿ ಹಲ್ಲೆ ನಡೆಸಿ ನಗ-ನಾಣ್ಯ ದರೋಡೆ ಮಾಡಿ ಪರಾರಿಯಾಗಿರುವ ಘಟನೆ ಮೂರು ದಿನಗಳ ಹಿಂದೆ ನಡೆದಿದೆ.

ಸೆಪ್ಟೆಂಬರ್ 20ರಂದು ನಡೆದ ಪ್ರಕರಣ ಇಂದು ಬೆಳಕಿಗೆ ಬಂದಿದ್ದು ಮಾಜಿ ಸಚಿವ ಆರ್ ಶಂಕರ್ ಅವರ ಮನೆಯಲ್ಲಿ ಸತ್ಯನಾರಾಯಣ ಪೂಜೆ ಮಾಡಿ ಮುಗಿಸಿ ಹಿಂತಿರುಗುತ್ತಿದ್ದ ಅರ್ಚಕ ಮಣಿಕಂಠ ಶರ್ಮ ಎಂಬುವವರ ಮೇಲೆ ಹೆಣ್ಣೂರು ಅಂಡರ್ ಪಾಸ್ ಬಳಿ ದುಷ್ಕರ್ಮಿಗಳು ತಡೆದು ನಿಲ್ಲಿಸಿ ಹಲ್ಲೆ ಮಾಡಿದ್ದಾರೆ.ಅರ್ಚಕರು ಕಲ್ಯಾಣನಗರದಿಂದ ಬರುತ್ತಿದ್ದರು.

ಈ ವೇಳೆ ಅರ್ಚಕ ಮಣಿಕಂಠ ಶರ್ಮ ಅವರ ದೇಹದಲ್ಲಿದ್ದ ಸುಮಾರು 60 ಗ್ರಾಂ ಚಿನ್ನ ಮತ್ತು ಸುಮಾರು 20 ಸಾವಿರ ರೂಪಾಯಿ ನಗದು ದೋಚಿ ಪರಾರಿಯಾಗಿದ್ದಾರೆ.

ದರೋಡೆಕೋರರಿಂದ ತಪ್ಪಿಸಿಕೊಂಡು ಬಂದ ಅರ್ಚಕರು ಪೊಲೀಸರಿಗೆ ದೂರು ನೀಡಿದ್ದು ಆರೋಪಿಗಳಿಗಾಗಿ ಹುಡುಕಾಟ ನಡೆಯುತ್ತಿದೆ.ಗೋವಿಂದಪುರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. 

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಎಸ್ ಜಾನಕಿ ಇನ್ನಿಲ್ಲ: ದಕ್ಷಿಣ ಭಾರತದ ಗಾನ ಕೋಗಿಲೆ ಮೈಸೂರಿನಲ್ಲಿ ನಿಧನ!

5th T20I: ಬಟ್ಲರ್, ಬ್ರೂಕ್ ಅರ್ಭಟ; ಇಂಗ್ಲೆಂಡ್ ವಿರುದ್ಧ ಭಾರತಕ್ಕೆ ಹೀನಾಯ ಸೋಲು, ಸರಣಿ ವೈಟ್‌ವಾಶ್

ಖಿನ್ನತೆಗೆ ಜಾರಿದ್ದೆ, ಗುಣಪಡಿಸಲು ಮಗು ಮಾಡಿಕೊಳ್ಳಿ ಎಂದು ವೈದ್ಯರು ಹೇಳಿದ್ರು; ಹುಡುಗನ ಎಲ್ಲಿ ಹುಡುಕಲಿ?: Endometriosis ಭಯಾನಕತೆ ಬಿಚ್ಚಿಟ್ಟ ಶಮಿತಾ ಶೆಟ್ಟಿ

17 ಭಾಷೆಗಳಲ್ಲಿ 48 ಸಾವಿರ ಹಾಡುಗಳಿಗೆ ಧ್ವನಿ: 2013ರಲ್ಲಿ ಪದ್ಮಭೂಷಣ ತಿರಸ್ಕರಿಸಿದ್ದ ದಿಟ್ಟ ಗಾಯಕಿ ಎಸ್ ಜಾನಕಿ!

ಪುಣೆಯಲ್ಲಿ ತ್ಯಾಜ್ಯದ ಗುಡ್ಡ ಬಿದ್ದು ಕಟ್ಟಡ ಕುಸಿತ: 8 ಮಂದಿ ಸಾವು; 14 ಜನರ ರಕ್ಷಣೆ, ಒಬ್ಬರು ಇನ್ನೂ ನಾಪತ್ತೆ!