ರಾಜ್ಯ

ರಾಜ್ಯದಲ್ಲಿ ಮುಂದುವರೆದ ಕೊರೋನಾ ಏರಿಳಿತ: ಬೆಂಗಳೂರಿನಲ್ಲಿ 276 ಸೇರಿ 787 ಪ್ರಕರಣ ಪತ್ತೆ, 11 ಸಾವು!

Vishwanath S

ಬೆಂಗಳೂರು: ರಾಜ್ಯದಲ್ಲಿ ಕೊರೋನಾ ಪ್ರಕರಣಗಳ ಸಂಖ್ಯೆಯಲ್ಲಿ ಏರಿಳಿತ ಮುಂದುವರೆದಿದ್ದು ಕಳೆದ 24 ಗಂಟೆಯಲ್ಲಿ 787 ಕೊರೋನಾ ಪ್ರಕರಣಗಳು ವರದಿಯಾಗಿದೆ. ಇದರೊಂದಿಗೆ ಸೋಂಕಿತರ ಸಂಖ್ಯೆ 29,72,620ಕ್ಕೆ ಏರಿಕೆಯಾಗಿದೆ.

ಮಹಾಮಾರಿಗೆ ಇಂದು 11 ಮಂದಿ ಬಲಿಯಾಗಿದ್ದಾರೆ. ಇದರೊಂದಿಗೆ ಸಾವಿನ ಸಂಖ್ಯೆ 37,717ಕ್ಕೆ ಏರಿಕೆಯಾಗಿದೆ ಎಂದು ಆರೋಗ್ಯ ಸಚಿವಾಲಯ ಮಾಹಿತಿ ನೀಡಿದೆ.

ಬೆಂಗಳೂರಿನಲ್ಲಿ ಇಂದು 276 ಮಂದಿಗೆ ಸೋಂಕು ದೃಢಪಟ್ಟಿದ್ದು, ಇದರೊಂದಿಗೆ ನಗರದಲ್ಲಿ ಸೋಂಕಿತರ ಸಂಖ್ಯೆ 12,45,235ಕ್ಕೆ ಏರಿಕೆಯಾಗಿದೆ. ಇಂದು ನಗರದಲ್ಲಿ 4 ಮಂದಿ ಸಾವನ್ನಪ್ಪಿದ್ದಾರೆ.

ರಾಜ್ಯದಲ್ಲಿ ಇಂದು 775 ಸೋಂಕಿತರು ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. ಇದರೊಂದಿಗೆ ಸೋಂಕಿನಿಂದ ಚೇತರಿಸಿಕೊಂಡವರ ಸಂಖ್ಯೆ 29,21,567ಕ್ಕೆ ಏರಿಕೆಯಾಗಿದೆ. ಇನ್ನು13,307 ಸಕ್ರೀಯ ಪ್ರಕರಣಗಳಿವೆ. 

ರಾಜ್ಯಾದ್ಯಂತ ಇಂದು 1,40,832 ಕೋವಿಡ್ ಟೆಸ್ಟ್ ನಡೆಸಲಾಗಿದ್ದು, 787 ಪಾಸಿಟಿವ್ ಪ್ರಕರಣಗಳು ಪತ್ತೆಯಾಗಿವೆ. ಇದರೊಂದಿಗೆ ರಾಜ್ಯದಲ್ಲಿ ಪಾಸಿಟಿವಿಟಿ ದರ ಶೇ. 0.55ಕ್ಕೆ ಇಳಿದಿದೆ.

SCROLL FOR NEXT