ಸಾಂಕೇತಿಕ ಚಿತ್ರ 
ರಾಜ್ಯ

ವಿಜಯಪುರ: ಪತ್ನಿಯ ಅಕ್ರಮ ಸಂಬಂಧದಿಂದ ಬೇಸತ್ತು 25 ವರ್ಷದ ವ್ಯಕ್ತಿ ಆತ್ಮಹತ್ಯೆ

ಪ್ರೀತಿಸಿ ಮದುವೆಯಾದ ಪತ್ನಿ ಪಕ್ಕದ ಮನೆಯವನೊಂದಿಗೆ ಪರಾರಿಯಾದ ಹಿನ್ನೆಲೆಯಲ್ಲಿ ಮನನೊಂದ ಪತಿ ಫೇಸ್ ಬುಕ್‍ನಲ್ಲಿ ವೀಡಿಯೋ ಹರಿಬಿಟ್ಟು ಆತ್ಮಹತ್ಯೆಗೆ ಶರಣಾಗಿದ್ದಾನೆ.

ವಿಜಯಪುರ: ಪ್ರೀತಿಸಿ ಮದುವೆಯಾದ ಪತ್ನಿ ಪಕ್ಕದ ಮನೆಯವನೊಂದಿಗೆ ಪರಾರಿಯಾದ ಹಿನ್ನೆಲೆಯಲ್ಲಿ ಮನನೊಂದ ಪತಿ ಫೇಸ್ ಬುಕ್‍ನಲ್ಲಿ ವೀಡಿಯೋ ಹರಿಬಿಟ್ಟು ಆತ್ಮಹತ್ಯೆಗೆ ಶರಣಾಗಿದ್ದಾನೆ.

ಜಿಲ್ಲೆಯ ತಾಳಿಕೋಟೆ ತಾಲ್ಲೂಕಿನ ಬೊಮ್ಮನಹಳ್ಳಿ ಗ್ರಾಮದಲ್ಲಿ ಈ ಘಟನೆ ನಡೆದಿದೆ. ವೆಂಕಟೇಶ ದ್ವಾರನಹಳ್ಳಿ (25) ಆತ್ಮಹತ್ಯೆ ಮಾಡಿಕೊಂಡಾತ.

ಎರಡು ವರ್ಷಗಳ ಹಿಂದೆ ವೆಂಕಟೇಶ್ ಯುವತಿ ಓರ್ವಳಿಗೆ ಪ್ರೀತಿಸಿ ಮದುವೆಯಾಗಿದ್ದ. ಈತನ ಪಕ್ಕದ ಮನೆಯ ಸಹೋದರ ಸಂಬಂಧಿ ಶ್ರೀಶೈಲ್ ಎಂಬುವವನೊಂದಿಗೆ ಪತ್ನಿ ಪರಾರಿಯಾಗಿದ್ದಳು. ಈ ಕುರಿತು ತಾಳಿಕೋಟೆ ಪೊಲೀಸ್ ಠಾಣೆಯಲ್ಲಿ ವೆಂಕಟೇಶ್ ದೂರು ಕೂಡ ನೀಡಿದ್ದ. ಆದರೆ, ಪತ್ನಿ, ತಾನು ವೆಂಕಟೇಶ್ ನೊಂದಿಗೆ ಬಾಳುವುದಿಲ್ಲ. ಪ್ರಿಯಕರ ಶ್ರೀಶೈಲ್ ನೊಂದಿಗೆ ಸಂಸಾರ ಮಾಡುವುದಾಗಿ ಹೇಳಿದ್ದಳು. ಹೀಗಾಗಿ ಆಕೆಯ ಹಕ್ಕುಗಳ ಬಗ್ಗೆ ಪತಿ ವೆಂಕಟೇಶ್ ಗೆ ಪೊಲೀಸರು ಮನವರಿಕೆ ಮಾಡಿದ್ದರು. ಇದರಿಂದ ಮನನೊಂದು ವೆಂಕಟೇಶ್ ನೇಣಿಗೆ ಶರಣಾಗಿದ್ದಾನೆ.

ಆತ್ಮಹತ್ಯೆಗೂ ಮುನ್ನ ‘ತನ್ನ ಸಾವಿಗೆ ಶ್ರೀಶೈಲ್ ಹೊಣೆ’ ಎಂದು ಹೇಳಿ ಫೇಸ್ ಬುಕ್ ಲೈವ್ ಮಾಡಿ ನೇಣಿಗೆ ಶರಣಾಗಿದ್ದಾನೆ.

ಫೇಸ್ ಬುಕ್ ನಲ್ಲಿ ಈ ವೀಡಿಯೋ ಕಂಡು ಜಮೀನಿನಲ್ಲಿ ನೇಣು ಬಿಗಿದುಕೊಂಡು ಒದ್ದಾಡುತ್ತಿದ್ದ ವೆಂಕಟೇಶ್ ಪ್ರಾಣ ಉಳಿಸಲು, ಸ್ಥಳೀಯರು ಯತ್ನಿಸಿದ್ದಾರೆ. ಆದರೆ, ತಾಳಿಕೋಟೆ ಆಸ್ಪತ್ರೆಗೆ ಕರೆದುಕೊಂಡು ಹೋಗುತ್ತಿದ್ದಾಗ ಮಾರ್ಗ ಮಧ್ಯೆಯೇ ವೆಂಕಟೇಶ್ ಸಾವನ್ನಪ್ಪಿದ್ದಾನೆ. ಘಟನೆಗೆ ಸಂಬಂಧಿಸಿದಂತೆ ತಾಳಿಕೋಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಜಮ್ಮುವಿನಾದ್ಯಂತ ಭಾರಿ ಮಳೆ: ಅಪಾರ ಪ್ರಮಾಣದ ಹಾನಿ, 10 ಮಂದಿ ಸಾವು: ಕೊಚ್ಚಿ ಹೋದ ರಸ್ತೆ, ಸೇತುವೆಗಳು!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಡಿಕೆಶಿ ಕ್ಷಮೆ ಕೇಳಬಾರದಿತ್ತು; ಮುಲಾಜಿಲ್ಲದೆ ಕಾಂಗ್ರೆಸ್ ಪಕ್ಷದ ಸದಸ್ಯತ್ವಕ್ಕೆ ರಾಜೀನಾಮೆ ಬಿಸಾಕಬೇಕಿತ್ತು- ಆರ್. ಅಶೋಕ್

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

SCROLL FOR NEXT