ಸಾಂದರ್ಭಿಕ ಚಿತ್ರ 
ರಾಜ್ಯ

ಬೆಂಗಳೂರು: ಹಾಡಹಗಲೇ ವ್ಯಕ್ತಿಯ ಬರ್ಬರ ಕೊಲೆ

ಹಾಡಹಗಲೇ ದುಷ್ಕರ್ಮಿಗಳು ವ್ಯಕ್ತಿ ಓರ್ವರನ್ನು ಭೀಕರವಾಗಿ ಕೊಲೆ ಮಾಡಿರುವ ಘಟನೆ ನಗರದ ಹೊರವಲಯದ ಆವಲಹಳ್ಳಿ ಠಾಣಾ ವ್ಯಾಪ್ತಿಯ ಮಾರ್ಗೊಂಡನಹಳ್ಳಿಯಲ್ಲಿ ನಡೆದಿದೆ.

ಬೆಂಗಳೂರು: ಹಾಡಹಗಲೇ ದುಷ್ಕರ್ಮಿಗಳು ವ್ಯಕ್ತಿ ಓರ್ವರನ್ನು ಭೀಕರವಾಗಿ ಕೊಲೆ ಮಾಡಿರುವ ಘಟನೆ ನಗರದ ಹೊರವಲಯದ ಆವಲಹಳ್ಳಿ ಠಾಣಾ ವ್ಯಾಪ್ತಿಯ ಮಾರ್ಗೊಂಡನಹಳ್ಳಿಯಲ್ಲಿ ನಡೆದಿದೆ. ಕೊಲೆಯಾದವರನ್ನು ರಾಮಮೂರ್ತಿನಗರದ ಬೋವಿ ಕಾಲೋನಿ ನಿವಾಸಿ ಕುಳ್ಳ ವೆಂಕಟೇಶ್ ಎಂದು ಗುರುತಿಸಲಾಗಿದೆ.

ಆಟೋದಲ್ಲಿ ಬಂದಿದ್ದ ದುಷ್ಕರ್ಮಿಗಳು ದ್ವಿಚಕ್ರ ವಾಹನದಲ್ಲಿ ಬರುತ್ತಿದ್ದ ಕುಳ್ಳ ವೆಂಕಟೇಶ್​ ಅವರಿಗೆ  ಮೊದಲು ಡಿಕ್ಕಿ ಹೊಡೆದಿದ್ದಾರೆ. ನಂತರ ಅವರು ಕೆಳಗೆ ಬೀಳುತ್ತಿದ್ದಂತೆ ಐವರು ದುಷ್ಕರ್ಮಿಗಳ ತಂಡ ಲಾಂಗು - ಮಚ್ಚುಗಳಿಂದ ಮಾರಕ ದಾಳಿ ನಡೆಸಿದೆ.  ಪರಿಣಾಮ ಗಂಭೀರವಾಗಿ ಗಾಯಗೊಂಡಿದ್ದ ವೆಂಕಟೇಶ್ ಸ್ಥಳದಲ್ಲೇ ಮೃತಪಟ್ಟಿದ್ದಾರೆ.

ಜಮೀನು ವಿಚಾರಕ್ಕೆ ಸಂಬಂಧಿಸಿ ಕೊಲೆಯಾಗಿರಬಹುದುಎಂದು ಪೊಲೀಸರು ಶಂಕಿಸಿದ್ದಾರೆ. ಘಟನೆ ಸ್ಥಳಕ್ಕೆ ವೈಟ್ ಫೀಲ್ಡ್ ಡಿಸಿಪಿ ದೇವರಾಜ್, ಆವಲಹಳ್ಳಿ ಮತ್ತು ಕೆ.ಆರ್.ಪುರ ಪೊಲೀಸರು ಭೇಟಿ ನೀಡಿ, ಪರಿಶೀಲನೆ ನಡೆಸಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

'ಇಂದಿರಾ ಗಾಂಧಿ ಕೂಡ ಹೀಗೆ ಮಾಡಿರಲಿಲ್ಲ': ದೆಹಲಿ ವಿಮಾನ ನಿಲ್ದಾಣದಲ್ಲಿ ವಶಕ್ಕೆ ಪಡೆಯುವ ಮುನ್ನ ಅಭಿಜಿತ್ ದೀಪ್ಕೆ; ವಿಡಿಯೋ ಹಂಚಿಕೊಂಡ CJP

Delhi CJP Protest: ಅಭಿಜೀತ್ ದೀಪ್ಕೆ, ಸೌರವ್ ದಾಸ್, ಆಶುತೋಷ್ ರಂಕಾ,ಯೂಟ್ಯೂಬರ್ ಧ್ರುವ್ ರಾಠಿ ಸೇರಿ 200ಕ್ಕೂ ಹೆಚ್ಚು ಮಂದಿ ಪೊಲೀಸ್ ವಶಕ್ಕೆ; Video

CJP ಪ್ರತಿಭಟನೆ: ದೆಹಲಿ ಪೊಲೀಸರ ವಿರುದ್ಧ ಸುಪ್ರೀಂ ಕೋರ್ಟ್‌ನಲ್ಲಿ ನ್ಯಾಯಾಂಗ ನಿಂದನೆ ಅರ್ಜಿ ಸಲ್ಲಿಕೆ!

ಸ್ಟಾರ್‌ಲಿಂಕ್ ವಿವಾದ: ಭಾರತ ವಸಾಹತಲ್ಲ- Elon Musk ಗೆ ಕಮಲ್ ಹಾಸನ್ ತಿರುಗೇಟು

'ರಾಹುಲ್ ಗಾಂಧಿ ಅವರೇ, ನಿಮ್ಮ ಉದ್ದೇಶಗಳು ಎಂದಿಗೂ ಈಡೇರಲ್ಲ': ವಿಪಕ್ಷದವರದ್ದು 'ನಗರ ನಕ್ಸಲ್' ಮನಸ್ಥಿತಿ; ನಿತಿನ್ ನಬಿನ್