ಸುನಿಲ್ ಕುಮಾರ್ 
ರಾಜ್ಯ

ರಾಜ್ಯೋತ್ಸವ ಪ್ರಶಸ್ತಿಗೆ ಸಾರ್ವಜನಿಕರಿಗೆ ಸಾಧಕರನ್ನು ಗುರುತಿಸುವ ಅವಕಾಶ!

ಈ ವರ್ಷ ರಾಜ್ಯೋತ್ಸವ ಪ್ರಶಸ್ತಿ ಗೆ ಅರ್ಹರನ್ನು ಗುರುತಿಸಿ ಆನ್ಲೈನ್ ಮೂಲಕ ಅವರ ಹೆಸರು ಶಿಫಾರಸು ಮಾಡಲು ಸಾರ್ವಜನಿಕರಿಗೇ ಅವಕಾಶ ಕಲ್ಪಿಸಲಾಗಿದೆ.

ಬೆಂಗಳೂರು: ಈ ವರ್ಷ ರಾಜ್ಯೋತ್ಸವ ಪ್ರಶಸ್ತಿ ಗೆ ಅರ್ಹರನ್ನು ಗುರುತಿಸಿ ಆನ್ಲೈನ್ ಮೂಲಕ ಅವರ ಹೆಸರು ಶಿಫಾರಸು ಮಾಡಲು ಸಾರ್ವಜನಿಕರಿಗೇ ಅವಕಾಶ ಕಲ್ಪಿಸಲಾಗಿದೆ.

ನವೆಂಬರ್ ಒಂದರಂದು 66ನೇ ಕರ್ನಾಟಕ ರಾಜ್ಯೋತ್ಸವ ಆಚರಣೆಯನ್ನು ರಾಜ್ಯ ಸರ್ಕಾರದಿಂದ ಆಚರಿಸಲಾಗುತ್ತಿದ್ದು, ಪ್ರತಿವರ್ಷದಂತೆ ಈ ವರ್ಷವೂ ಸಾಧಕರಿಗೆ ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ ಪ್ರದಾನ ಮಾಡಲಾಗುವುದು ಎಂದು ಕನ್ನಡ ಮತ್ತು ಸಂಸ್ಕೃತಿ ಸಚಿವ ವಿ. ಸುನಿಲ್ ಕುಮಾರ್ ಹೇಳಿದ್ದಾರೆ.

ಈ ಬಾರಿಯ ವಿಶೇಷವೆಂದರೆ ಸಾರ್ವಜನಿಕರು ಯಾರೇ ಆಗಲಿ ಅವರು ಸೇವಾ ಸಿಂಧು ಪೋರ್ಟಲ್ ಮೂಲಕ ರಾಜ್ಯೋತ್ಸವ ಪ್ರಶಸ್ತಿಗಾಗಿ ಸಿದ್ಧಪಡಿಸಲಾಗಿರುವ ವಿಶೇಷ ನಮೂನೆಯ ಅರ್ಜಿಯಲ್ಲಿ ಮೂರು ಹೆಸರುಗಳನ್ನು ಶಿಫಾರಸು ಮಾಡಬಹುದಾಗಿದೆ. ಈ ಮೂವರು ಸಾಧಕರುಗಳ ಹೆಸರು, ಅವರು ಯಾವ ಕ್ಷೇತ್ರದಲ್ಲಿ ಸಾಧನೆ ಮಾಡಿದ್ದಾರೆ, ಅವರ ಊರು , ವಿಳಾಸ, ಸಂಪರ್ಕ ಸಂಖ್ಯೆಇತ್ಯಾದಿ ವಿವರಗಳನ್ನು ಒದಗಿಸಲು ಈ ಅರ್ಜಿ ನಮೂನೆಯಲ್ಲಿ ಅವಕಾಶ ಕಲ್ಪಿಸಲಾಗಿದೆ.

ರಾಜ್ಯದ ಮೂಲೆ ಮೂಲೆಯಲ್ಲಿ ವಾಸಮಾಡುತ್ತಿರುವ ಹಾಗೂ ಎಲೆಮರೆ ಕಾಯಿಯಂತೆ ತಮ್ಮ, ತಮ್ಮ ಕ್ಷೇತ್ರದಲ್ಲಿ ಗಮನಾರ್ಹ ಸಾಧನೆ ಮಾಡಿರುವ, ಮಾಡುತ್ತಿರುವ ವ್ಯಕ್ತಿಗಳನ್ನು ಅವರ ಸುತ್ತ ಮುತ್ತಲೂ ಇರುವವರು ಗುರುತಿಸಿ, ಅವರ ಸಾಧನೆಯನ್ನು ಸೇವಾ ಸಿಂಧು ಪೋರ್ಟಲ್ ಮೂಲಕ ನಮಗೆ ತಲುಪಿಸಿದರೆ, ಅದನ್ನು ತಜ್ಞರ ಸಮಿತಿಗೆ ನೀಡಲಾಗುತ್ತದೆ, ಅದನ್ನು ಅವರು ಪರಿಶೀಲನೆ ಮಾಡಿ ರಾಜ್ಯೋತ್ಸವ ಪ್ರಶಸ್ತಿಗೆ ಅರ್ಹ ಎಂದು ಪರಿಗಣಿಸಿದರೆ ಖಂಡಿತ ಅವರಿಗೆ ಪ್ರಶಸ್ತಿ ಸಿಗುವಂತಾಗುತ್ತದೆ. ಅದರ ಜೊತೆಗೆ ಈ ಪ್ರತಿಷ್ಠಿತ ಪ್ರಶಸ್ತಿಗೆ ನೇರವಾಗಿ ಸಾರ್ವಜನಿಕರೇ ಸಾಧಕರನ್ನು ಆಯ್ಕೆ ಮಾಡಿದಂತಾಗುತ್ತದೆ, ಕ್ರೀಡೆ ಹೊರತುಪಡಿಸಿದರೆ ಉಳಿದ ಸಾಧಕರು ಕನಿಷ್ಠ 60 ವರ್ಷ ಮೇಲ್ಪಟ್ಟವರಾಗಿರಬೇಕು.

ಇಂತಹ ಪ್ರಯೋಗ ಇದೇ ಮೊದಲ ಬಾರಿಗೆ ಮಾಡಲಾಗುತ್ತಿದ್ದು, ಇದು ಅತ್ಯಂತ ಪಾರದರ್ಶಕ ಹಾಗೂ ಪ್ರಜಾಪ್ರಭುತ್ವ ಸಿದ್ಧಾಂತಗಳಿಗೆ ಅನುಗುಣವಾಗಿ ನಡೆಯುತ್ತಿರುವುದು ವಿಶೇಷವಾಗಿದೆ.

ತಮ್ಮ ಮೊಬೈಲ್ ಮೂಲಕವೂ ಸೇವಾ ಸಿಂಧು ಪೋರ್ಟಲ್ ಅನ್ನು ಪ್ರವೇಶಿಸಬಹುದಾಗಿದೆ, ತಾವು ಪ್ರಶಸ್ತಿಗೆ ಶಿಫಾರಸು ಮಾಡುವ ವ್ಯಕ್ತಿಗಳ ಹೆಸರನ್ನು ಕಳುಹಿಸಲು ಅಕ್ಟೋಬರ್ 15 ನೇ ವರೆಗೂ ಅವಕಾಶವಿದೆ ಎಂದೂ ಸಚಿವರು ತಿಳಿಸಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ನಾವು ದಾಳಿ ಮಾಡದೇ ಹೋಗಿದ್ದರೆ ಇಷ್ಟು ಹೊತ್ತಿಗೆ Iran ಅಣ್ವಸ್ತ್ರ ರಾಷ್ಟ್ರವಾಗಿರುತ್ತಿತ್ತು': ಇಸ್ರೇಲ್ ಪ್ರಧಾನಿ ಬೆಂಜಮಿನ್ ನೇತನ್ಯಾಹು

IPL 2026: ತವರಿನಲ್ಲಿ ಮುಂಬೈ ಗೆ ಮುಖಭಂಗ; RCB ಗೆ 18 ರನ್ ಭರ್ಜರಿ ಗೆಲುವು!

7 ತಿಂಗಳ ಮಗುವಿಗಾಗಿ ಕೆಲಸದ ಸಮಯದ ಹೊಂದಾಣಿಕೆ ಕೋರಿದ ಭಾರತೀಯ ಉದ್ಯೋಗಿ; US ಮ್ಯಾನೇಜರ್ ಪ್ರತಿಕ್ರಿಯೆ ಬಗ್ಗೆ ಜಾಲತಾಣಗಳಲ್ಲಿ ಭಾರಿ ಚರ್ಚೆ!

ಗುರಿ ಇಟ್ಟಿದ್ದು ಜಿಹಾದಿ ಬಂಡುಕೋರರಿಗೆ, ಗುರಿಯಾಗಿದ್ದು ಸ್ಥಳೀಯ ಮಾರ್ಕೆಟ್; 100 ಕ್ಕೂ ಹೆಚ್ಚು ನಾಗರಿಕರ ಮಾರಣಹೋಮ!

IPL 2026: ಮುಂಬೈ ವಿರುದ್ದ ಭರ್ಜರಿ ಬ್ಯಾಟಿಂಗ್; ಬಾಬರ್ ಆಜಂ, ಕ್ರಿಸ್ ಗೇಯ್ಲ್ ದಾಖಲೆ ಮುರಿದ Virat Kohli!

SCROLL FOR NEXT