ರಾಜ್ಯ

ರಾಜ್ಯದಲ್ಲಿ ಮುಂದುವರೆದ ಕೊರೋನಾ ಏರಿಳಿತ: ಬೆಂಗಳೂರಿನಲ್ಲಿ 255 ಸೇರಿ 775 ಪ್ರಕರಣ ಪತ್ತೆ, 9 ಸಾವು!

Vishwanath S

ಬೆಂಗಳೂರು: ರಾಜ್ಯದಲ್ಲಿ ಕೊರೋನಾ ಪ್ರಕರಣಗಳ ಸಂಖ್ಯೆಯಲ್ಲಿ ಏರಿಳಿತ ಮುಂದುವರೆದಿದ್ದು ಕಳೆದ 24 ಗಂಟೆಯಲ್ಲಿ 775 ಕೊರೋನಾ ಪ್ರಕರಣಗಳು ವರದಿಯಾಗಿದೆ. ಇದರೊಂದಿಗೆ ಸೋಂಕಿತರ ಸಂಖ್ಯೆ 29,73,395ಕ್ಕೆ ಏರಿಕೆಯಾಗಿದೆ.

ಮಹಾಮಾರಿಗೆ ಇಂದು 9 ಮಂದಿ ಬಲಿಯಾಗಿದ್ದಾರೆ. ಇದರೊಂದಿಗೆ ಸಾವಿನ ಸಂಖ್ಯೆ 37,726ಕ್ಕೆ ಏರಿಕೆಯಾಗಿದೆ ಎಂದು ಆರೋಗ್ಯ ಸಚಿವಾಲಯ ಮಾಹಿತಿ ನೀಡಿದೆ.

ಬೆಂಗಳೂರಿನಲ್ಲಿ ಇಂದು 255 ಮಂದಿಗೆ ಸೋಂಕು ದೃಢಪಟ್ಟಿದ್ದು, ಇದರೊಂದಿಗೆ ನಗರದಲ್ಲಿ ಸೋಂಕಿತರ ಸಂಖ್ಯೆ 12,45,490ಕ್ಕೆ ಏರಿಕೆಯಾಗಿದೆ. ಇಂದು ನಗರದಲ್ಲಿ 3 ಮಂದಿ ಸಾವನ್ನಪ್ಪಿದ್ದಾರೆ.

ರಾಜ್ಯದಲ್ಲಿ ಇಂದು 860 ಸೋಂಕಿತರು ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. ಇದರೊಂದಿಗೆ ಸೋಂಕಿನಿಂದ ಚೇತರಿಸಿಕೊಂಡವರ ಸಂಖ್ಯೆ 29,22,427ಕ್ಕೆ ಏರಿಕೆಯಾಗಿದೆ. ಇನ್ನು13,213 ಸಕ್ರೀಯ ಪ್ರಕರಣಗಳಿವೆ. 

ರಾಜ್ಯಾದ್ಯಂತ ಇಂದು 1,40,970 ಕೋವಿಡ್ ಟೆಸ್ಟ್ ನಡೆಸಲಾಗಿದ್ದು, 775 ಪಾಸಿಟಿವ್ ಪ್ರಕರಣಗಳು ಪತ್ತೆಯಾಗಿವೆ. ಇದರೊಂದಿಗೆ ರಾಜ್ಯದಲ್ಲಿ ಪಾಸಿಟಿವಿಟಿ ದರ ಶೇ. 0.54ಕ್ಕೆ ಇಳಿದಿದೆ.

SCROLL FOR NEXT