ರಾಜ್ಯದ ಎಲ್ಲಾ ಮಹಾನಗರ ಪಾಲಿಕೆಗಳಲ್ಲಿ ಡಿಜಿಟಲ್ ಗ್ರಂಥಾಲಯ ಸ್ಥಾಪನೆ- ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ
ಬೆಳಗಾವಿ ಜಿಲ್ಲೆಯಲ್ಲಿ ಡಿಜಿಟಲ್ ಗ್ರಂಥಾಲಯ ಯಶಸ್ವಿಯಾದರೆ ಇದೇ ಮಾದರಿಯಲ್ಲಿ ಪ್ರತಿಯೊಂದು ಮಹಾನಗರ ಪಾಲಿಕೆಯಲ್ಲಿ ಡಿಜಿಟಲ್ ಗ್ರಂಥಾಲಯ ತೆರೆಯಲು ಸರ್ಕಾರ ಮುಂದಾಗಲಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ.
ಬೆಳಗಾವಿ: ಬೆಳಗಾವಿ ಜಿಲ್ಲೆಯಲ್ಲಿ ಡಿಜಿಟಲ್ ಗ್ರಂಥಾಲಯ ಯಶಸ್ವಿಯಾದರೆ ಇದೇ ಮಾದರಿಯಲ್ಲಿ ಪ್ರತಿಯೊಂದು ಮಹಾನಗರ ಪಾಲಿಕೆಯಲ್ಲಿ ಡಿಜಿಟಲ್ ಗ್ರಂಥಾಲಯ ತೆರೆಯಲು ಸರ್ಕಾರ ಮುಂದಾಗಲಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ.
ಬೆಳಗಾವಿಯಲ್ಲಿಂದು ದೇಶಭಕ್ತ ರವೀಂದ್ರ ಕೌಶಿಕ್ ಅವರ ಹೆಸರಿನಲ್ಲಿ ಇ- ಗ್ರಂಥಾಲಯವನ್ನು ಉದ್ಘಾಟಿಸಿ ಮಾತನಾಡಿದ ಅವರು, ಡಿಜಿಟಲ್ ಗ್ರಂಥಾಲಯ ಓದುಗರಿಗೆ, ಬರಹಗಾರರಿಗೆ, ಜ್ಞಾನಪಡೆಯಲು ಬಯಸುವವರಿಗೆ ಜ್ಞಾನದ ರಹದಾರಿಯನ್ನು ತೆರೆದಿದೆ. ಇದರಿಂದ ಡಿಜಿಟಲ್ ಶಕ್ತಿಯನ್ನು ಮನೆ ಮನೆಗೆ ತಲುಪಿಸುವ ಕೆಲಸವಾಗುತ್ತದೆ ಎಂದರು.
ಜ್ಞಾನ ನೀಡುವುದು ಮತ್ತು ಪಡೆಯುವುದು ಅತ್ಯಗತ್ಯ. ಜ್ಞಾನ ಮತ್ತು ಧ್ಯಾನ ಇವೆರಡು ಬದುಕಿಗೆ ಸಾರ್ಥಕತೆ ಕೊಡುವ, ಅರ್ಥವನ್ನು ಕೊಡುವ, ಪರೋಪಕಾರ ಮಾಡುವ ಗುಣವನ್ನು ಕೊಡುವ ಪ್ರಮುಖ ಮಾರ್ಗವಾಗಿದೆ. ಜ್ಞಾನ ಮತ್ತು ಧ್ಯಾನಗಳನ್ನು ಪಡೆದು ಅದನ್ನು ಸಮಾಜಕ್ಕೆ ಹಂಚಬೇಕು ಎಂಬ ಕೆಲಸವನ್ನು ಗ್ರಂಥಾಲಯ ಮಾಡುತ್ತದೆ ಎಂದರು.
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.