ಸಾಂದರ್ಭಿಕ ಚಿತ್ರ 
ರಾಜ್ಯ

ಬೆಂಗಳೂರು: ಕೊಲೆ ಪ್ರಕರಣ ಆರೋಪಿ ಕಾಲಿಗೆ ಗುಂಡು ಹಾರಿಸಿ ಬಂಧಿಸಿದ ಪೊಲೀಸರು

ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ಸೋಮವಾರ ಬೆಳಂಬೆಳಗ್ಗೆ ಗುಂಡಿನ ಸದ್ದು ಮೊಳಗಿದೆ. ಕೊಲೆ ಪ್ರಕರಣದ ಆರೋಪಿಯೊಬ್ಬನ ಕಾಲಿಗೆ ಗುಂಡು ಹಾರಿಸಿ, ಆತನನ್ನು ಪೊಲೀಸರು ಬಂಧಿಸಿದ್ದಾರೆ.

ಬೆಂಗಳೂರು: ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ಸೋಮವಾರ ಬೆಳಂಬೆಳಗ್ಗೆ ಗುಂಡಿನ ಸದ್ದು ಮೊಳಗಿದೆ. ಕೊಲೆ ಪ್ರಕರಣದ ಆರೋಪಿಯೊಬ್ಬನ ಕಾಲಿಗೆ ಗುಂಡು ಹಾರಿಸಿ, ಆತನನ್ನು ಪೊಲೀಸರು ಬಂಧಿಸಿದ್ದಾರೆ.

ಅರವಿಂದ್ ಅಲಿಯಾಸ್ ಲೀ ಕೊಲೆ ಪ್ರಕರಣದ ಪ್ರಕರಣದ ಪ್ರಮುಖ ಆರೋಪಿ ಸ್ಟ್ಯಾಲೀನ್ ಗೆ  ಕಾಲಿಗೆ ಗುಂಡು ಪೊಲೀಸರು ಗುಂಡು ಹಾರಿಸಿ ಬಂಧಿಸಲಾಗಿದೆ. ಕೊಲೆಗಾಗಿ ಆರೋಪಿ ಬಳಸಿದ್ದ ಆಯುಧ ವಶಪಡೆಯಲು ಪೊಲೀಸರು ಹೋದಾಗ ಈ ಘಟನೆ ನಡೆದಿದೆ. 

ಪೊಲೀಸರ ಮೇಲೆಯೇ ಆರೋಪಿ ಸ್ಟಾಲೀನ್ ಕಲ್ಲಿನಿಂದ ಹಲ್ಲೆ ನಡೆಸಿದ. ಇದರಿಂದ ಮುಖ್ಯಪೇದೆ ಮಹೇಶ್ ಗಾಯಗೊಂಡರು ಎನ್ನಲಾಗಿದೆ. ಈ ಸಂದರ್ಭದಲ್ಲಿ ಅಶೋಕ ನಗರ ಪೊಲೀಸ್ ಠಾಣೆ ಇನ್ಸ್ ಪೆಕ್ಟರ್ ಮಲ್ಲೇಶ್ ಬೊಳತ್ತಿನ್ ತಮ್ಮ ಸರ್ವೀಸ್ ರಿವಾಲ್ವರ್ ನಿಂದ ಆತ್ಮರಕ್ಷಣೆಗಾಗಿ ಗುಂಡು ಹಾರಿಸಿದ್ದಾರೆ. 

ಈ ಘಟನೆ ನಗರದ ಆಡುಗೋಡಿ ಸ್ಮಶಾನದ ಬಳಿ ನಡೆದಿದೆ. ಕೆ.ಜಿ‌. ಹಳ್ಳಿ ರೌಡಿಶೀಟರ್ ಆಗಿರುವ ಆರೋಪಿ ಸ್ಟಾಲಿನ್ ಮೇಲೆ ಒಟ್ಟು ಆರು ಪ್ರಕರಣಗಳಿದ್ದು ಇವುಗಳಲ್ಲಿ ಮೂರು ಕೊಲೆ ಪ್ರಕರಣಗಳಿವೆ. ಈತನನ್ನು ಸೆಂಟ್ ಫಿಲೋಮಿನ್ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಅಶೋಕನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Asian Games 2026: 1 ನಿಮಿಷದಲ್ಲಿ 2 ಚಿನ್ನದ ಪದಕ ಗೆದ್ದ ಭಾರತ, 75 ಪದಕಗಳೊಂದಿಗೆ 5ನೇ ಸ್ಥಾನಕ್ಕೆ ಲಗ್ಗೆ!

‘CEC ಜ್ಞಾನೇಶ್ ಕುಮಾರ್ ದೇಶದ್ರೋಹಿ’: ಮುಂಬೈನಲ್ಲಿ ಭುಗಿಲೆದ್ದ Cockroach Janata Party ಪ್ರತಿಭಟನೆ, ರಾಜೀನಾಮೆಗೆ ಬಿಗಿಪಟ್ಟು..!

ಜೆಡಿಎಸ್ ಪ್ರಧಾನ ಕಾರ್ಯದರ್ಶಿಯಾಗಿ Biggboss ಮಾಜಿ ಸ್ಪರ್ಧಿ ಜಾಹ್ನವಿ ನೇಮಕ!

Pakನ ಹೊಸ ನಾಟಕ: ಕಾಶ್ಮೀರದಲ್ಲಿ ಭಾರತೀಯ ಸೇನೆಯಿಂದ ಹತ್ಯೆಗೀಡಾದ SSG ಉಗ್ರ ಜೀವಂತವಾಗಿದ್ದಾನೆ ಎಂದ ಪಾಕ್ ಸೇನೆ

ಬೆಳಗಾವಿಯಲ್ಲಿ 100 ಕೋಟಿ ರೂ ವೆಚ್ಚದಲ್ಲಿ ಗಾಂಧೀಜಿ ಸ್ಮಾರಕ ನಿರ್ಮಾಣ- ಸಿಎಂ ಡಿಕೆ ಶಿವಕುಮಾರ್ ಘೋಷಣೆ!