ಸಿಎಂ ಬೊಮ್ಮಾಯಿ 
ರಾಜ್ಯ

ಸಕ್ಕರೆ ಆಯುಕ್ತಾಲಯ ಕಚೇರಿ ಅ.3ರಂದು ಬೆಳಗಾವಿಯ ಸುವರ್ಣ ವಿಧಾನಸೌಧಕ್ಕೆ ಸ್ಥಳಾಂತರ: ಸಿಎಂ ಬೊಮ್ಮಾಯಿ

ರೈತರು ಹಾಗೂ ಉತ್ತರ ಕರ್ನಾಟಕ ಜನರ ಬೇಡಿಕೆಯಾಗಿರುವ ಸಕ್ಕರೆ ಆಯುಕ್ತಾಲಯ ಕಚೇರಿಯನ್ನು ಅಕ್ಟೋಬರ್ 3 ರಂದು ಬೆಳಗಾವಿಯ ಸುವರ್ಣ ವಿಧಾನಸೌಧಕ್ಕೆ ಸ್ಥಳಾಂತರ ಮಾಡಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಭಾನುವಾರ ಹೇಳಿದ್ದಾರೆ.

ಬೆಳಗಾವಿ: ರೈತರು ಹಾಗೂ ಉತ್ತರ ಕರ್ನಾಟಕ ಜನರ ಬೇಡಿಕೆಯಾಗಿರುವ ಸಕ್ಕರೆ ಆಯುಕ್ತಾಲಯ ಕಚೇರಿಯನ್ನು ಅಕ್ಟೋಬರ್ 3 ರಂದು ಬೆಳಗಾವಿಯ ಸುವರ್ಣ ವಿಧಾನಸೌಧಕ್ಕೆ ಸ್ಥಳಾಂತರ ಮಾಡಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಭಾನುವಾರ ಹೇಳಿದ್ದಾರೆ.

ನಗರದಲ್ಲಿ ಭಾನುವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಕ್ಕರೆ ಆಯುಕ್ತಾಲವನ್ನು ಸ್ಥಳಾಂತರ ಮಾಡಲು ಈಗಾಗಲೇ ಆದೇಶ ಮಾಡಲಾಗಿದೆ. ಅಕ್ಟೋಬರ್ 3ಕ್ಕೆ ಸ್ತಳಾಂತರ ಮಾಡಲಾಗುವುದು. ಇದಲ್ಲದೆ, ಇನ್ನೂ ಕೆಲ ಕಚೇರಿಗಳು ಸ್ಥಳಾಂತರ ಮಾಡಲು ಆದೇಶ ಮಾಡಲಾಗಿದೆ. ಅವುಗಳನ್ನು ಕೂಡ ಶೀಘ್ರದಲ್ಲೇ ಸ್ಥಳಾಂತರ ಮಾಡಲಾಗುವುದು. ಡಿಸೆಂಬರ್ ತಿಂಗಳಿನಲ್ಲಿ ಬೆಳಗಾವಿಯಲ್ಲಿ ಅಧಿವೇಶನ ಮಾಡಲು ತೀರ್ಮಾನ ಕೈಗೊಳ್ಳಲಾಗಿದೆ. ಅದರ ಒಳಗಾಗಿ ಸಾಧ್ಯವಿರುವ ಪ್ರಮುಖ ಸರ್ಕಾರಿ ಕಚೇರಿಗಳನ್ನು ಸ್ಥಳಾಂತರ ಮಾಡಲಾಗುವುದು ಎಂದರು. 

ಕಬ್ಬಿನ ಬಾಕಿ ಬಿಲ್ ಕೊಡುವ ಕುರಿತು ಮಾತನಾಡಿದ ಅವರು, ಅದು ಖಾಸಗಿ ಸಕ್ಕರೆ ಕಾರ್ಖಾನೆಯವರು ಕೊಡಬೇಕು. ಅವರಿಗೆ ಈಗಾಗಲೇ ಸರ್ಕಾರದಿಂದ ಸೂಚನೆ ನೀಡಲಾಗಿದೆ. ಅವರು ಕೊಡಲೇಬೇಕು. ಕೊಡದಿದ್ದರೆ ಕಾನೂನಾತ್ಮಕ ಕ್ರಮ ಕೈಗೊಳ್ಳಲಾಗುವುದು ಎಂದು ಎಚ್ಚರಿಕೆ ನೀಡಿದ್ದಾರೆ. 

ಈ ಮಧ್ಯ ಅವರಿಗೆ ಯಾವ ರೀತಿ ಸಹಾಯ ಮಾಡಬೇಕೆಂದು ಸಕ್ಕರೆ ಕಾರ್ಖಾನೆ, ಅಪೆಕ್ಸ್ ಬ್ಯಾಂಕ್ ನೊಂದಿಗೆ ಬೆಂಗಳೂರಿನಲ್ಲಿ ಸಭೆ ಕರೆಯುತ್ತೇವೆ ಎಂದು ತಿಳಿಸಿದರು. 

ಕೊರೋನಾ ಸೋಂಕಿನ ಭೀತಿಯಿಂದ ಜನರು ಈಗ ತಾನೆ ಆರ್ಥಿಕ ಚಟುವಟಿಕೆಗಳು, ರೈತರ ಕೃಷಿ ಚಟುವಟಿಕೆಗಳು ಪ್ರಾರಂಭವಾಗಿದೆ. ಭಾರತ ಬಂದ್ ಕರೆ ಯಾರು ಮಾಡಬಾರದುಎಂದು ಮನವಿ ಮಾಡಿಕೊಂಡರು. 

ಬೆಳಗಾವಿಯಲ್ಲಿ 2019-20ರಲ್ಲಿ ಅತಿ ಹೆಚ್ಚು ಮಳೆಯಾಗಿ ಬಳಹಷ್ಟು ಮನೆಗಳು ಹಾಗೂ ರೈತರ ಬೆಳೆಗಳು ಹಾನಿಯಾಗಿವೆ. ಆ ಸಂರ್ಭದಲ್ಲಿ ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪನವರು ಪೂರ್ಣ ಮನೆ ಬಿದ್ದಿರುವುದಕ್ಕೆ 5 ಲಕ್ಷ ರೂ. ಭಾಗಶಃ ಬಿದ್ದ ಮನೆಗೆ 1 ಲಕ್ಷ ರೂ., 3 ಲಕ್ಷ ರೂ. ದುರಸ್ಥಿಗಾಗಿ 50 ಸಾವಿರ ರೂ. ಪರಿಹಾರ ಕೊಡುವ ಕೆಲಸ ಮಾಡಿದ್ದರು. ಆ ಹಿನ್ನೆಲೆಯಲ್ಲಿ ಒಟ್ಟು 44,205 ಮನೆಗಳಿಗೆ ಈಗಾಗಲೇ ಪರಿಹಾರ ಕೊಡುವ ಕೆಲಸ ಪ್ರಾರಂಭವಾಗಿದೆ ಎಂದು ಹೇಳಿದರು. 

ಅಲ್ಲದೇ, ಸುಮಾರು ಎ ಮತ್ತು ಬಿ ಕೆಟಗರಿಗೆ 718 ಬಿ 1ಗೆ 9,64 ಸೇರಿದಂತೆ 861 ಕೋಟಿ ರೂ.ಗಳನ್ನು ಪರಿಹಾರ ನೀಡಲಾಗಿದೆ. ಬೆಳೆ ಹಾನಿಗೆ 263 ಕೋಟಿ ರೂ. 1 ಲಕ್ಷ 56 ಸಾವಿರ ರೈತರಿಗೆ ಪರಿಹಾರ ನೀಡಲಾಗಿದೆ. ಈಗ ಬಾಕಿ ಇರುವ ಪರಿಹಾರಕ್ಕೆ ಸಾಕಷ್ಟು ಸಮಸ್ಯೆಯಾಗಿದೆ ಎಂದು ರೈತರು, ಗ್ರಾಮಸ್ಥರು ಕೂಡ ಬೇಡಿಕೆ ಇಟ್ಟಿದ್ದರು. ಈ ಹಿನ್ನೆಲೆಯಲ್ಲಿ ಕಳೆದ ಬಾರಿಯ ಪ್ರಗತಿ ಪರಿಶೀಲನಾ ಸಭೆಯಲ್ಲಿ ಜಿಲ್ಲಾಧಿಕಾರಿಗಳಿಗೆ ವರದಿ ತರಲು ಹೇಳಿದ್ದೆ. ಅವರು ತಂದು ಕೊಟ್ಟಿದ್ದಾರೆ. ಅದರ ಅನ್ವಯ ನಾವು ಈಗಾಗಲೇ ಕಂದಾಯ ಇಲಾಖೆಯೊಂದಿಗೆ ಸಭೆ ನಡೆಸಿದ್ದೇವೆ. ಅದರ ವಿವರವನ್ನು ಕಂದಾಯ ಇಲಾಖೆಯವರು ಕೇಳಿದ್ದಾರೆ. ಅದರ ವಿವರನ್ನು ತೆಗೆದುಕೊಂಡು ಮುಂದಿನ ವಾರ ಜಿಲ್ಲಾಧಿಕಾರಿಗಳು ಬರಲಿದ್ದಾರೆ. ಮುಂದಿನವಾರ ಹಣಕಾಸು ಇಲಾಖೆಯೊಂದಿಗೆ ಚರ್ಚೆ ನಡೆಸಿ ಬಾಕಿ ಉಳಿದಿರುವ ಪರಿಹಾರವನ್ನು ಕೊಡಲು ಸಿದ್ಧತೆ ಮಾಡಲಾಗುವುದು ಎಂದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಜರ್ಮನಿಯ ವಸತಿ ಕಟ್ಟಡದಲ್ಲಿ ಶಂಕಿತ ಬೆಂಕಿ ಅವಘಡ: 3 ಭಾರತೀಯರು ಸಾವು!

ಹನಿಟ್ರ್ಯಾಪ್ ಪಿತೂರಿ ಪ್ರಶ್ನಿಸಿದ್ದಕ್ಕೆ ಕಿರುಕುಳ; JDS ಕಾರ್ಯಕರ್ತ CCB ವಶಕ್ಕೆ: ಕುಮಾರಸ್ವಾಮಿ ಆಕ್ರೋಶ

ಕಾಂಗ್ರೆಸ್‌ನ ಆಂತರಿಕ ಕಲಹದಿಂದ 'ಮೂರನೇ ಮುಖ್ಯಮಂತ್ರಿ' ಬಂದರೂ ಅಚ್ಚರಿ ಇಲ್ಲ: ಬಿ.ವೈ ವಿಜಯೇಂದ್ರ; Video

ಯೂಟ್ಯೂಬರ್ ಧ್ರುವ್ ರಾಠಿಗೆ ಸಂಕಷ್ಟ: 8 ವರ್ಷಗಳ ಹಿಂದಿನ ಪ್ರಕರಣಕ್ಕೆ ಮರುಜೀವ; ದೆಹಲಿ ಕೋರ್ಟ್ ಸಮನ್ಸ್!

"ತಿರಂಗಾ ಹಾರಿಸುವುದು ಅಪರಾಧವಲ್ಲ ಎಂಬುದನ್ನು ತೋರಿಸುತ್ತೇವೆ": ಅಕ್ಟೋಬರ್ 16ಕ್ಕೆ ತ್ರಿವರ್ಣ ಧ್ವಜದೊಂದಿಗೆ ಬನ್ನಿ- ಅಭಿಜಿತ್ ದೀಪ್ಕೆ ಕರೆ