ಸಿಎಂ ಬೊಮ್ಮಾಯಿ 
ರಾಜ್ಯ

ರಾಜ್ಯದಲ್ಲಿ ಮತಾಂತರ ನಿಯಂತ್ರಿಸಲು ಕಾನೂನು ಜಾರಿಗೆ ಸರ್ಕಾರ ಗಂಭೀರ ಚಿಂತನೆ: ಸಿಎಂ ಬೊಮ್ಮಾಯಿ

ರಾಜ್ಯದಲ್ಲಿ ಬಲವಂತವಾಗಿ ಹಾಗೂ ಆಸೆ ಆಮಿಷಗಳನ್ನು ಒಡ್ಡಿ ಮತಾಂತರ ನಡೆಸಲಾಗುತ್ತಿದೆ ಎಂಬ ಆರೋಪಗಳು ಕೇಳಿಬರುತ್ತಿವೆ. ಇದನ್ನು ಸಂಪೂರ್ಣವಾಗಿ ನಿಯಂತ್ರಿಸಲು ಕಾನೂನು ರೂಪಿಸುವ ಕುರಿತು ಗಂಭೀರ ಚಿಂತನೆ ನಡೆಯುತ್ತಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಹೇಳಿದ್ದಾರೆ.

ಬೆಂಗಳೂರು: ರಾಜ್ಯದಲ್ಲಿ ಬಲವಂತವಾಗಿ ಹಾಗೂ ಆಸೆ ಆಮಿಷಗಳನ್ನು ಒಡ್ಡಿ ಮತಾಂತರ ನಡೆಸಲಾಗುತ್ತಿದೆ ಎಂಬ ಆರೋಪಗಳು ಕೇಳಿಬರುತ್ತಿವೆ. ಇದನ್ನು ಸಂಪೂರ್ಣವಾಗಿ ನಿಯಂತ್ರಿಸಲು ಕಾನೂನು ರೂಪಿಸುವ ಕುರಿತು ಗಂಭೀರ ಚಿಂತನೆ ನಡೆಯುತ್ತಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಹೇಳಿದ್ದಾರೆ. 

ಸುದ್ದಿಗಾರರೊಂದಿಗೆ ಮಾತನಾಡಿರುವ ಅವರು, ಯಾದಗಿರಿಯಲ್ಲಿ ಬಲವಂತವಾಗಿ ಮತಾಂತರ ಮಾಡಲಾಗಿದೆ ಎಂಬ ಆರೋಪಕ್ಕೆ ಸಂಬಂಧಪಟ್ಟಂತೆ ಪ್ರತಿಕ್ರಿಯೆ ನೀಡಿದರು. 

ಈ ವೇಳೆ ಬಲವಂತದ ಮತಾಂತರ ನಿಯಂತ್ರಿಸಲು ರಾಜ್ಯದಲ್ಲಿ ಕಠಿಣ ಕಾನೂನು ಜಾರಿಗೆ ತರುವ ಕುರಿತು ಗಂಭೀರ ಚಿಂತನೆ ನಡೆಸುತ್ತಿರುವ ವಿಚಾರವನ್ನು ತಿಳಿಸಿದ್ದಾರೆ. 

‘ಯಾದಗಿರಿ ಜಿಲ್ಲೆಯಲ್ಲಿ ಮತಾಂತರ ನಡೆಸಿರುವ ವಿಚಾರವು ಗಮನಕ್ಕೆ ಬಂದಿದೆ. ಈ ಬಗ್ಗೆ ಗಮನ ಹರಿಸಲು ಜಿಲ್ಲಾಡಳಿತಕ್ಕೆ ಸೂಚನೆ ನೀಡಲಾಗಿದೆ’ ಎಂದು ಹೇಳಿದರು.

ಸ್ವ ಇಚ್ಛೆಯಿಂದ ಮತಾಂತರಕ್ಕೆ ಅವಕಾಶವಿದೆ. ಆದರೆ, ಹಣ ಮತ್ತು ಇನ್ನಿತರ ರೀತಿಯ ಆಮಿಷಗಳನ್ನು ಒಡ್ಡಿ ಮತಾಂತರ ನಡೆಸುತ್ತಿರುವ ಪ್ರಕರಣಗಳು ಅಲ್ಲಲ್ಲಿ ನಡೆಯುತ್ತಿವೆ. ಕಲಬುರ್ಗಿ ಮತ್ತಿತ್ತರ ಕಡೆಗಳಲ್ಲಿ ಭೇಟಿ ನೀಡಿದಾಗ ಮತಾಂತರ ಮಾಡುತ್ತಿರುವ ಆರೋಪಗಳು ಕೇಳಿ ಬಂದಿವೆ. ಪದೇ ಪದೇ ಈ ವಿಚಾರ ಕೇಳಿ ಬರುತ್ತಿರುವ ಕಾರಣದಿಂದ ಶಾಶ್ವತವಾಗಿ ಕಡಿವಾಣ ಹಾಕಲು ಚಿಂತನೆ ನಡೆಸಲಾಗಿದೆ ಎಂದು ತಿಳಿಸಿದರು. 

ಇತ್ತೀಚೆಗೆ ನಡೆದ ವಿಧಾನಮಂಡಲ ಅಧಿವೇಶನದಲ್ಲಿ ಮಾತನಾಡಿದ್ದ ಬಿಜೆಪಿ ಶಾಸಕ ಗೂಳಿಹಟ್ಟಿ ಶೇಖರ್‌, ‘ಚಿತ್ರದುರ್ಗ ಜಿಲ್ಲೆಯಲ್ಲಿ ಸುಮಾರು 20 ಸಾವಿರ ಮಂದಿ ಮತಾಂತರ ಆಗಿದ್ದಾರೆ. ನನ್ನ ತಾಯಿ ಸಹ ಮತಾಂತರಗೊಂಡಿದ್ದಾರೆ. ಕುಂಕುಮ ಇಡಬಾರದು ಹಾಗೂ ದೇವರ ಫೋಟೋ ಇಡಬಾರದು ಎಂದು ಅವರ ಬ್ರೈನ್‌ ವಾಶ್‌ ಮಾಡಲಾಗಿದೆ. ಇದು ಸರಿಯಲ್ಲ ಎಂದು ಕಿವಿಮಾತು ಹೇಳಿದರೆ ಆತ್ಮಹತ್ಯೆ ಮಾಡಿಕೊಳ್ಳುವುದಾಗಿ ತಾಯಿ ಬೆದರಿಕೆ ಹಾಕುತ್ತಿದ್ದಾರೆ. ಈ ಬೆಳವಣಿಗೆಯಿಂದ ಇಡೀ ಕುಟುಂಬ ಮುಜುಗರ ಅನುಭವಿಸುವಂತಾಗಿದೆ’ ಎಂದು ಹೇಳಿದ್ದರು.

ಇದಕ್ಕೆ ಪ್ರತಿಕ್ರಿಯಿಸಿದ್ದ ಗೃಹ ಸಚಿವ ಆರಗ ಜ್ಞಾನೇಂದ್ರ ಅವರು, . ಒತ್ತಾಯಪೂರ್ವಕವಾಗಿ ಮತಾಂತರ ಕಾನೂನುಬಾಹಿರ ಆಗಿದೆ. ಹಾಗಾಗಿ, ಬೇರೆ ಬೇರೆ ರಾಜ್ಯಗಳ ಕಾಯ್ದೆಯನ್ನು ಪರಿಶೀಲನೆ ಮಾಡಿ ರಾಜ್ಯದಲ್ಲೂ ಕಾಯ್ದೆ ಜಾರಿ ಮಾಡುವ ಬಗ್ಗೆ ಚರ್ಚಿಸುತ್ತೇವೆಂದು ಹೇಳಿದ್ದರು. 

ಇತ್ತೀಚಿಗಷ್ಟೇ ಬೆಂಗಳೂರು ನಗರದಲ್ಲಿ ಮತಾಂತರದ ಆರೋಪ ಕೇಳಿಬಂದಿದ್ದು, ಆರ್​ಎಸ್​ಎಸ್​ ಕಾರ್ಯಕರ್ತರು ಪೊಲೀಸರಿಗೆ ದೂರು ನೀಡಿದ್ದಾರೆ. ನಾರಾಯಣಸ್ವಾಮಿ ಎಂಬುವವರ ಮನೆಯಲ್ಲಿ ಸುಮಾರು 70 ರಿಂದ 80 ಮಕ್ಕಳನ್ನು ಸೇರಿಸಿ ಕ್ರೈಸ್ತ ಪ್ರಾರ್ಥನೆ ಮಾಡಿಸಲಾಗಿದೆ ಎಂದು ಆರೋಪಿಸಲಾಗಿತ್ತು. ಅಲ್ಲದೆ ಈ ಕುರಿತು ಕಳೆದ ಭಾನುವಾರ ವಿಡಿಯೋ ಒಂದು ಸಾಮಾಜಿಕ ಜಾಲತಾಣದಲ್ಲಿ ಹರಿದಾಡಿದ್ದು, ಮತಾಂತರಕ್ಕೆ ಪ್ರಯತ್ನಿಸಲಾಗಿದೆ ಎಂದು ಆರೋಪಿಸಲಾಗಿತ್ತು.

ಆರ್​ಎಸ್​ಎಸ್ ಕಾರ್ಯಕರ್ತರಿಂದ ಮಾಹಿತಿ ಪಡೆದ ಬ್ಯಾಡರಹಳ್ಳಿ ಪೊಲೀಸರು, ನಾರಾಯಣಸ್ವಾಮಿ ಮನೆಗೆ ಭೇಟಿ ನೀಡಿದ್ದು, ಸ್ಥಳ ಪರಿಶೀಲನೆ ಮಾಡಿದ್ದಾರೆ. ಕಳೆದ 10 ವರ್ಷದಿಂದ ಆ ಮನೆಯಲ್ಲಿ ಕೇವಲ ಪ್ರಾರ್ಥನೆ ಮಾಡಿದ್ದಾರಷ್ಟೇ. ಆದರೆ ಮತಾಂತರ ಮಾಡಿಲ್ಲವೆಂಬುದು ತನಿಖೆ ವೇಳೆ ಬೆಳಕಿಗೆ ಬಂದಿದೆ. ಸದ್ಯ ಕೊವಿಡ್ ನಿಯಮ ಉಲ್ಲಂಘಿಸಿ ಪ್ರಾರ್ಥನೆ ಹಿನ್ನೆಲೆ ನಾರಯಣಸ್ವಾಮಿ ವಿರುದ್ಧ ಎನ್​ಡಿಎಮ್​ಎ ಕೇಸ್ ದಾಖಲಿಸಲಾಗಿದೆ ಎಂದು ತಿಳಿದುಬಂದಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

2030 Commonwealth Games: ಭಾರತದ ಬಿಡ್‌ಗೆ ಕೇಂದ್ರ ಸಂಪುಟದ ಅನುಮೋದನೆ! ಅಹಮದಾಬಾದ್ ನಲ್ಲಿ ಆಯೋಜಿಸುವ ಪ್ರಸ್ತಾಪ!

Theaterisation: 'ಥಿಯೇಟರ್ ಕಮಾಂಡ್‌' ರಚನೆ: ಪ್ರಯತ್ನದಲ್ಲಿ ಪ್ರಗತಿ ಸಾಧಿಸಲಾಗುತ್ತಿದೆಯೇ? ಆಡ್ಮಿರಲ್ ಡಿಕೆ ತ್ರಿಪಾಠಿ ಹೇಳಿದ್ದು ಹೀಗೆ...

ಹಿಂದೂ ನಂಬಿಕೆ ಒಡೆಯುತ್ತಿರುವ ಬಾನು ಮುಷ್ತಾಕ್: ಶಿವನ ಬೆಟ್ಟವನ್ನೇ 'ಯೇಸು ಬೆಟ್ಟ' ಮಾಡಲು ಹೊರಟವರಿಂದ ಧರ್ಮದ ಪಾಠ ಬೇಡ- ಪ್ರತಾಪ್ ಸಿಂಹ

'ಪಾಕಿಸ್ತಾನದೊಂದಿಗೆ ಯುದ್ಧ ನಿಲ್ಲಿಸಲು ಟ್ರಂಪ್ 24 ಗಂಟೆ ಕಾಲಾವಕಾಶ ನೀಡಿದ್ದರು, ಮೋದಿ ಕೇವಲ 5 ಗಂಟೆಗಳಲ್ಲಿ ಪಾಲಿಸಿದರು': ರಾಹುಲ್ ಗಾಂಧಿ

'ಧಮ್ ಇದ್ರೆ.. ಸನಾತನಧರ್ಮ, ಬಿಹಾರಿಗಳ ಕುರಿತ ಹೇಳಿಕೆ ಮತ್ತೆ ಹೇಳ್ತೀರಾ?': MK Stalin ಗೆ ಬಿಜೆಪಿ-ಜೆಡಿಯು ಸವಾಲು!

SCROLL FOR NEXT