ಸಾಂದರ್ಭಿಕ ಚಿತ್ರ 
ರಾಜ್ಯ

ರಾಯಚೂರು: ಕೌಟುಂಬಿಕ ಕಲಹ; ಒಂದೇ ಕುಟುಂಬದ ಮೂವರ ಕಗ್ಗೊಲೆ

ಕೌಟುಂಬಿಕ ಕಲಹ ಹಿನ್ನೆಲೆಯಲ್ಲಿ ಒಂದೇ ಕುಟುಂಬದ ಮೂವರನ್ನು ಭೀಕರವಾಗಿ ಕೊಲೆ ಮಾಡಿರುವ ಘಟನೆ ರಾಯಚೂರು ನಗರದ ಹೊರವಲಯದ ಯರಮರಸ್ ಕ್ಯಾಂಪ್ ನಲ್ಲಿ ನಡೆದಿದೆ.

ರಾಯಚೂರು: ಕೌಟುಂಬಿಕ ಕಲಹ ಹಿನ್ನೆಲೆಯಲ್ಲಿ ಒಂದೇ ಕುಟುಂಬದ ಮೂವರನ್ನು ಭೀಕರವಾಗಿ ಕೊಲೆ ಮಾಡಿರುವ ಘಟನೆ ರಾಯಚೂರು ನಗರದ ಹೊರವಲಯದ ಯರಮರಸ್ ಕ್ಯಾಂಪ್ ನಲ್ಲಿ ನಡೆದಿದೆ.

ಅಳಿಯ ಸಾಯಿ ಎಂಬಾತನಿಂದ ಈ ಕೃತ್ಯ ನಡೆದಿರುವ ಶಂಕೆ ವ್ಯಕ್ತವಾಗಿದೆ. 

ಕೊಲೆಯಾದವರನ್ನು ಸಂತೋಷಿ(45) ವೈಷ್ಣವಿ(18) ಮತ್ತು ಆರತಿ(16)ಎಂದು ಗುರುತಿಸಲಾಗಿದೆ.
ಕಳೆದ ಆರು ತಿಂಗಳ ಹಿಂದೆಯಷ್ಟೇ ವೈಷ್ಣವಿ ಅವರಿಗೆ ತೆಲಂಗಾಣದ ಹೈದಾರಾಬಾದ್​ ಮೂಲದ ಸಾಯಿ ಎಂಬಾತನೊಂದಿಗೆ ಕುಟುಂಬಸ್ಥರು ಮದುವೆ ಮಾಡಿಕೊಟ್ಟಿದ್ದರು. ಆದರೆ, ಮದುವೆ ಆದ ದಿನದಿಂದಲೂ ಅಳಿಯ ಸಾಯಿ ಹೆಂಡತಿ ಕುಟುಂಬದೊಂದಿಗೆ ಜಗಳ ಮಾಡುತ್ತಿದ್ದ ಎನ್ನಲಾಗಿದೆ.

ಮಂಗಳವಾರ ರಾತ್ರಿ ಕೂಡ ಅಳಿಯನೇ ಮನೆಗೆ ಬಂದು ಅತ್ತೆ, ಹೆಂಡತಿ ಹಾಗೂ 16 ವರ್ಷದ ಆರತಿಯನ್ನು ಕೊಲೆ ಮಾಡಿರುವ ಶಂಕೆಯನ್ನು ಸ್ಥಳೀಯರು ವ್ಯಕ್ತಪಡಿಸಿದ್ದಾರೆ.

ವಿಷಯ ತಿಳಿಯುತ್ತಿದ್ದಂತೆ ಘಟನಾ ಸ್ಥಳಕ್ಕೆ ರಾಯಚೂರು ಗ್ರಾಮೀಣ ಪೊಲೀಸರು ದೌಡಾಯಿಸಿದ್ದಾರೆ. ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಶ್ರೀಹರಿ ಬಾಬು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಸ್ಥಳಕ್ಕೆ ಡಾಗ್ ಸ್ವ್ಕಾಡ್​​ ಕೂಡ ಆಗಮಿಸಿದ್ದು, ಸ್ಥಳ ಪರಿಶೀಲನೆ ನಡೆಸಿದ್ದು, ಎಫ್.ಎಸ್.ಎಲ್ ತಂಡ ಹೆಚ್ಚಿನ ಪರಿಶೀಲನೆ ನಡೆಸುತ್ತಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಎಸ್ ಜಾನಕಿ ಇನ್ನಿಲ್ಲ: ದಕ್ಷಿಣ ಭಾರತದ ಗಾನ ಕೋಗಿಲೆ ಮೈಸೂರಿನಲ್ಲಿ ನಿಧನ!

17 ಭಾಷೆಗಳಲ್ಲಿ 48 ಸಾವಿರ ಹಾಡುಗಳಿಗೆ ಧ್ವನಿ: 2013ರಲ್ಲಿ ಪದ್ಮಭೂಷಣ ತಿರಸ್ಕರಿಸಿದ್ದ ದಿಟ್ಟ ಗಾಯಕಿ ಎಸ್ ಜಾನಕಿ!

ಜುಲೈ ಕಂಟಕ: ಕಳೆದ ವರ್ಷ ಹಠಾತ್ ಬಿರುಗಾಳಿಯಿಂದ ದೋಣಿ ಮಗುಚಿ 39 ಮಂದಿ ಸಾವು; ಈ ವರ್ಷ 15 ಮಂದಿ ದುರ್ಮರಣ!

ಮಸ್ಸೂರಿ ಹೋಂಸ್ಟೇಯಲ್ಲಿ ಸಾಫ್ಟ್‌ವೇರ್ ಎಂಜಿನಿಯರ್ ಸಾವಿಗೆ ಬಿಗ್ ಟ್ವಿಸ್ಟ್: ದೆಹಲಿಯಲ್ಲಿ ಪತಿಯ ಬಂಧನ

ಬಾಗಲಕೋಟೆ: ಕಬ್ಬಿನ ಗದ್ದೆಯಲ್ಲಿ ಮಹಿಳೆ ಶವವಾಗಿ ಪತ್ತೆ! ಅಕ್ರಮ ಸಂಬಂಧಕ್ಕೆ ಬಲಿಯಾದ್ಲಾ ವಿವಾಹಿತೆ?