ರಾಜ್ಯ

3 ದಿನಗಳಲ್ಲಿ ಶಾಂತಿನಗರದ ಎಲ್ಲಾ ವಾರ್ಡ್'ಗಳಲ್ಲಿ ಗುಂಡಿ ಮುಕ್ತ ರಸ್ತೆ!

Manjula VN

ಬೆಂಗಳೂರು: ಶಾಂತಿನಗರ ವಿಧಾನಸಭಾ ಕ್ಷೇತ್ರದ ಉಪವಿಭಾಗ ವ್ಯಾಪ್ತಿಯ ಶಾಂತಲಾ ನಗರ, ಶಾಂತಿನಗರ ಮತ್ತು ನೀಲಸಂದ್ರ ವಾರ್ಡ್ ಗಳನ್ನು 3 ದಿನಗಳಲ್ಲಿ ರಸ್ತೆ ಗುಂಡಿ ಮುಕ್ತ ವಾರ್ಡ್ ಗಳನ್ನಾಗಿ ಮಾಡುವಂತೆ ಮುಖ್ಯಮಂತ್ರಿ ಗೌರವ್ ಗುಪ್ತಾ ಅವರು ಅಧಿಕಾರಿಗಳಿಗೆ ಬುಧವಾರ ಸೂಚನೆ ನೀಡಿದ್ದಾರೆ. 

ಬುಧವಾರ ಶಾಂತಲಾ ನಗರ ವಾರ್ಡ್ ವ್ಯಾಪ್ತಿಯಲ್ಲಿ ರಸ್ತೆ ಗುಂಡಿ ಮುಚ್ಚುವ ಸ್ಥಳಕ್ಕೆ ಭೇಟಿ ನೀಡಿದ ಮುಖ್ಯ ಆಯುಕ್ತರು ಕಾಮಗಾರಿ ಪರಿಶೀಲನೆ ನಡೆಸಿದರು. 

ವಾರ್ಡ್ ವ್ಯಾಪ್ತಿಯಲ್ಲಿ ಎಲ್ಲೆಲ್ಲಿ ಗುಂಡಿಗಳಿವೆ ಎಂಬುದನ್ನು ಗುರ್ತಿಸಿ ಗುಣಮಟ್ಟದ ವಸ್ತುಗಳನ್ನು ಬಳಸಿ ಗುಂಡಿಗಳನ್ನು ಮುಚ್ಚುವಂತೆ ಎಂಜಿನಿಯರ್ ಗಳಿಗೆ ಸೂಚಿಸಿದರು. ಇದಕ್ಕೆ ಪ್ರತಿಕ್ರಿಯೆ ನೀಡಿದ ಎಂಜಿನಿಯರ್ ಗಳು ಮೂರು ದಿನಗಳಲ್ಲಿ ರಸ್ತೆ ಗುಂಡಿಗಳನ್ನು ಮುಚ್ಚುವುದಾಗಿ ಭರವಸೆ ನೀಡಿದರು. 

ನಗರದ ಮುಖ್ಯ ರಸ್ತೆ, ಉಪ ಮುಖ್ಯರಸ್ತೆ ಹಾಗೂ ವಾರ್ಡ್ ರಸ್ತೆಗಳಲ್ಲಿ ರಸ್ತೆ ಗುಂಡಿಗಳನ್ನು ಮುಚ್ಚುವ ಕಾರ್ಯ ನಡೆಯುತ್ತಿದೆ. ಮುಖ್ಯ ರಸ್ತೆ ಮತ್ತು ಉಪ ಮುಖ್ಯ ರಸ್ತೆ ಗುಂಡಿಗಳನ್ನು ಮುಚ್ಚಲು ಮೊದಲ ಆದ್ಯತೆ ನೀಡಲಾಗಿತ್ತು. ಇದೀಗ ವಾರ್ಡ್ ರಸ್ತೆಗಳಲ್ಲಿ ಗುಂಡಿಗಳನ್ನು ಮುಚ್ಚುವಚ ಕಾರ್ಯ ಆರಂಭಿಸಲಾಗಿದೆ. ಪಾಲಿಕೆ ಹಾಟ್ ಮಿಕ್ಸ್ ಪ್ಲಾಂಟ್ ನಿಂದ ಅಗತ್ಯವಾದ ಡಾಂಬರ್ ಪಡೆದು ರಸ್ತೆ ಗುಂಡಿಗಳನ್ನು ಶೀಘ್ರವಾಗಿ ಮುಚ್ಚಿ ವಾಹನ ಸವಾರರ ಸುಗಮ ಸಂಚಾರಕ್ಕೆ ಅನುವು ಮಾಡಿಕೊಡುವಂತೆ ಸೂಚನೆ ನೀಡಿದರು. 

SCROLL FOR NEXT