ಸಾಂದರ್ಭಿಕ ಚಿತ್ರ 
ರಾಜ್ಯ

ಬೆಳಗಾವಿ: ಕೋರ್ಟ್ ಆವರಣದಲ್ಲೇ ಪತ್ನಿ ಮೇಲೆ ಮಾರಣಾಂತಿಕ ಹಲ್ಲೆ; ಕಾಲು ಕತ್ತರಿಸಿದ ನಿವೃತ್ತ ಯೋಧ

ಬೈಲಹೊಂಗಲದ ನ್ಯಾಯಾಲಯದ ಆವರಣದಲ್ಲೇ ನಿವೃತ್ತ ಯೋಧನೊಬ್ಬ ತನ್ನ ಪತ್ನಿಯ ಮೇಲೆ ಮಚ್ಚಿನಿಂದ ಮಾರಣಾಂತಿಕವಾಗಿ ಹಲ್ಲೆ ನಡೆಸಿ ಆಕೆಯ ಕಾಲು ಕತ್ತರಿಸಿದ ಘಟನೆ ನಡೆದಿದೆ.

ಬೆಳಗಾವಿ: ಬೈಲಹೊಂಗಲದ ನ್ಯಾಯಾಲಯದ ಆವರಣದಲ್ಲೇ ನಿವೃತ್ತ ಯೋಧನೊಬ್ಬ ತನ್ನ ಪತ್ನಿಯ ಮೇಲೆ ಮಚ್ಚಿನಿಂದ ಮಾರಣಾಂತಿಕವಾಗಿ ಹಲ್ಲೆ ನಡೆಸಿ ಆಕೆಯ ಕಾಲು ಕತ್ತರಿಸಿದ ಘಟನೆ ನಡೆದಿದೆ.

ನನಗುಂಡಿಕೊಪ್ಪದ ನಿವೃತ್ತ ಸೈನಿಕ ಶಿವಾನಂದ ಅಡಕಿ ಎಂಬಾತ ಪತ್ನಿ ಜಯಮಾಲಾ ಮೇಲೆ ಮಚ್ಚಿನಿಂದ ಹಲ್ಲೆ ಮಾಡಿ ಆಕೆಯ ಕಾಲನ್ನೇ ಕತ್ತರಿಸಿದ್ದಾನೆ. 11 ವರ್ಷಗಳ ಹಿಂದೆ ಧಾರವಾಡ ಜಿಲ್ಲೆಯ ವರೂರ್ ಗ್ರಾಮದ ಜಯಮಾಲಾರನ್ನು ಸೈನಿಕ ಶಿವಾನಂದ ಮದುವೆಯಾಗಿದ್ದ. ಆದರೆ ಹಣಕಾಸಿನ ವಿಚಾರಕ್ಕೆ ಪತಿ-ಪತ್ನಿಯ ಮಧ್ಯೆ ಕಲಹ ಇತ್ತು ಎನ್ನಲಾಗಿದೆ. 

ಈ ಹಿನ್ನೆಲೆಯಲ್ಲಿ ಬೈಲಹೊಂಗಲ ದಿವಾಣಿ ನ್ಯಾಯಾಲಯದಲ್ಲಿ ವಿಚಾರಣೆ ಇತ್ತು. ಈ ಹಿನ್ನೆಲೆಯಲ್ಲಿ ವಿಚಾರಣೆ ಹಾಜರಾಗಲು ಕೋರ್ಟ್ ಗೆ ಬಂದ ಪತ್ನಿಯ ಮೇಲೆ ಶಿವಪ್ಪ ಅಡಕಿ ಮಾರಣಾಂತಿಕ ಹಲ್ಲೆ ನಡೆಸಿದ್ದಾನೆ. ಹಲ್ಲೆಯಲ್ಲಿ ಜಯಮಾಲಾ ತೀವ್ರವಾಗಿ ಗಾಯಗೊಂಡಿದ್ದಾರೆ. ಹೀಗಾಗಿ, ಆಕೆಯನ್ನು ಬೆಳಗಾವಿಯ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಘಟನೆ ನಂತರ ಆರೋಪಿ ಶಿವಾನಂದ ಅಡಕಿ ಪೊಲೀಸರಿಗೆ ಶರಣಾಗಿದ್ದಾನೆ.
 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Operation Sindoor; Kirana Hills ಪರಮಾಣು ನೆಲೆಗೆ ಅಪ್ಪಳಿಸಿದ ಭಾರತದ ಡ್ರೋನ್? ಬೆಚ್ಚಿಬಿದ್ದ ಪಾಕಿಸ್ತಾನ..! Indian Army ಹೇಳಿದ್ದೇನು?

ನಿರ್ಬಂಧದ ಹೊರತಾಗಿಯೂ ರಷ್ಯಾದಲ್ಲಿ ಇಳಿದ ಅಮೆರಿಕದ C-17 ಮಿಲಿಟರಿ ವಿಮಾನ: ಮಿಷನ್ ಮಾತ್ರ ನಿಗೂಢ!

ನೀಟ್ ಪ್ರತಿಭಟನಾಕಾರರ ಮೇಲೆ ಪೊಲೀಸ್ ದೌರ್ಜನ್ಯ ಆರೋಪ: ಚರ್ಚೆಗೆ ವಿಪಕ್ಷಗಳ ಪಟ್ಟು, ಸಂಸದೀಯ ಸಮಿತಿ ಸಭೆಯಲ್ಲಿ ತೀವ್ರ ವಾಗ್ವಾದ!

2nd Test: ‘ಶ್ರೀಲಂಕಾ ಆಟಗಾರರ ವರ್ತನೆ ವೃತ್ತಿಪರವಾಗಿರಲಿಲ್ಲ’: ಬ್ಯಾಡ್ ಲೈಟ್ ವಿವಾದಕ್ಕೆ Sanjay Manjrekar ಕಿಡಿ

‘ಪ್ರಸಿದ್ಧ್ ಕೃಷ್ಣ ವಿಶ್ವದರ್ಜೆಯ ಬೌಲರ್ ಆಗಿ ಮಾರ್ಪಟ್ಟಿದ್ದಾರೆ’: ಕನ್ನಡಿಗನ ಶ್ಲಾಘಿಸಿದ ದಕ್ಷಿಣ ಆಫ್ರಿಕಾ ಮಾಜಿ ವೇಗಿ Morne Morkel