ಸಾಂದರ್ಭಿಕ ಚಿತ್ರ 
ರಾಜ್ಯ

ತಾಲ್ಲೂಕು ಪಂಚಾಯ್ತಿಯಲ್ಲಿ ನೇರ ನೇಮಕಾತಿ: ಕೇವಲ 6 ಹುದ್ದೆಗಳು, ಆಸಕ್ತರು ಈಗಲೇ ಅರ್ಜಿ ಸಲ್ಲಿಸಿ

ದಕ್ಷಿಣ ಕನ್ನಡ ತಾಲ್ಲೂಕು ಪಂಚಾಯ್ತಿಯಲ್ಲಿ 6 ಹುದ್ದೆಗಳು ಖಾಲಿ ಇದ್ದು, ನೇರ ನೇಮಕಾತಿ ಮೂಲಕ ಹುದ್ದೆ ಭರ್ತಿ ಮಾಡಲು ಆದೇಶ ಹೊರಡಿಸಲಾಗಿದೆ. ಆಸಕ್ತರು ಅರ್ಜಿ ಸಲ್ಲಿಸಬಹುದು.

ದಕ್ಷಿಣ ಕನ್ನಡ: ದಕ್ಷಿಣ ಕನ್ನಡ ತಾಲ್ಲೂಕು ಪಂಚಾಯ್ತಿಯಲ್ಲಿ 6 ಹುದ್ದೆಗಳು ಖಾಲಿ ಇದ್ದು, ನೇರ ನೇಮಕಾತಿ ಮೂಲಕ ಹುದ್ದೆ ಭರ್ತಿ ಮಾಡಲು ಆದೇಶ ಹೊರಡಿಸಲಾಗಿದೆ. ಆಸಕ್ತರು ಅರ್ಜಿ ಸಲ್ಲಿಸಬಹುದು.

ಒಟ್ಟು ಹುದ್ದೆಗಳು: 6

ಹುದ್ದೆಗಳ ಹೆಸರು: ಆಡಳಿತ ಸಹಾಯಕರು

ವಿದ್ಯಾರ್ಹತೆ:
ಅಭ್ಯರ್ಥಿಗಳು ಬಿ.ಕಾಂ ಪದವಿ ಶೈಕ್ಷಣಿಕ ಅರ್ಹತೆ ಹೊಂದಿರಬೇಕು, ಕನ್ನಡ ಮತ್ತು ಇಂಗ್ಲಿಷ್ ಕಂಪ್ಯೂಟರ್ ಟೈಪಿಂಗ್ ನಲ್ಲಿ ಪರಿಣಿತಿ ಹೊಂದಿರಬೇಕು ಜೊತೆಗೆ ಉತ್ತಮ ಕಂಪ್ಯೂಟರ್ ಜ್ಞಾನ ಹೊಂದಿರಬೇಕು.

ಅನುಭವ: ಕನಿಷ್ಠ 2 ವರ್ಷಗಳ ಸಂಬಂಧಿತ ಅನುಭವ ಹೊಂದಿರಬೇಕು.

ಉದ್ಯೋಗ ಸ್ಥಳ: ಮಂಗಳೂರು, ಬಂಟ್ವಾಳ, ಬೆಳ್ತಂಗಡಿ, ಪುತ್ತೂರು, ಕಡಬ, ಸುಳ್ಯ ತಾಲ್ಲೂಕು

ವಯೋಮಿತಿ
ದಿನಾಂಕ 21/09/2021ಕ್ಕೆ ಕನಿಷ್ಠ 21 ವರ್ಷ ಹಾಗೂ ಗರಿಷ್ಠ 35 ವರ್ಷ ಮೀರಿರಬಾರದು.

ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 25/10/2021

ವೇತನ: ಆಯ್ಕೆಯಾದ ಅಭ್ಯರ್ಥಿಗಳು ಮಾಸಿಕ ರೂ. 14,543 ವೇತನ ನೀಡಲಾಗುತ್ತದೆ.

ಅರ್ಜಿ ಸಲ್ಲಿಕೆಯ ವಿಧಾನ :
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳು ಆನ್‌ಲೈನ್‌ ಮೂಲಕವೇ ಅರ್ಜಿಯನ್ನು ಸಲ್ಲಿಸಬೇಕು.
ಅಭ್ಯರ್ಥಿಗಳು ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್ ಅಧಿಕೃತ ವೆಬ್‌ಸೈಟ್ ವಿಳಾಸಕ್ಕೆ ಭೇಟಿ ನೀಡಿ, ಆನ್‌ಲೈನ್‌ ಅರ್ಜಿಯಲ್ಲಿ ಹುದ್ದೆಗೆ ಅಗತ್ಯವಿರುವ ಎಲ್ಲಾ ಮಾಹಿತಿಯನ್ನು ಭರ್ತಿ ಮಾಡಿ ( ಉದಾಹರಣೆಗೆ : ಅಭ್ಯರ್ಥಿಯ ಹೆಸರು, ವಿದ್ಯಾರ್ಹತೆ, ಇಮೇಲ್ ವಿಳಾಸ ಇತ್ಯಾದಿ) ಅರ್ಜಿಯನ್ನು ಸಲ್ಲಿಸಬೇಕು.

ಆಯ್ಕೆ ವಿಧಾನ
ಮೆರಿಟ್ ಆಧಾರದ ಅಭ್ಯರ್ಥಿಗಳನ್ನು ಹುದ್ದೆಗಳಿಗೆ ಆಯ್ಕೆ ಮಾಡಲಾಗುವುದು.

ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: ಅಕ್ಟೋಬರ್ 10, 2021

ವೆಬ್ ಸೈಟ್ ವಿಳಾಸ
https://sevasindhuservices.karnataka.gov.in/login.do
 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

₹2,000ಕ್ಕಿಂತ ಹೆಚ್ಚಿನ UPI ಪಾವತಿಗಳಿಗೆ ಶೇ. 0.4ರಷ್ಟು MDR ಶುಲ್ಕ! ಅಕ್ಟೋಬರ್ 15 ರಿಂದ ಜಾರಿ

India vs Afghanistan: ಸಂಜು ಸ್ಯಾಮ್ಸನ್ ಸ್ಫೋಟಕ ಬ್ಯಾಟಿಂಗ್; ಅಫ್ಘಾನ್ ವಿರುದ್ಧದ T20 ಸರಣಿ ಭಾರತ ಕೈವಶ!

India vs Afghanistan: ಹೊಸ ಇತಿಹಾಸ ಸೃಷ್ಟಿಸಿದ ಜಸ್ಪ್ರೀತ್ ಬುಮ್ರಾ; ವಿಶ್ವದಲ್ಲೇ ಈ ಸಾಧನೆ ಮಾಡಿದ ಮೊದಲ ಆಟಗಾರ!

ಮೋದಿಗೆ 'ಭಾರತ ರತ್ನ'?: Modi ಹೆಸರಲ್ಲಿ ಒಂದು ತಿಂಗಳು ಸೇವಾ ಸಂಕಲ್ಪ ಅಭಿಯಾನ: ಕೇಂದ್ರ ಸಚಿವ ಜೆ.ಪಿ ನಡ್ಡಾ

ದ್ವಿಪಕ್ಷೀಯ ಮಾತುಕತೆ ವೇಳೆ ಚೀನಾ ಅಧ್ಯಕ್ಷ ಜಿನ್ಪಿಂಗ್ ಗೆ ಮೋದಿ ಹೇಳಿದ್ದೇನು? MEA ಹೇಳಿದ್ದಿಷ್ಟು...