ಮುಖ್ಯಮಂತ್ರಿ ಬೊಮ್ಮಾಯಿ, ಸಿದ್ದರಾಮಯ್ಯ 
ರಾಜ್ಯ

ಸಿದ್ದು ಜನ್ಮ ದಿನೋತ್ಸವಕ್ಕೆ ಭರ್ಜರಿ ತಯಾರಿ: ಸಿದ್ದರಾಮೋತ್ಸವದಿಂದ ಆಪತ್ತಿಲ್ಲ- ಮುಖ್ಯಮಂತ್ರಿ ಬೊಮ್ಮಾಯಿ

ಮಾಜಿ ಮುಖ್ಯಮಂತ್ರಿ ಹಾಗೂ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಅವರ 75ನೇ ಜನ್ಮ ದಿನೋತ್ಸವಕ್ಕೆ ಅಂತಿಮ ಹಂತದ ಸಿದ್ಧತಾ ಕಾರ್ಯಗಳು ಭರದಿಂದ ಸಾಗಿದೆ.

ಬೆಂಗಳೂರು: ಮಾಜಿ ಮುಖ್ಯಮಂತ್ರಿ ಹಾಗೂ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಅವರ 75ನೇ ಜನ್ಮ ದಿನೋತ್ಸವಕ್ಕೆ ಅಂತಿಮ ಹಂತದ ಸಿದ್ಧತಾ ಕಾರ್ಯಗಳು ಭರದಿಂದ ಸಾಗಿದೆ.

ಬುಧವಾರ ದಾವಣಗೆರೆ ಶಾಮನೂರು ಪ್ಯಾಲೇಸ್ ಮೈದಾನದಲ್ಲಿ ನಡೆಯಲಿರುವ ಕಾರ್ಯಕ್ರಮಕ್ಕೆ ವೇದಿಕೆ, ಪೆಂಡಾಲ್, ಆಸನ, ಊಟದ ಸಿದ್ಧತೆ ಕೆಲಸಗಳು ಭರ್ಜರಿಯಾಗಿ ಸಾಗಿದ್ದು, ಕಾರ್ಮಿಕರು ಹಗಲು ರಾತ್ರಿ ಕೆಲಸದಲ್ಲಿ ನಿರತರಾಗಿದ್ದಾರೆ. 

ಇದನ್ನೂ ಓದಿ: ರಾಜಕೀಯ ಬದಿಗೊತ್ತಿ ಸಿದ್ದರಾಮಯ್ಯ ಜನ್ಮ ದಿನೋತ್ಸವ ಯಶಸ್ವಿಗೊಳಿಸಲು ಪ್ರತಿಜ್ಞೆ
ರಾಹುಲ್ ಗಾಂಧಿ,  ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್, ಮಲ್ಲಿಕಾರ್ಜುನ ಖರ್ಗೆ, ಸೇರಿದಂತೆ ಎಲ್ಲಾ ಕಾಂಗ್ರೆಸ್ ಮುಖಂಡರು ಈ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲಿದ್ದಾರೆ. 5 ಲಕ್ಷ ಕಾರ್ಯಕರ್ತರು ಕುಳಿತುಕೊಳ್ಳಲು ಕುರ್ಚಿಗಳ ವ್ಯವಸ್ಥೆ ಮಾಡಲಾಗಿದ್ದು ಎಲ್ಲಾ ಉಪವೇದಿಕೆಗಳಲ್ಲೂ ಕಾರ್ಯಕ್ರಮ ವೀಕ್ಷಿಸಲು ಬೃಹತ್ ಎಲ್ ಇ ಡಿ ಪರದೆ ವ್ಯವಸ್ಥೆ ಮಾಡಲಾಗಿದೆ.

ರಾಜ್ಯದ ವಿವಿಧ ಭಾಗಗಳಿಂದ ಒಟ್ಟು 7,000 ಬಸ್ ವ್ಯವಸ್ಥೆ ಮಾಡಲಾಗಿದ್ದು, ಸಿದ್ದರಾಮಯ್ಯ ಅಭಿಮಾನಿಗಳು, ಪಕ್ಷದ ಕಾರ್ಯಕರ್ತರು ಸೇರಿದಂತೆ ಅಪಾರ ಸಂಖ್ಯೆಯಲ್ಲಿ ಜನರು ಕಾರ್ಯಕ್ರಮಕ್ಕೆ ಆಗಮಿಸುವ ನಿರೀಕ್ಷೆಯಿದೆ.

ಈ ಮಧ್ಯೆ ಸಿದ್ದರಾಮೋತ್ಸವದಿಂದ ನಮಗೆ ಯಾವುದೇ ಆಪತ್ತಿಲ್ಲ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಪ್ರತಿಕ್ರಿಯಿಸಿದ್ದಾರೆ. ಬೆಂಗಳೂರಿನಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಾವು ಸಿದ್ದರಾಮ ದೇವರ ಆರಾಧಕರು, ದೇವರ ಉತ್ಸವವನ್ನು ನಿತ್ಯ ಮಾಡುತ್ತೇವೆ ಎಂದರು.

ಜಿಲ್ಲಾ ಮಟ್ಟದಲ್ಲಿ ಜನೋತ್ಸವ ಆಚರಿಸುವ ಕುರಿತು ಚರ್ಚೆ ಮಾಡುತ್ತಿದ್ದು, ಎಲ್ಲೆಲ್ಲಿ ಮಾಡಬೇಕೆಂಬುದನ್ನು ನಿರ್ಧಾರ ಮಾಡಲಾಗುತ್ತಿದೆ. ಪ್ರಾದೇಶಿಕ ಹಾಗೂ ಜಿಲ್ಲಾ ಮಟ್ಟದ ಸಮಾವೇಶಗಳನ್ನು ಹಮ್ಮಿಕೊಳ್ಳಲಾಗಿದೆ. ಇದರ ವಿವರಗಳನ್ನು ಮೂರ್ನಾಲ್ಕು ದಿನಗಳಲ್ಲಿ ಪಕ್ಷದಿಂದ ಪ್ರಕಟಿಸಲಾಗುವುದು ಎಂದು ಅವರು ತಿಳಿಸಿದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

'ನನ್ನ ಕುರ್ಚಿ'ಗೆ ಪ್ರಧಾನಿ ಮೋದಿ ಗೌರವ ನೀಡಬೇಕು: ಪಶ್ಚಿಮ ಬಂಗಾಳ ಸಿಎಂ ಮಮತಾ ಬ್ಯಾನರ್ಜಿ ಕಿಡಿ!

ಸುಪ್ರೀಂ ಕೋರ್ಟ್‌ಗೆ ನ್ಯಾ. ಪಾಂಚೋಲಿ ಹೆಸರು ಶಿಫಾರಸು: ನ್ಯಾ. ಬಿ. ವಿ. ನಾಗರತ್ನ ತೀವ್ರ ಅಸಮಾಧಾನ!

SCROLL FOR NEXT