ಶಶಿಕಲಾ ಜೊಲ್ಲೆ 
ರಾಜ್ಯ

ವರಮಹಾಲಕ್ಷ್ಮಿ ವ್ರತದ ಪ್ರಯುಕ್ತ ಮುಜರಾಯಿ ದೇವಸ್ಥಾನಗಳಲ್ಲಿ ಮಹಿಳೆಯರಿಗೆ ಅರಿಶಿಣ- ಕುಂಕುಮ ವಿತರಣೆ

ಈ ಬಾರಿಯ ವರಮಹಾಲಕ್ಷ್ಮಿ ವ್ರತವನ್ನು  ಮುಜರಾಯಿ ಇಲಾಖೆ ವತಿಯಿಂದ ವಿಶೇಷವಾಗಿ ಆಚರಿಸಲು ನಿರ್ಧರಿಸಲಾಗಿದೆ. ದೇವಸ್ಥಾನದಲ್ಲಿ ವಿಶೇಷ ಪೂಜೆ ಮಾಡಲಾಗಿರುವ 6 ಹಸಿರುವ ಬಳೆಗಳು ಹಾಗೂ  ಕಸ್ತೂರಿ ಅರಿಶಿಣ- ಕುಂಕುಮವನ್ನು ವಿತರಿಸಬೇಕು ಎಂದು ದೇವಾಲಯದ ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ ಎಂದು ಶಶಿಕಲಾ ಅ ಜೊಲ್ಲೆ ತಿಳಿಸಿದ್ದಾರೆ. 

ಬೆಂಗಳೂರು: ಈ ಬಾರಿಯ ವರಮಹಾಲಕ್ಷ್ಮಿ ವ್ರತವನ್ನು  ಮುಜರಾಯಿ ಇಲಾಖೆ ವತಿಯಿಂದ ವಿಶೇಷವಾಗಿ ಆಚರಿಸಲು ನಿರ್ಧರಿಸಲಾಗಿದೆ.

ಅಂದು ದೇವಾಲಯಗಳಲ್ಲಿ ವಿಶೇಷ ಪೂಜೆ ನೆರವೇರಿಸಿ, ಮಹಿಳೆಯರಿಗೆ ಉತ್ತಮ ಗುಣಮಟ್ಟದ ಕಸ್ತೂರಿ 
ಅರಿಶಿಣ- ಕುಂಕುಮ ಮತ್ತು ಹಸಿರು ಬಳೆಗಳನ್ನು ಗೌರವ ಸೂಚಕವಾಗಿ ನೀಡಬೇಕು ಎಂದು ಮುಜರಾಯಿ ಇಲಾಖೆ ಸುತ್ತೋಲೆ ಹೊರಡಿಸಿದೆ. ಮುಜರಾಯಿ ಇಲಾಖೆ ಸಚಿವೆ ಶಶಿಕಲಾ ಜೊಲ್ಲೆ ಅವರ ನಿರ್ದೇಶನದ ಮೇರೆಗೆ ಈ ಸುತ್ತೋಲೆಯನ್ನು  ಹೊರಡಿಸಲಾಗಿದೆ.

ವರಮಹಾಲಕ್ಷ್ಮಿ ವ್ರತದ ದಿನದಂದು ಮಹಿಳೆಯರು ಮನೆಯಲ್ಲಿ  ಪೂಜೆಯನ್ನು ನೆರವೇರಿಸಿ ದೇವಾಲಯಗಳಿಗೆ ಭೇಟಿ  ನೀಡಿ ದೇವರ ಪ್ರಸಾದ ಸ್ವೀಕರಿಸುವ ಸಂಪ್ರದಾಯವಿದೆ. ಈ ಸಂಪ್ರದಾಯಕ್ಕೆ ಮತ್ತಷ್ಟು ಇಂಬು ನೀಡುವ ಹಾಗೂ ರಾಜ್ಯದ ಮುಜರಾಯಿ ದೇವಸ್ಥಾನಗಳ ವತಿಯಿಂದ ಮಹಿಳೆಯರಿಗೆ ವಿಶೇಷವಾಗಿ ಮಂಗಳ ದ್ರವ್ಯ ಹಾಗೂ ಹಸಿರು ಬಳೆಗಳನ್ನು ನೀಡುವುದರ ಮೂಲಕ ಗೌರವಿಸಬೇಕು ಎನ್ನುವ ಉದ್ದೇಶದಿಂದ ಇತ್ತೀಚಿಗೆ ನಡೆದ ರಾಜ್ಯ ಧಾರ್ಮಿಕ ಪರಿಷತ್ತಿನ ಸಭೆಯಲ್ಲಿ ಅಧಿಕಾರಿಗಳಿಗೆ ಸೂಚಿಸಲಾಗಿತ್ತು.

ಈ  ಬಾರಿಯ ವರಮಹಾಲಕ್ಷ್ಮಿ ವ್ರತದ ದಿನದಿಂದ ಮಹಿಳೆಯರಿಗೆ ವಿಶೇಷ ಗೌರವ ನೀಡುವುದು ನಮ್ಮ ಉದ್ದೇಶವಾಗಿದೆ. ಈ ಹಿನ್ನೆಲೆಯಲ್ಲಿ ಈಗಾಗಲೇ ಸುತ್ತೋಲೆ ಹೊರಡಿಸಲಾಗಿದೆ ಎಂದು ಸಚಿವರು ಹೇಳಿದ್ದಾರೆ.

ಲಕೋಟೆಯಲ್ಲಿ ದೇವಸ್ಥಾನದಲ್ಲಿ ವಿಶೇಷ ಪೂಜೆ ಮಾಡಲಾಗಿರುವ 6 ಹಸಿರುವ ಬಳೆಗಳು ಹಾಗೂ  ಕಸ್ತೂರಿ ಅರಿಶಿಣ- ಕುಂಕುಮವನ್ನು ವಿತರಿಸಬೇಕು ಎಂದು ದೇವಾಲಯದ ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ ಎಂದು ಶಶಿಕಲಾ ಅ ಜೊಲ್ಲೆ ತಿಳಿಸಿದ್ದಾರೆ. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಬಿಜೆಪಿ ಸಂಸದೀಯ ಮಂಡಳಿಯಲ್ಲಿ ಮಹತ್ತರ ಬದಲಾವಣೆ ಸಾಧ್ಯತೆ; ನಾಲ್ವರು ಮುಖ್ಯಮಂತ್ರಿಗಳಿಗೆ ಸ್ಥಾನ?

ಇರಾನ್‌ ತೈಲ ವಹಿವಾಟಿಗೆ ಅಮೆರಿಕಾ ಬ್ರೇಕ್: ಭಾರತದ 4 ಕಂಪನಿಗಳು ಕಪ್ಪುಪಟ್ಟಿಗೆ, 3 ಪ್ರಜೆಗಳ ಮೇಲೂ ನಿರ್ಬಂಧ..!

"ಮದುವೆ ಅಂದ್ರೆ ಗುಲಾಮಗಿರಿಯಲ್ಲ, ಮನೆಗೆಲಸ ಮಾಡು-ಅತ್ತೆ-ಮಾವನ ನೋಡ್ಕೋ ಅನ್ನೋಕೆ ಗಂಡನಿಗೆ ಹಕ್ಕಿಲ್ಲ": ಹೈಕೋರ್ಟ್ ಮಹತ್ವದ ತೀರ್ಪು..!

ಬಿಡದಿ ಟೌನ್‌ಶಿಪ್‌ ಯೋಜನೆ: ರೈತರ ಭೂಮಿ ಕಸಿಯಲ್ಲ, denotification ಮಾಡಲ್ಲ- ಸಿಎಂ ಡಿಕೆ. ಶಿವಕುಮಾರ್ ಸ್ಪಷ್ಟನೆ

Operation Sindoor; Kirana Hills ಪರಮಾಣು ನೆಲೆಗೆ ಅಪ್ಪಳಿಸಿದ ಭಾರತದ ಡ್ರೋನ್? ಬೆಚ್ಚಿಬಿದ್ದ ಪಾಕಿಸ್ತಾನ..! Indian Army ಹೇಳಿದ್ದೇನು?