ಸಾಂದರ್ಭಿಕ ಚಿತ್ರ 
ರಾಜ್ಯ

ಕೊರೋನಾ ಏರಿಳಿತ: ಇಂದು ಬೆಂಗಳೂರಿನಲ್ಲಿ 1,274 ಸೇರಿ ರಾಜ್ಯದಲ್ಲಿ 1,736 ಮಂದಿಗೆ ಪಾಸಿಟಿವ್; ಸಾವು ಶೂನ್ಯ

ರಾಜ್ಯದಲ್ಲಿ ಕೊರೋನಾ ಪಾಸಿಟಿವ್ ಪ್ರಕರಣಗಳ ಸಂಖ್ಯೆಯಲ್ಲಿ ಏರಿಳಿತ ಮುಂದುವರೆದಿದ್ದು, ಕಳೆದ 24 ಗಂಟೆಯಲ್ಲಿ 1736 ಮಂದಿಗೆ ಕೋವಿಡ್ ಪಾಸಿಟಿವ್ ದೃಢಪಟ್ಟಿದೆ. ಇದರೊಂದಿಗೆ ಸೋಂಕಿತರ ಸಂಖ್ಯೆ 40,10,386ಕ್ಕೆ ಏರಿಕೆಯಾಗಿದೆ.

ಬೆಂಗಳೂರು: ರಾಜ್ಯದಲ್ಲಿ ಕೊರೋನಾ ಪಾಸಿಟಿವ್ ಪ್ರಕರಣಗಳ ಸಂಖ್ಯೆಯಲ್ಲಿ ಏರಿಳಿತ ಮುಂದುವರೆದಿದ್ದು, ಕಳೆದ 24 ಗಂಟೆಯಲ್ಲಿ 1736 ಮಂದಿಗೆ ಕೋವಿಡ್ ಪಾಸಿಟಿವ್ ದೃಢಪಟ್ಟಿದೆ. ಇದರೊಂದಿಗೆ ಸೋಂಕಿತರ ಸಂಖ್ಯೆ 40,10,386ಕ್ಕೆ ಏರಿಕೆಯಾಗಿದೆ.

ಇನ್ನೂ ರಾಜ್ಯದಲ್ಲಿ ಮಹಾಮಾರಿ ಕೊರೋನಾದಿಂದ ಇಂದು ಯಾವುದೇ ಸಾವು ವರದಿಯಾಗಿಲ್ಲ. ಹೀಗಾಗಿ ಸಾವಿನ ಸಂಖ್ಯೆ 40106 ಇದೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಪ್ರಕಟಣೆಯಲ್ಲಿ ತಿಳಿಸಿದೆ.

ಬೆಂಗಳೂರಿನಲ್ಲಿ ಇಂದು 1274 ಮಂದಿಗೆ ಸೋಂಕು ದೃಢಪಟ್ಟಿದೆ. ಇದರೊಂದಿಗೆ ನಗರದಲ್ಲಿ ಸೋಂಕಿತರ ಸಂಖ್ಯೆ 18,38,334ಕ್ಕೆ ಏರಿಕೆಯಾಗಿದೆ. ಇಂದು ರಾಜಧಾನಿಯಲ್ಲೂ ಯಾವುದೇ ಕೊರೋನಾ ಸಾವು ವರದಿಯಾಗಿಲ್ಲ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಹೇಳಿದೆ.

ರಾಜ್ಯದಲ್ಲಿ ಇಂದು 1699 ಸೋಂಕಿತರು ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. ಇದರೊಂದಿಗೆ ಸೋಂಕಿನಿಂದ ಚೇತರಿಸಿಕೊಂಡವರ ಸಂಖ್ಯೆ 39,59,342ಕ್ಕೆ ಏರಿಕೆಯಾಗಿದೆ. ಇನ್ನು 10896 ಸಕ್ರಿಯ ಪ್ರಕರಣಗಳಿವೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

"Bad News": ಅಮೆರಿಕದ ಷರತ್ತುಗಳನ್ನು ಇರಾನ್ ಒಪ್ಪುತ್ತಿಲ್ಲ- ಜೆಡಿ ವ್ಯಾನ್ಸ್!

ಪಾಕಿಸ್ತಾನ ಮಧ್ಯಸ್ಥಿಕೆಯಲ್ಲಿ ನೇರ ಮಾತುಕತೆ; ಅಮೆರಿಕದ ಬೇಡಿಕೆ ಅತಿಯಾಗಿದೆ ಎಂದು ಇರಾನ್ ಮಾಧ್ಯಮಗಳ ಆರೋಪ

ಅಂತಿಮಗೊಳ್ಳದ ಹಾರ್ಮುಜ್ ಜಲಸಂಧಿ ಬಿಕ್ಕಟ್ಟು: 2 ನೇ ದಿನವಾದ ಇಂದು ಕೂಡಾ ಯುಎಸ್- ಇರಾನ್ ಮಾತುಕತೆ ಮುಂದುವರಿಕೆ!

PM Modi- Rahul: ರಾಜಕೀಯ ಬದ್ಧ ವೈರಿಗಳ ಅಪರೂಪದ ಚುಟುಕು ಸಂಭಾಷಣೆ- ವಿಡಿಯೋ ವೈರಲ್!

ಬೆಂಗಳೂರು: 500 ರೂ.ನಲ್ಲಿ ಪುಲ್ ಡೇ ಬಿಂದಾಜ್ ಲೈಫ್! ಪಶ್ಚಿಮ ಬಂಗಾಳ ಯುವತಿಯ ವಿಡಿಯೋ ವೈರಲ್

SCROLL FOR NEXT