ಬಸವರಾಜ ಬೊಮ್ಮಾಯಿ 
ರಾಜ್ಯ

ಭಟ್ಕಳಕ್ಕೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಪ್ರವಾಸ: ಪ್ರವಾಹ ಪೀಡಿತ ಪ್ರದೇಶಗಳಿಗೆ ಭೇಟಿ

ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಪ್ರವಾಹ ಪೀಡಿತ ಭಟ್ಕಳಕ್ಕೆ ಬುಧವಾರ ಭೇಟಿ ನೀಡಲಿದ್ದಾರೆ.ಬೆಂಗಳೂರಿನಿಂದ ವಿಮಾನದಲ್ಲಿ ಗೋವಾಕ್ಕೆ ಬಂದು ಅಲ್ಲಿಂದ ರಸ್ತೆ ಮೂಲಕ ಭಟ್ಕಳಕ್ಕೆ ಪ್ರಯಾಣಿಸಲಿದ್ದಾರೆ.

ಕಾರವಾರ: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಪ್ರವಾಹ ಪೀಡಿತ ಭಟ್ಕಳಕ್ಕೆ ಬುಧವಾರ ಭೇಟಿ ನೀಡಲಿದ್ದಾರೆ.

ಬೆಂಗಳೂರಿನಿಂದ ವಿಮಾನದಲ್ಲಿ ಗೋವಾಕ್ಕೆ ಬಂದು ಅಲ್ಲಿಂದ ರಸ್ತೆ ಮೂಲಕ ಭಟ್ಕಳಕ್ಕೆ ಪ್ರಯಾಣಿಸಲಿದ್ದಾರೆ. ಪ್ರವಾಹ ಪೀಡಿತ ಪ್ರದೇಶಗಳನ್ನು ವೀಕ್ಷಿಸಲಿದ್ದಾರೆ, ಕಂದಾಯ ಸಚಿವ ಆರ್. ಅಶೋಕ ಅವರೂ ಜೊತೆಗಿರಲಿದ್ದಾರೆ.

ಸೋಮವಾರ ತಡರಾತ್ರಿಯಿಂದ ಸುರಿದ ಭಾರಿ ಮಳೆಯಿಂದಾಗಿ ಭಟ್ಕಳದಲ್ಲಿ ಹಿಂದೆಂದೂ ಕಂಡರಿಯದಂಥ ಪ್ರವಾಹ ಉಂಟಾಗಿತ್ತು. ದಾಖಲೆಯ 52 ಸೆಂ.ಮೀ ಮಳೆಯಾಗಿತ್ತು.

ತಾಲ್ಲೂಕಿನ ಮುಟ್ಟಳ್ಳಿಯಲ್ಲಿ ಮನೆಯ ಮೇಲೆ ಗುಡ್ಡ ಕುಸಿದು ನಾಲ್ವರು ಮೃತಪಟ್ಟಿದ್ದರು. ನೂರಾರು ಮನೆಗಳು, ಅಂಗಡಿಗಳು, ಕೃಷಿ ಜಮೀನಿಗೆ ಹಾನಿಯಾಗಿದೆ.  4000ಕ್ಕೂ ಹೆಚ್ಚು ಮನೆಗಳು ಜಲಾವೃತವಾಗಿವೆ ಬುಧವಾರ ಸಂಜೆ ವೇಳೆಗೆ ಅವರು ಭಟ್ಕಳ ತಲುಪಲಿದ್ದಾರೆ. ಭಟ್ಕಳ ಸುತ್ತಮುತ್ತಲಿನ ಸ್ಥಳಗಳಿಗೆ ಭೇಟಿ ನೀಡಲಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

US ವಲಸೆ ನೀತಿ ಮತ್ತಷ್ಟು ಕಠಿಣ: ಅರ್ಜಿದಾರರಿಗೆ ಟ್ರಂಪ್‌ ಸರ್ಕಾರ ಶಾಕ್‌: ವಿಶ್ವದಾದ್ಯಂತ VISA ಸಂದರ್ಶನಗಳಿಗೆ ಬ್ರೇಕ್‌!

TMCಗೆ ಸೆಡ್ಡು ಹೊಡೆದ ಬಂಡಾಯ ಸಂಸದರಿಗೆ ಶಾಕ್‌: 20 ಮಂದಿಗೆ ಲೋಕಸಭಾ ಸಚಿವಾಲಯ ನೋಟಿಸ್‌, 7 ದಿನಗಳೊಳಗೆ ಉತ್ತರಿಸುವಂತೆ ಸೂಚನೆ..!

ಬಡವರ ಬದುಕಿಗೆ ಬೆಲೆ ಏರಿಕೆ ಬರೆ: ‘ಅಚ್ಛೇ ದಿನ್ ಆಯ್ತು ದುಬಾರಿ ದಿನ್: ಅಗತ್ಯ ವಸ್ತುಗಳ ಬೆಲೆ ಏರಿಕೆ ಬೆನ್ನಲ್ಲೇ ಮೋದಿ ಸರ್ಕಾರದ ವಿರುದ್ಧ ಕಾಂಗ್ರೆಸ್ ವಾಗ್ದಾಳಿ..!

ಬಿಜೆಪಿ ಸಂಸದೀಯ ಮಂಡಳಿಯಲ್ಲಿ ಮಹತ್ತರ ಬದಲಾವಣೆ ಸಾಧ್ಯತೆ; ನಾಲ್ವರು ಮುಖ್ಯಮಂತ್ರಿಗಳಿಗೆ ಸ್ಥಾನ?

ಇರಾನ್‌ ತೈಲ ವಹಿವಾಟಿಗೆ ಅಮೆರಿಕಾ ಬ್ರೇಕ್: ಭಾರತದ 4 ಕಂಪನಿಗಳು ಕಪ್ಪುಪಟ್ಟಿಗೆ, 3 ಪ್ರಜೆಗಳ ಮೇಲೂ ನಿರ್ಬಂಧ..!