ರಾಜ್ಯ

ರಾಜ್ಯದಲ್ಲಿ ಮತ್ತೆ 2 ಸಾವಿರ ಗಡಿ ದಾಟಿದ ಕೊರೋನಾ ಕೇಸ್: ಇಂದು ಮಹಾಮಾರಿಗೆ ಇಬ್ಬರು ಬಲಿ

Lingaraj Badiger

ಬೆಂಗಳೂರು: ರಾಜ್ಯದಲ್ಲಿ ಕೊರೋನಾ ಪಾಸಿಟಿವ್ ಪ್ರಕರಣಗಳ ಸಂಖ್ಯೆಯಲ್ಲಿ ಮತ್ತೆ ಹೆಚ್ಚಳವಾಗುತ್ತಿದ್ದು, ಕಳೆದ 24 ಗಂಟೆಯಲ್ಲಿ 2136 ಮಂದಿಗೆ ಕೋವಿಡ್ ಪಾಸಿಟಿವ್ ದೃಢಪಟ್ಟಿದೆ. ಇದರೊಂದಿಗೆ ಸೋಂಕಿತರ ಸಂಖ್ಯೆ 40,12,522ಕ್ಕೆ ಏರಿಕೆಯಾಗಿದೆ.

ಇನ್ನೂ ರಾಜ್ಯದಲ್ಲಿ ಮಹಾಮಾರಿ ಕೊರೋನಾದಿಂದ ಇಂದು ಇಬ್ಬರು ಮೃತಪಟ್ಟಿದ್ದು, ಇದರೊಂದಿಗೆ ಸಾವಿನ ಸಂಖ್ಯೆ 40,108ಕ್ಕೆ ಏರಿಕೆಯಾಗಿದೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಪ್ರಕಟಣೆಯಲ್ಲಿ ತಿಳಿಸಿದೆ.

ಬೆಂಗಳೂರಿನಲ್ಲಿ ಇಂದು 1,584 ಮಂದಿಗೆ ಸೋಂಕು ದೃಢಪಟ್ಟಿದೆ. ಇದರೊಂದಿಗೆ ನಗರದಲ್ಲಿ ಸೋಂಕಿತರ ಸಂಖ್ಯೆ 18,39,918ಕ್ಕೆ ಏರಿಕೆಯಾಗಿದೆ. ರಾಜಧಾನಿಯಲ್ಲಿ ಕೊರೋನಾದಿಂದ ಇಂದು ಒಬ್ಬರು ಮೃತಪಟ್ಟಿದ್ದಾರೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಹೇಳಿದೆ.

ರಾಜ್ಯದಲ್ಲಿ ಇಂದು 1,845 ಸೋಂಕಿತರು ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. ಇದರೊಂದಿಗೆ ಸೋಂಕಿನಿಂದ ಚೇತರಿಸಿಕೊಂಡವರ ಸಂಖ್ಯೆ 39,61,187ಕ್ಕೆ ಏರಿಕೆಯಾಗಿದೆ. ಇನ್ನು 11185 ಸಕ್ರಿಯ ಪ್ರಕರಣಗಳಿವೆ.

SCROLL FOR NEXT