ವಿದ್ಯಾರ್ಥಿಗಳ ಪ್ರತಿಭಟನೆಯ ಚಿತ್ರ 
ರಾಜ್ಯ

ಪ್ರತಿಭಟನೆ ನಡುವೆ ಆಗಸ್ಟ್ 8 ರಿಂದ ಕೆಸಿಇಟಿ ದಾಖಲೆ ಪರಿಶೀಲನೆ ಆರಂಭ

ಉನ್ನತ ಶಿಕ್ಷಣ ಸಚಿವ ಡಾ.ಸಿ.ಎನ್. ಅಶ್ವತ್ಥ ನಾರಾಯಣ ಅವರ ನಿವಾಸ ಮತ್ತು ಕರ್ನಾಟಕ ಪರೀಕ್ಷಾ ಪ್ರಾಧಿಕಾರದ ಬಳಿ ಬೃಹತ್ ಪ್ರತಿಭಟನೆ ನಡುವೆ ಆಗಸ್ಟ್ 5 ರಿಂದ ಆರಂಭವಾಗಬೇಕಿದ್ದ ಕೆ ಸಿಇಟಿ ದಾಖಲೆ ಪರಿಶೀಲನೆಯನ್ನು ಪ್ರಾಧಿಕಾರ ಮುಂದೂಡಿದೆ.

ಬೆಂಗಳೂರು: ಉನ್ನತ ಶಿಕ್ಷಣ ಸಚಿವ ಡಾ.ಸಿ.ಎನ್. ಅಶ್ವತ್ಥ ನಾರಾಯಣ ಅವರ ನಿವಾಸ ಮತ್ತು ಕರ್ನಾಟಕ ಪರೀಕ್ಷಾ ಪ್ರಾಧಿಕಾರದ ಬಳಿ ಬೃಹತ್ ಪ್ರತಿಭಟನೆ ನಡುವೆ ಆಗಸ್ಟ್ 5 ರಿಂದ ಆರಂಭವಾಗಬೇಕಿದ್ದ ಕೆ ಸಿಇಟಿ ದಾಖಲೆ ಪರಿಶೀಲನೆಯನ್ನು ಪ್ರಾಧಿಕಾರ ಮುಂದೂಡಿದೆ. ಕೆಸಿಇಟಿ ಅಂಕಗಳು ಮತ್ತು ಶ್ರೇಯಾಂಕಗಳಲ್ಲಿ ಪುನರಾವರ್ತಿತರಿಗೆ 2021 ರ ಪಿಯು ಅಂಕಗಳನ್ನು ಸೇರಿಸದ ಪ್ರಾಧಿಕಾರದ ನಿರ್ಧಾರಕ್ಕೆ ಪೋಷಕರು ಮತ್ತು ವಿದ್ಯಾರ್ಥಿಗಳು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಆದಾಗ್ಯೂ, ಇತರ ವಿದ್ಯಾರ್ಥಿಗಳಿಗೆ ಅನ್ಯಾಯವಾಗಲಿದೆ ಎಂಬುದು ಸಾಬೀತಾಗಿರುವುದರಿಂದ ಕೆಇಎ ನಿರ್ಧಾರದಲ್ಲಿ ಯಾವುದೇ ಬದಲಾವಣೆಯಿಲ್ಲ ಎಂದು ಸಚಿವ ಅಶ್ವತ್ಥ ನಾರಾಯಣ ತಿಳಿಸಿದ್ದಾರೆ. ಈ ಕುರಿತು ಮಂಗಳವಾರ ರಾತ್ರಿ ಟ್ವೀಟ್ ಮಾಡಿರುವ ಸಚಿವರು,  3 ಲಕ್ಷ ವಿದ್ಯಾರ್ಥಿಗಳ ಹಿತದೃಷ್ಟಿಯಿಂದ 2021-22ನೇ ಶೈಕ್ಷಣಿಕ ವರ್ಷದಲ್ಲಿ ದ್ವಿತೀಯ ಪಿಯುಸಿಯಲ್ಲಿ ತೇರ್ಗಡೆ ಹೊಂದಿ ಈ ವರ್ಷವೂ ಪುನಃ ಸಿಇಟಿ ಬರೆದಿರುವ 24,000 ವಿದ್ಯಾರ್ಥಿಗಳ ಪಿಯುಸಿ ಅಂಕಗಳನ್ನು ಪರಿಗಣಿಸದಿರಲು ಕೆಇಎ ನಿರ್ಧರಿಸಿದ್ದು ಇದರಲ್ಲಿ ಯಾವುದೇ ಬದಲಾವಣೆ ಇಲ್ಲ. ಈ ಕುರಿತು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರಿಗೂ ತಿಳಿಸಲಾಗಿದೆ ಎಂದಿದ್ದಾರೆ. 

ಇದರ ಹೊರತಾಗಿಯೂ, ಆಗಸ್ಟ್ 5 ರಿಂದ ಫ್ರೀಡಂ ಪಾರ್ಕ್‌ನಲ್ಲಿ ಅನಿರ್ದಿಷ್ಟಾವಧಿ ಉಪವಾಸವನ್ನು ಪ್ರಾರಂಭಿಸುವುದಾಗಿ ಪೋಷಕರು ಮತ್ತು ವಿದ್ಯಾರ್ಥಿಗಳು ಹೇಳಿದ್ದಾರೆ. ವಿದ್ಯಾರ್ಥಿಗಳಿಗೆ ತಿಳುವಳಿಕೆ ನೀಡದ ಕಾರಣ ಮತ್ತು ಈ ಹಿಂದೆ ಪ್ರಾಧಿಕಾರದಿಂದ ಯಾವುದೇ ಘೋಷಣೆ ಮಾಡದ ಕಾರಣ ಈ ನಿರ್ಧಾರ ಅಭೂತಪೂರ್ವವಾಗಿದೆ ಎಂದು ಅವರು ಹೇಳಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ದೆಹಲಿಯಲ್ಲಿ ಹೈಡ್ರಾಮಾ: ವಿಮಾನ ನಿಲ್ದಾಣದಲ್ಲಿ ಬಂಧನಕ್ಕೊಳಗಾಗಿದ್ದ CJP ನಾಯಕರಾದ ದೀಪ್ಕೆ, ರಾಂಕಾ, ದಾಸ್ ಕೊನೆಗೂ ಬಿಡುಗಡೆ..!

Riyadh ವಿಮಾನ ನಿಲ್ದಾಣದ ಮೇಲೆ ಕ್ಷಿಪಣಿ ದಾಳಿ: 12 ಮಂದಿ ಸಾವು, 300ಕ್ಕೂ ಹೆಚ್ಚು ಜನರಿಗೆ ಗಾಯ

Operation Sindoor ನಮ್ಮ ಆತ್ಮರಕ್ಷಣೆಯ ಕ್ರಮ, ಪರಮಾಣು ಬೆದರಿಕೆಗೆ ಎಂದಿಗೂ ಮಣಿಯಲ್ಲ: 3 'ಲಕ್ಷ್ಮಣ ರೇಖೆ' ಎಳೆದು ಪಾಕ್'ಗೆ ಭಾರತ ಖಡಕ್ ಎಚ್ಚರಿಕೆ..!

ದೆಹಲಿಯಲ್ಲಿ ನಾಯಕರ ಬಂಧನ, ಮೆಟ್ರೋ ಸ್ಥಗಿತ ಕುರಿತ ನ್ಯಾಯಾಂಗ ನಿಂದನೆ: ಭಾನುವಾರವೂ 'ಸುಪ್ರೀಂ' ವಿಶೇಷ ಪೀಠದಿಂದ ವಿಚಾರಣೆ!

CJP ಪ್ರತಿಭಟನೆಗೆ ದೇಶವಿರೋಧಿ ಶಕ್ತಿಗಳ ಸಾಥ್‌: ಭಾರತದ ವರ್ಚಸ್ಸಿಗೆ ಮಸಿ ಬಳಿಯುವ ಪ್ರಯತ್ನ..!