ಸಾಂದರ್ಭಿಕ ಚಿತ್ರ 
ರಾಜ್ಯ

ದ್ವಿ ಚಕ್ರವಾಹನದಲ್ಲಿ ಹಿಂಬದಿ ಪ್ರಯಾಣಿಕರಿಗೆ ನಿರ್ಬಂಧ: ನಿಯಮ ಹಿಂತೆಗೆದುಕೊಂಡ ಮಂಗಳೂರು ಪೊಲೀಸ್!

ಇತ್ತೀಚಿನ ಯುವಕರ ಸರಣಿ ಕೊಲೆ ಹಿನ್ನೆಲೆಯಲ್ಲಿ ಕಾನೂನು ಮತ್ತು ಸುವ್ಯವಸ್ಥೆ ನಿಟ್ಟಿನಲ್ಲಿ ಮಂಗಳೂರು ನಗರ ಪೊಲೀಸರು ಗುರುವಾರ ದ್ವಿಚಕ್ರವಾಹನದ ಹಿಂಬದಿಯಲ್ಲಿ ಪುರುಷ ಪ್ರಯಾಣಿಕರನ್ನು ನಿರ್ಬಂಧಿಸಿ ಹೊರಡಿಸಿದ್ದ ಆದೇಶವನ್ನು 45 ನಿಮಿಷದೊಳಗೆ ಹಿಂಪಡೆದಿದ್ದಾರೆ.  

ಮಂಗಳೂರು: ಇತ್ತೀಚಿನ ಯುವಕರ ಸರಣಿ ಕೊಲೆ ಹಿನ್ನೆಲೆಯಲ್ಲಿ ಕಾನೂನು ಮತ್ತು ಸುವ್ಯವಸ್ಥೆ ನಿಟ್ಟಿನಲ್ಲಿ ಮಂಗಳೂರು ನಗರ ಪೊಲೀಸರು ಗುರುವಾರ ದ್ವಿಚಕ್ರವಾಹನದ ಹಿಂಬದಿಯಲ್ಲಿ ಪುರುಷ ಪ್ರಯಾಣಿಕರನ್ನು ನಿರ್ಬಂಧಿಸಿ ಹೊರಡಿಸಿದ್ದ ಆದೇಶವನ್ನು 45 ನಿಮಿಷದೊಳಗೆ ಹಿಂಪಡೆದಿದ್ದಾರೆ.  

ಮಂಗಳೂರು ನಗರ, ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಗಳ ಪೊಲೀಸ್ ಅಧಿಕಾರಿಗಳೊಂದಿಗೆ ಪರಾಮರ್ಶನಾ ಸಭೆ ನಡೆಸಿದ ಸುದ್ದಿಗಾರರೊಂದಿಗೆ ಮಾತನಾಡಿದ ಕಾನೂನು ಮತ್ತು ಸುವ್ಯವಸ್ಥೆ ವಿಭಾಗದ ಎಡಿಜಿಪಿ ಅಲೋಕ್ ಕುಮಾರ್, ಜಿಲ್ಲೆಯಲ್ಲಿ ಕೆಲ ದಿನಗಳ ಮಟ್ಟಿಗೆ  ದ್ವಿಚಕ್ರ ವಾಹನದ ಹಿಂಬದಿಯಲ್ಲಿ ಪುರುಷ ಪ್ರಯಾಣಿಕರನ್ನು ನಿರ್ಬಂಧಿಸಲಾಗಿದೆ. ದುಷ್ಕರ್ಮಿಗಳು ಈ ದುಷ್ಕರ್ಮಿಗಳ ಕೊಲೆಯಂತಹ ಹೀನ ಕೃತ್ಯಗಳಲ್ಲಿ ತೊಡಗದಂತೆ ತಡೆಯಲು ಉತ್ತರ ಭಾರತದ ಕೆಲವೆಡೆ ಮತ್ತು ಕೇರಳದ ವೈನಾಡಿನಲ್ಲಿ ಇಂತಹ ಕ್ರಮಗಳನ್ನು ತೆಗೆದುಕೊಳ್ಳಲಾಗಿದೆ ಎಂದು ತಿಳಿಸಿದರು.

ಈ ನಿಯಮದ ಆದೇಶವನ್ನು ಮಂಗಳೂರು ನಗರ ಪೊಲೀಸ್ ಆಯುಕ್ತ ಎನ್. ಶಶಿ ಕುಮಾರ್ ಸಂಜೆ  4.05 ರಲ್ಲಿ ಹೊರಡಿಸಿದ್ದರು. ಆಗಸ್ಟ್ 5 ರಿಂದ 8ರವರೆಗೆ ದ್ವಿಚಕ್ರ ವಾಹನದ ಹಿಂಬದಿಯಲ್ಲಿ ಪುರುಷ ಪ್ರಯಾಣಿಕರನ್ನು ಸಂಜೆ 6 ಗಂಟೆಯಿಂದ ಬೆಳಗ್ಗೆ 6 ಗಂಟೆಯವರೆಗೂ ನಿರ್ಬಂಧಿಸಲಾಗಿದೆ ಎಂದು ಆದೇಶದಲ್ಲಿ ಹೇಳಲಾಗಿತ್ತು.

ಆದಾಗ್ಯೂ, ಈ ನಿಯಮ ಮಕ್ಕಳು, ಮಹಿಳೆಯರು ಮತ್ತು ಹಿರಿಯ ನಾಗರಿಕರಿಗೆ ಅನ್ವಯವಾಗಲ್ಲ ಎಂದು ಆದೇಶದಲ್ಲಿ ಉಲ್ಲೇಖಿಸಲಾಗಿತ್ತು. ಆದರೆ, ಈ  ನಿರ್ಧಾರಕ್ಕೆ ಸಾಮಾಜಿಕ ಜಾಲತಾಣಗಳಲ್ಲಿ ವ್ಯಾಪಕ ಜನಾಕ್ರೋಶ ವ್ಯಕ್ತವಾಗದ ಹಿನ್ನೆಲೆಯಲ್ಲಿ ಸಂಜೆ 4.45ರಲ್ಲಿ ಸಾರ್ವಜನಿಕ ಹಿತಾಸಕ್ತಿ ದೃಷ್ಟಿಯಿಂದ ಆದೇಶವನ್ನು ಪೊಲೀಸ್ ಆಯುಕ್ತರು ವಾಪಸ್ ಪಡೆದುಕೊಂಡಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಸಿದ್ದರಾಮಯ್ಯ ಮೇಲೆ ತೂಗುಗತ್ತಿ: ಅಧಿಕಾರದಲ್ಲಿ ಉಳಿಯಲು ಸಂಪುಟ ಪುನಾರಚನೆ ಕಸರತ್ತು; ಬಿಹಾರ-ಕೇರಳ ಚುನಾವಣೆಯತ್ತ ಡಿಕೆಶಿ ಚಿತ್ತ!

ವೀರೇಂದ್ರ ಪಪ್ಪಿ ಕರ್ಮಕಾಂಡ ನೋಡುತ್ತಿದ್ದರೆ CM- DCM ಇನ್ಯಾವ ಪರಿ ಲೂಟಿ ಮಾಡಿ ಹೈಕಮಾಂಡ್ ಗೆ ಕಪ್ಪ ನೀಡುತ್ತಿರಬೇಡಾ?

ಈ ಬಾರಿ ನಾನು ಸಚಿವನಾಗುವ ಭರವಸೆ ಇದೆ: ಸಂಪುಟ ವಿಸ್ತರಣೆಯೇ ನವೆಂಬರ್ ಕ್ರಾಂತಿಯಿರಬಹುದು; ಸಲೀಂ ಅಹ್ಮದ್

BDA ಯೋಜನಾ ಪ್ರಾಧಿಕಾರದ ಜವಾಬ್ದಾರಿ ಹಸ್ತಾಂತರ: GBA ವಿರೋಧಿಸುವವರು ಪಾಲಿಕೆ ಚುನಾವಣೆ ಬಹಿಷ್ಕರಿಸಲಿ; ಡಿಕೆಶಿ ಸವಾಲು

ಮೈಸೂರು ಪೊಲೀಸರಿಗೆ CM ಪುತ್ರನ ಕಾಟ: ಯಾವುದೇ ವರ್ಗಾವಣೆಯಾಗಬೇಕಾದರೂ ಯತೀಂದ್ರಗೆ ಟ್ಯಾಕ್ಸ್ ಕಟ್ಟಬೇಕು; ಪ್ರತಾಪ್ ಸಿಂಹ

SCROLL FOR NEXT