ರಾಜ್ಯ

ಕೊರೋನಾ ಏರಿಳಿತ: ಇಂದು ಬೆಂಗಳೂರಿನಲ್ಲಿ 1,342 ಸೇರಿ ರಾಜ್ಯದಲ್ಲಿ 1,992 ಮಂದಿಗೆ ಪಾಸಿಟಿವ್; 3 ಸಾವು

Srinivas Rao BV

ಬೆಂಗಳೂರು: ರಾಜ್ಯದಲ್ಲಿ ಕೊರೋನಾ ಪಾಸಿಟಿವ್ ಪ್ರಕರಣಗಳ ಸಂಖ್ಯೆಯಲ್ಲಿ ಏರಿಳಿತ ಮುಂದುವರೆದಿದ್ದು, ಕಳೆದ 24 ಗಂಟೆಯಲ್ಲಿ 1,992 ಮಂದಿಗೆ ಕೋವಿಡ್ ಪಾಸಿಟಿವ್ ದೃಢಪಟ್ಟಿದೆ. ಇದರೊಂದಿಗೆ ಸೋಂಕಿತರ ಸಂಖ್ಯೆ  40,14,514ಕ್ಕೆ ಏರಿಕೆಯಾಗಿದೆ.

ಇನ್ನೂ ರಾಜ್ಯದಲ್ಲಿ ಮಹಾಮಾರಿ ಕೊರೋನಾದಿಂದ ಇಂದು 3 ಮಂದಿ ಸಾವನ್ನಪ್ಪಿದ್ದು ಸಾವಿನ ಸಂಖ್ಯೆ 40111ಕ್ಕೆ ಏರಿಕೆಯಾಗಿದೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಪ್ರಕಟಣೆಯಲ್ಲಿ ತಿಳಿಸಿದೆ.

ಬೆಂಗಳೂರಿನಲ್ಲಿ ಇಂದು 1,342 ಮಂದಿಗೆ ಸೋಂಕು ದೃಢಪಟ್ಟಿದೆ. ಇದರೊಂದಿಗೆ ನಗರದಲ್ಲಿ ಸೋಂಕಿತರ ಸಂಖ್ಯೆ 18,41,260 ಕ್ಕೆ ಏರಿಕೆಯಾಗಿದೆ. ಇಂದು ರಾಜಧಾನಿಯಲ್ಲೂ ಯಾವುದೇ ಕೊರೋನಾ ಸಾವು ವರದಿಯಾಗಿಲ್ಲ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಹೇಳಿದೆ.

ರಾಜ್ಯದಲ್ಲಿ ಇಂದು 2,107ಸೋಂಕಿತರು ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. ಇದರೊಂದಿಗೆ ಸೋಂಕಿನಿಂದ ಚೇತರಿಸಿಕೊಂಡವರ ಸಂಖ್ಯೆ 39,63,294ಕ್ಕೆ ಏರಿಕೆಯಾಗಿದೆ. ಇನ್ನು ಸಕ್ರಿಯ ಪ್ರಕರಣಗಳ ಸಂಖ್ಯೆ 11,067ಕ್ಕೆ ಏರಿಕೆಯಾಗಿದೆ. 
 

SCROLL FOR NEXT