ರಾಜ್ಯ

ಸಿಎಂ ಬೊಮ್ಮಾಯಿಗೆ ಕೋವಿಡ್ ಪಾಸಿಟಿವ್: ದೆಹಲಿ ಪ್ರವಾಸ ರದ್ದು

Sumana Upadhyaya

ಬೆಂಗಳೂರು: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಗೆ ಕೋವಿಡ್ ಪಾಸಿಟಿವ್ ದೃಢಪಟ್ಟಿದೆ. ಈ ವಿಷಯವನ್ನು ಅವರು ಟ್ವಿಟ್ಟರ್ ಮೂಲಕ ತಿಳಿಸಿದ್ದಾರೆ. ಅವರ ಆರೋಗ್ಯ ಸ್ಥಿರವಾಗಿದೆ. 

ನನಗೆ ಕೋವಿಡ್ ಪಾಸಿಟಿವ್ ಪರೀಕ್ಷೆಯಲ್ಲಿ ದೃಢಪಟ್ಟಿದೆ. ಕೊರೋನಾ ದೃಢಪಟ್ಟ ತಕ್ಷಣ ಪ್ರತ್ಯೇಕವಾಗಿದ್ದು ನನ್ನ ಸಂಪರ್ಕಕ್ಕೆ ಬಂದಿರುವವರೆಲ್ಲರೂ ಪರೀಕ್ಷೆ ಮಾಡಿಸಿಕೊಂಡು ಎಚ್ಚರಿಕೆ ವಹಿಸಿ ಎಂದು ತಿಳಿಸಿದ್ದಾರೆ.

ಮುಖ್ಯಮಂತ್ರಿ ಬೊಮ್ಮಾಯಿಯವರು ದೆಹಲಿಗೆ ತೆರಳಬೇಕಾಗಿತ್ತು. ಆದರೆ ಕೊರೋನಾ ಕಂಡುಬಂದ ಹಿನ್ನೆಲೆಯಲ್ಲಿ ದೆಹಲಿ ಪ್ರವಾಸ ರದ್ದಾಗಿದೆ. ಮುಖ್ಯಮಂತ್ರಿಗಳು ದೆಹಲಿಯಲ್ಲಿ ಪ್ರಧಾನಿ ನರೇಂದ್ರ ಮೋದಿಯವರ ಅಧ್ಯಕ್ಷತೆಯಲ್ಲಿ ನಡೆಯುವ ಅಧಿಕೃತ ಸಭೆಯಲ್ಲಿ ಪಾಲ್ಗೊಳ್ಳಬೇಕಿತ್ತು. 

ಮುಖ್ಯಮಂತ್ರಿಗಳು ನಿನ್ನೆ ಬೆಂಗಳೂರಿನಲ್ಲಿ ಹಲವು ಕಾರ್ಯಕ್ರಮಗಳಲ್ಲಿ ಭಾಗಿಯಾಗಿದ್ದರು. ಬೆಳಗ್ಗೆ ಚಿತ್ರಕಲಾ ಪರಿಷತ್​ನಲ್ಲಿ ಕೈಮಗ್ಗ ಮೇಳ ಕಾರ್ಯಕ್ರಮ, ಮಧ್ಯಾಹ್ನ ಲಾಲ್​​ಬಾಗ್​​ನ ಫಲ-ಪುಷ್ಪ ಪ್ರದರ್ಶನದಲ್ಲಿ ಭಾಗಿಯಾಗಿದ್ದರು, ಸಂಜೆಯವರೆಗೂ ಕೃಷ್ಣಾದಲ್ಲಿ ಹಲವು ಸಭೆ ನಡೆಸಿದ್ದರು. ಮೊನ್ನೆಯಷ್ಟೇ ಕೇಂದ್ರ ಗೃಹ ಸಚಿವ ಅಮಿತ್ ಶಾ ಬೆಂಗಳೂರಿಗೆ ಭೇಟಿ ನೀಡಿ ಹೋಗಿದ್ದರು. ಆ ವೇಳೆ ಅಮಿತ್ ಶಾ ಮತ್ತು ಸಿಎಂ ಬೊಮ್ಮಾಯಿಯವರು ಹಲವು ಕಾರ್ಯಕ್ರಮಗಳಲ್ಲಿ ವೇದಿಕೆ ಹಂಚಿಕೊಂಡಿದ್ದರು. 

ಪ್ರಧಾನಿ ನರೇಂದ್ರ ಮೋದಿ ಅವರು ಇಂದು ದೆಹಲಿಯ ರಾಷ್ಟ್ರಪತಿ ಭವನದ ಸಾಂಸ್ಕೃತಿಕ ಕೇಂದ್ರದಲ್ಲಿ ಆಜಾದಿ ಕಾ ಅಮೃತ್ ಮಹೋತ್ಸವದ ರಾಷ್ಟ್ರೀಯ ಸಮಿತಿಯ ಮೂರನೇ ಸಭೆಯ ಅಧ್ಯಕ್ಷತೆ ವಹಿಸಲಿದ್ದಾರೆ. ಅದರಲ್ಲಿ ಸಿಎಂ ಬೊಮ್ಮಾಯಿ ಭಾಗಿಯಾಗಬೇಕಿತ್ತು. 

ಕಳೆದ ಜನವರಿ ತಿಂಗಳಿನಲ್ಲಿ ಮುಖ್ಯಮಂತ್ರಿ ಬೊಮ್ಮಾಯಿಯವರಿಗೆ ಮೊದಲ ಬಾರಿಗೆ ಕೊರೊನಾ ಸೋಂಕು ಕಾಣಿಸಿಕೊಂಡಿತ್ತು. ಇದೀಗ 2ನೇ ಬಾರಿಗೆ ಸೋಂಕಿಗೆ ತುತ್ತಾಗಿದ್ದಾರೆ.

SCROLL FOR NEXT