ರಾಜ್ಯ

ಕೋವಿಡ್-19: 24 ಗಂಟೆಗಳಲ್ಲಿ ರಾಜ್ಯದಲ್ಲಿ 1,837 ಹೊಸ ಪ್ರಕರಣ ಪತ್ತೆ, 4 ಸಾವು

Srinivasamurthy VN

ಬೆಂಗಳೂರು: ರಾಜ್ಯದಲ್ಲಿ ಕೋವಿಡ್ ಸಾಂಕ್ರಾಮಿಕ ಏರಿಳಿತ ಮುಂದುವರೆದಿದ್ದು, ಕಳೆದ 24 ಗಂಟೆಗಳ ಅವಧಿಯಲ್ಲಿ ಕರ್ನಾಟಕದಲ್ಲಿ 1,837 ಹೊಸ ಸೋಂಕು ಪ್ರಕರಣಗಳು ವರದಿಯಾಗಿದೆ.

ಈ ಕುರಿತು ರಾಜ್ಯ ಆರೋಗ್ಯ ಇಲಾಖೆ ಮಾಹಿತಿ ನೀಡಿದ್ದು, ರಾಜ್ಯಾದ್ಯಂತ ಕಳೆದ 24 ಗಂಟೆಗಳ ಅವಧಿಯಲ್ಲಿ 1,837 ಹೊಸ ಸೋಂಕು ಪ್ರಕರಣಗಳು ವರದಿಯಾಗಿದ್ದು, ಇದರೊಂದಿಗೆ ಸೋಂಕಿತರ ಸಂಖ್ಯೆ 40,20,087ಕ್ಕೆ ಏರಿಕೆಯಾಗಿದೆ.

ಇನ್ನೂ ರಾಜ್ಯದಲ್ಲಿ ಮಹಾಮಾರಿ ಕೊರೋನಾದಿಂದ ಇಂದು 4 ಮಂದಿ ಸೋಂಕಿತರು ಸಾವನ್ನಪ್ಪಿದ್ದು, ಆ ಮೂಲಕ ಸಾವಿನ ಸಂಖ್ಯೆ 40118ಕ್ಕೆ ಏರಿಕೆಯಾಗಿದೆ. ಇನ್ನು ರಾಜಧಾನಿ ಬೆಂಗಳೂರಿನಲ್ಲಿ ಇಂದು 1137 ಮಂದಿಗೆ ಸೋಂಕು ದೃಢಪಟ್ಟಿದೆ. ಇದರೊಂದಿಗೆ ನಗರದಲ್ಲಿ ಸೋಂಕಿತರ ಸಂಖ್ಯೆ 18,44,811 ಕ್ಕೆ ಏರಿಕೆಯಾಗಿದೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಹೇಳಿದೆ.

ರಾಜ್ಯದಲ್ಲಿ ಇಂದು 1,290 ಸೋಂಕಿತರು ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. ಇದರೊಂದಿಗೆ ಸೋಂಕಿನಿಂದ ಚೇತರಿಸಿಕೊಂಡವರ ಸಂಖ್ಯೆ 39,68,029ಕ್ಕೆ ಏರಿಕೆಯಾಗಿದೆ. ಇನ್ನು ಸಕ್ರಿಯ ಪ್ರಕರಣಗಳ ಸಂಖ್ಯೆ 11,898ಕ್ಕೆ ಏರಿಕೆಯಾಗಿದೆ. 

ಇಂದು ರಾಜ್ಯಾದ್ಯಂತ ಒಟ್ಟು 29425 ಕೋವಿಡ್ ಪರೀಕ್ಷೆ ನಡೆಸಲಾಗಿದ್ದು, ಆ ಮೂಲಕ ಒಟ್ಟಾರಿ ಕೋವಿಡ್ ಪರೀಕ್ಷೆಗಳ ಸಂಖ್ಯೆ 68024435ಕ್ಕೆ ಏರಿಕೆಯಾಗಿದೆ. 
 

SCROLL FOR NEXT