ಸಾಂದರ್ಭಿಕ ಚಿತ್ರ 
ರಾಜ್ಯ

ರಾಜ್ಯದಲ್ಲಿ ಕೊರೋನಾ ದಿಢೀರ್ ಇಳಿಕೆ: ಬೆಂಗಳೂರು 655 ಸೇರಿ 1,019 ಹೊಸ ಪ್ರಕರಣ ಪತ್ತೆ; 3 ಸಾವು

ರಾಜ್ಯದಲ್ಲಿ ಕೋವಿಡ್ ಸಾಂಕ್ರಾಮಿಕ ಏರಿಳಿತ ಮುಂದುವರೆದಿದ್ದು, ಕಳೆದ 24 ಗಂಟೆಗಳ ಅವಧಿಯಲ್ಲಿ ಕರ್ನಾಟಕದಲ್ಲಿ 1,019 ಹೊಸ ಸೋಂಕು ಪ್ರಕರಣಗಳು ವರದಿಯಾಗಿದ್ದು, ಇದರೊಂದಿಗೆ ಸೋಂಕಿತರ ಸಂಖ್ಯೆ 40,21,106ಕ್ಕೆ ಏರಿಕೆಯಾಗಿದೆ.

ಬೆಂಗಳೂರು: ರಾಜ್ಯದಲ್ಲಿ ಕೋವಿಡ್ ಸಾಂಕ್ರಾಮಿಕ ಏರಿಳಿತ ಮುಂದುವರೆದಿದ್ದು, ಕಳೆದ 24 ಗಂಟೆಗಳ ಅವಧಿಯಲ್ಲಿ ಕರ್ನಾಟಕದಲ್ಲಿ 1,019 ಹೊಸ ಸೋಂಕು ಪ್ರಕರಣಗಳು ವರದಿಯಾಗಿದ್ದು, ಇದರೊಂದಿಗೆ ಸೋಂಕಿತರ ಸಂಖ್ಯೆ 40,21,106ಕ್ಕೆ ಏರಿಕೆಯಾಗಿದೆ.

ಇನ್ನೂ ರಾಜ್ಯದಲ್ಲಿ ಮಹಾಮಾರಿ ಕೊರೋನಾದಿಂದ ಇಂದು 3 ಮಂದಿ ಸೋಂಕಿತರು ಸಾವನ್ನಪ್ಪಿದ್ದು, ಆ ಮೂಲಕ ಸಾವಿನ ಸಂಖ್ಯೆ 40,121ಕ್ಕೆ ಏರಿಕೆಯಾಗಿದೆ. ಇನ್ನು ರಾಜಧಾನಿ ಬೆಂಗಳೂರಿನಲ್ಲಿ ಇಂದು 655 ಮಂದಿಗೆ ಸೋಂಕು ದೃಢಪಟ್ಟಿದೆ. ಇದರೊಂದಿಗೆ ನಗರದಲ್ಲಿ ಸೋಂಕಿತರ ಸಂಖ್ಯೆ 18,45,466ಕ್ಕೆ ಏರಿಕೆಯಾಗಿದೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಹೇಳಿದೆ.

ರಾಜ್ಯದಲ್ಲಿ ಇಂದು 1,662 ಸೋಂಕಿತರು ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. ಇದರೊಂದಿಗೆ ಸೋಂಕಿನಿಂದ ಚೇತರಿಸಿಕೊಂಡವರ ಸಂಖ್ಯೆ 39,69,691ಕ್ಕೆ ಏರಿಕೆಯಾಗಿದೆ. ಇನ್ನು ಸಕ್ರಿಯ ಪ್ರಕರಣಗಳ ಸಂಖ್ಯೆ 11,252ಕ್ಕೆ ಏರಿಕೆಯಾಗಿದೆ. 

ಇಂದು ರಾಜ್ಯಾದ್ಯಂತ ಒಟ್ಟು 16,502 ಕೋವಿಡ್ ಪರೀಕ್ಷೆ ನಡೆಸಲಾಗಿದ್ದು, ಆ ಮೂಲಕ ಒಟ್ಟಾರೆ ಕೋವಿಡ್ ಪರೀಕ್ಷೆಗಳ ಸಂಖ್ಯೆ 68,040,937ಕ್ಕೆ ಏರಿಕೆಯಾಗಿದೆ. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

CM ಆಗಲು ಸಿದ್ದರಾಮಯ್ಯ ವಿರುದ್ಧ ಡಿಕೆಶಿ ಸ್ಟಿಂಗ್ ಆಪರೇಷನ್; ಈಗ ಸಚಿವರ ವಿರುದ್ಧವೂ ಅದೇ ತಂತ್ರ: ಕುಮಾರಸ್ವಾಮಿ ಗಂಭೀರ ಆರೋಪ

SIR ವೇಳೆ ಡಿಲೀಟ್ ಆಗಿರುವ 13.3 ಕೋಟಿ ಮತದಾರರ ಪತ್ತೆಗೆ ಕಾಂಗ್ರೆಸ್‌ನಿಂದ ‘ಮತ ರಕ್ಷಕ’ರ ನೇಮಕ!

'ಸ್ಪಾದಲ್ಲಿ ಅಕ್ರಮ ಚಟುವಟಿಕೆ' ಎಂದು ಆರೋಪಿಸಿ ದಾಂಧಲೆ; 5 ಲಕ್ಷ ರೂ ಗೆ ಬೇಡಿಕೆ, 1 ಲಕ್ಷ ವಸೂಲಿ! ಶಾಕಿಂಗ್ ಘಟನೆ

'ಇತಿಹಾಸ ನಿಮ್ಮನ್ನು ಇನ್ನಷ್ಟು ಗೌರವದಿಂದ ನೆನಪಿಸಿಕೊಳ್ಳಲಿದೆ'; Agarkarಗೆ ಗೇಟ್ ಪಾಸ್`, ಗಂಭೀರ್‌ ಭಾವುಕ ಸಂದೇಶ!

Bigg Boss Kannada: ಟಾಸ್ಕ್ ವೇಳೆ ಕುಸಿದು ಬಿದ್ದ ನಟಿ ಸಂಗೀತಾ ಭಟ್; ಆರೋಗ್ಯದಲ್ಲಿ ಏರುಪೇರು! ವಿಡಿಯೋ ವೈರಲ್